ನಾಯಿಗಳಿಗೆ ಸಿಎಂ ಬಿಎಎಸ್ ವೈ, ಶಾಸಕ ಯತ್ನಾಳ್ ಭಾವಚಿತ್ರ ಹಾಕಿ ಆಕ್ರೋಶ
Team Udayavani, Dec 5, 2020, 12:20 PM IST
ಕಲಬುರಗಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಸೈನ್ಯ ಕಾರ್ಯಕರ್ತರು ನಗರದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಾಯಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭಾವಚಿತ್ರ ಹಾಕಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:ಕಲಬುರಗಿ: ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ರದ್ದು ಮಾಡಲೇಬೇಕು, ಕನ್ನಡ ಪರ ಸಂಘಟನೆಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ ಯಾತ್ನಾಳ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.