ಸಿರಿಧಾನ್ಯ ಆರೋಗ್ಯ ವೃದ್ಧಿಗೆ ಪೂರಕ

Team Udayavani, Mar 22, 2017, 4:26 PM IST

gul2.jpg

ಆಳಂದ: ಆರೋಗ್ಯ ವೃದ್ಧಿಗೆ ಪೂರಕವಾಗುವ ಸಿರಿಧಾನ್ಯ ಮಹತ್ವ ಕುರಿತು ಕಲಬುರಗಿ ಸಿರಿ ಧಾನ್ಯಗಳ ಸಂಸ್ಕೃರಣಾ ಘಟಕ, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ| ರಾಜು ತೆಗ್ಗೆಳ್ಳಿ, ಸಸ್ಯರೋಗ ಶಾಸ್ತ್ರಜ್ಞ ಜಹೀರ್‌ ಅಹ್ಮದ್‌ ಮಾಹಿತಿ ನೀಡಿದ್ದಾರೆ.

ಸಿರಿಧಾನ್ಯಗಳೆಂದರೆ ನಮಗೆ ಗೊತ್ತಿರುವ ಹಾಗೆ ರಾಗಿ, ನವಣೆ, ಸಜ್ಜೆ, ಊದಲು, ಬರಗು, ಕೊರಲೆ ಮುಂತಾದವುಗಳು. ಇವುಗಳನ್ನು ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಬೆಳೆಯುತ್ತಾರೆ. ಈ ಬೆಳೆಗಳನ್ನು ಕಡಿಮೆ ಮಳೆ ಬೀಳುವ ಪ್ರದೇಶದಲ್ಲಿಯೂ ಬೆಳೆಯಬಹುದು.

ಇವು ಪೂರ್ವಿಕರ ಆಹಾರವಾಗಿದ್ದು ಇದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಇವು ಪ್ರಾಣಿಗಳಿಗೂ ಉತ್ತಮ ಆಹಾರವಾಗಿವೆ. ಜನರಲ್ಲಿ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಬೊಜ್ಜು, ಕ್ಯಾನ್ಸರ್‌ನಂತ ರೋಗಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇವೆಲ್ಲವುಗಳ ತಡೆಗೆ ಸಿರಿಧಾನ್ಯಗಳ ಬಳಕೆ ರಾಮಬಾಣವಾಗಿದೆ. 

ಆಹಾರದಲ್ಲಿ ಸಿರಿ ಧಾನ್ಯಗಳ ಮಹತ್ವ: ದಿನನಿತ್ಯ ಬಳಸುವ ಅಕ್ಕಿ ಮತ್ತು ಗೋಧಿಗೆ ಹೋಲಿಸಿದಾಗ ಸಿರಿಧಾನ್ಯಗಳಲ್ಲಿ ಪ್ರೋಟಿನ್‌, ಕೊಬ್ಬು, ಸುಣ್ಣ, ನಾರು, ಖನಿಜ ಮತ್ತು ರಂಜಕ ಹೆಚ್ಚು ಪ್ರಮಾಣದಲ್ಲಿ ಕಂಡುಬರುತ್ತದೆ. ಸಿರಿಧಾನ್ಯಗಳಲ್ಲಿ ನಾರಿನ ಅಂಶ ಶೇ.1ರಿಂದ 9ರಷ್ಟು ಇದ್ದು, ದೇಹದಲ್ಲಿರುವ ಕೊಲೆಸ್ಟಾಲ್‌, ಟ್ರೈಗ್ಲಿಸಾರಾಯ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುವುದಕ್ಕೆ ಸಹಾಯಕಾರಿಯಾಗಿದೆ.

ಹೃದಯ ರೋಗ, ಹೆಚ್ಚಿನ ತೂಕ ಸಮಸ್ಯೆಯನ್ನು ನಿವಾರಿಸುತ್ತದೆ. ಆದ್ದರಿಂದ ನವಣೆ ಉತ್ಪನ್ನಗಳು ಸಕ್ಕರೆ ರೋಗಿಗಳಿಗೆ ಅವಶ್ಯ. ರಾಗಿಯಲ್ಲಿ ಕೂಡ ಹೆಚ್ಚಿನ ಸುಣ್ಣದಂಶ, ರಂಜಕ ಇರುವುದರಿಂದ ಎಲಬು, ಹಲ್ಲು ಗಟ್ಟಿಯಾಗುತ್ತವೆ. ಹೀಗಾಗಿ ರಾಗಿ ಚಿಕ್ಕ ಮಕ್ಕಳ ಆಹಾರದಲ್ಲಿ ಪ್ರಮುಖ ಸ್ಥಾನ ಹೊಂದಿದೆ. ಅದೇ ರೀತಿ ಸಜ್ಜೆ, ಸಾವೆಯಲ್ಲಿ ಹೆಚ್ಚಿನ ಕಬ್ಬಿಣ ಅಂಶವಿದ್ದು ರಕ್ತ ಹೀನತೆ ತಡೆಗಟ್ಟುತ್ತದೆ. 

ರಾಗಿ ತಿಂದವ ನಿರೋಗಿ: ರಾಗಿಯಲ್ಲಿ ಕಡಿಮೆ ಕೊಬ್ಬಿನ ಅಂಶವಿದೆ. ಪ್ರತಿ 10ಗ್ರಾಂ.ನಲ್ಲಿ 13ಗ್ರಾಂ ಮಾತ್ರ. ಆದ್ದರಿಂದ ಹೆಚ್ಚು ತೂಕ ಹೊಂದಿದವರಿಗೆ ರಾಗಿ ಉತ್ತಮ. ಅದೇ ರೀತಿ ಹೆಚ್ಚಿನ ಪ್ರಮಾಣದಲ್ಲಿ ಸುಣ್ಣದಂಶ ಹೊಂದಿದ್ದು ಹಲ್ಲು, ಎಲಬುಗಳು ಗಟ್ಟಿಯಾಗಲು ಅನುಕೂಲವಾಗುತ್ತದೆ. ರಾಗಿಯಲ್ಲಿ ಪ್ರತಿ 10ಗ್ರಾಂ.ಗೆ 330 ಮಿ.ಗ್ರಾಂ ಸುಣ್ಣದಂಶ ಇರುತ್ತದೆ. ನಾರಿನಂಶ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಹೀಗಾಗಿ ಮಲಬದ್ಧತೆ ಮತ್ತು ಹ್ರದಯ ರೋಗಗಳನ್ನು ಇದು ತಡೆಗಟ್ಟುತ್ತದೆ.  

ಸಿರಿಧಾನ್ಯಗಳ ಸಂಸ್ಕರಣೆ: ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಪೂರೈಸುವ ದೃಷ್ಟಿಯಿಂದ ಸಮರ್ಪಕ ಕೊಯ್ಲೋತ್ತರ ಸಂಸ್ಕರಣೆ ಪದ್ಧತಿಗಳು ಹೆಚ್ಚಿನ ಸಹಾಯಕ್ಕೆ ಬರುತ್ತವೆ. ಈಗ ಬೆಳೆಯಲಾಗುತ್ತಿರುವ ಆಹಾರ ಧಾನ್ಯಗಳನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಪ್ರಾಥಮಿಕ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ರೈತರಿಗೂ ಸರಿಯಾದ ಲಾಭ ದೊರೆಯುತ್ತಿಲ್ಲ. 

ಪ್ರತಿವರ್ಷ 20 ಬಿಲಿಯನ್‌ ಮೌಲ್ಯದ ಆಹಾರ ಧಾನ್ಯ ಹಾಳು: ಪ್ರತಿವರ್ಷ ಭಾರತದಲ್ಲಿ ಸುಮಾರು 20ಬಿಲಿಯನ್‌ ಮೌಲ್ಯದ ಆಹಾರ ಧಾನ್ಯ ಹಾಳಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಹೊಲಗಳಲ್ಲಿ ಸಂಗ್ರಹಣೆ, ನಿರ್ವಹಣೆ ಪದ್ಧತಿ ಹಾಗೂ ಇನ್ನಿತರೆ ಮೂಲಭೂತ ವ್ಯವಸ್ಥೆಗಳಾದ ವಿದ್ಯುತ್‌, ಸಾಗಾಣಿಕೆ, ಶೀತಲೀಕರಣ ಘಟಕ, ಕೊಯ್ಲು ನಂತರದ ಜ್ಞಾನ ಬಳಕೆ ಇಲ್ಲದಿರುವುದು. ಬೇರೆ ಧಾನ್ಯಗಳಿಗೆ ಹೋಲಿಸಿದಾಗ ಸಿರಿಧಾನ್ಯಗಳ ಸಂಗ್ರಹಣಾ ಸಾಮರ್ಥ್ಯ ಹೆಚ್ಚು. 

ಅಕ್ಕಿ ಹಾಗೂ ಗೋಧಿಗೆ ಬಳಸಲಾಗುವ ಮಷಿನ್‌ಗಳನ್ನು ಸಿರಿಧಾನ್ಯಗಳಿಗೂ ಉಪಯೋಗಿಸಲಾಗುತ್ತದೆ. ಹೊರ ಕವಚ ಹಾಗು ಉಳಿದಿರುವ ಧಾನ್ಯಗಳನ್ನು ಕುಟ್ಟಿ ಬೇರ್ಪಡಿಸಲಾಗುತ್ತದೆ. ಸಂಸ್ಕರಣಾ ಪದ್ಧತಿ ಹೆಚ್ಚಿನ ಸಮಯ ಹಾಗೂ ಶ್ರಮದಾಯಕ ಆಗಿರುವದರಿಂದ ಸಿರಿಧಾನ್ಯಗಳಾದ ಸಾವೆ, ನವಣೆ ಉಪಯೋಗ ಕಡಿಮೆಯಾಗಿದೆ. ಇಂದಿನ ದಿನಗಳಲ್ಲಿ ಮಾಲ್ಟ ತಯಾರಿಕೆಯಲ್ಲಿ ಸಿರಿ ಧಾನ್ಯಗಳ ಬಳಕೆಯನ್ನು ಕೈಗಾರಿಕೆ ಪ್ರಮಾಣದಲ್ಲಿ ಬಳಸಲಾಗಿದೆ.  

ಸಿರಿಧಾನ್ಯಗಳ ಮೌಲ್ಯವರ್ಧನೆ: ಸಿರಿಧಾನ್ಯಗಳಿಂದ ಮೌಲ್ಯವರ್ಧಿತ ಆಹಾರಗಳನ್ನು ತಯಾರಿಸಬಹುದು. ರಾಗಿ ಇಡ್ಲಿ, ರಾಗಿ ದೋಸಾ, ರಾಗಿ ಮಾಲ್ಟ, ರಾಗಿ ಬಿಸ್ಕೆಟ್‌. ಅದೇ ರೀತಿ ಬೇರೆ ಸಿರಿಧಾನ್ಯಗಳಿಂದ ಅಂದರೆ ನವಣೆ, ಸಾವೆ, ಬರಗು ಇತ್ಯಾದಿಗಳಿಂದ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಬಹುದು. ಸಾಂಪ್ರದಾಯಿಕ ಆಹಾರಗಳಾದ ಹೋಳಿಗೆ, ಅನ್ನ, ಉಪ್ಪಿಟ್ಟು, ಬಿಸಿಬೇಳೆಬಾತ್‌, ದೋಸೆ, ಇಡ್ಲಿಯನ್ನು ತಯಾರಿಸಬಹುದು.

ರೊಟ್ಟಿ, ಚಪಾತಿ, ಚಕ್ಕುಲಿ, ಉಂಡೆ ತಯಾರಿಕೆಯಲ್ಲೂ ಇವುಗಳನ್ನು ಬೆರೆಸಬಹುದು. ಅದೇ ರೀತಿ ಹಲವಾರು ಸಂಸ್ಕರಣಾ ವಿಧಾನಗಳಿಂದ ಅಂದರೆ ಪಾಲಿಶ್‌ ಮಾಡುವುದು, ಹಿಟ್ಟು ಮಾಡುವುದು, ಮೊಳಕೆ ಕಟ್ಟುವುದು, ಅರಳು ಹುರಿಯುವುದರಿಂದ ಉತ್ತಮ ಆಹಾರ ಪಡೆಯಬಹುದು. ಸಾವೆ ಮತ್ತು ನವಣೆಯಲ್ಲಿ ಶೇ.8ರಷ್ಟು ನಾರಿನಂಶ ಇದೆ. ಹೀಗಾಗಿ ಹೆಚ್ಚು ತೂಕ ಇರುವವರಿಗೆ ಹಾಗೂ ಸಕ್ಕರೆ ರೋಗಿಗಳಿಗೆ ಸೂಕ್ತ ಆಹಾರವಾಗಿದೆ. 

* ಮಹಾದೇವ ವಡಗಾಂವ 

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.