
ಆರನೇಯ ಗ್ಯಾರೆಂಟಿ ಪಕ್ಕಾ: ಸಚಿವ Priyank Kharge
Team Udayavani, May 30, 2023, 2:36 PM IST

ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ತಗೆದುಕೊಳ್ಳಲಾಗುವುದು ಎಂದು ನಾನು ಆರನೇ ಗ್ಯಾರಂಟಿ ನೀಡಿದ್ದೆ. ಅದೀಗ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೆಕೆಆರ್ ಡಿಬಿ ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ 12 – 12 – 2022 ರಂದು ಹಿಂದಿನ ಸರ್ಕಾರಕ್ಕೆ ಪತ್ರ ಬರೆದು ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ 431 ಕೋಟಿ ಅವ್ಯವಹಾರದ ಬಗ್ಗೆ 1- 6 -2022 ರಂದು ಪತ್ರ ಬರೆಯಲಾಗಿತ್ತು. ನೂತನ ಸರ್ಕಾರ ಬಂದ ನಂತರ ಹಿಂದಿನ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರಗಳನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ನಂತರ ತಕ್ಷಣ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:Bantwala: ಆಟೋ ರಿಕ್ಷಾ- ಬೈಕ್ ಮುಖಾಮುಖಿ ಢಿಕ್ಕಿ; ನಾಲ್ವರಿಗೆ ಗಾಯ
ಭ್ರಷ್ಟಾಚಾರದಲ್ಲಿ ಯಾರೇ ಮುಳುಗಿದ್ದರೂ ಸಹ, ನಮ್ಮ ಕಾಂಗ್ರೆಸ್ ಸರ್ಕಾರವು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

371 ಜೆ ಕಲಂ ಜಾರಿಗೆ ಕಲಬುರಗಿಯಲ್ಲಿ ಶೀಘ್ರವೇ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?