ಸ್ವದೇಶಿ ಚಳವಳಿ ಆರಂಭವಾಗಲಿ: ಮಾನುಸಗರ್‌


Team Udayavani, Feb 17, 2019, 8:33 AM IST

gul-5.jpg

ಕಲಬುರಗಿ: ಮಕ್ಕಳಿಗೆ ಪರಕೀಯ ಶಿಕ್ಷಣ ಮಾದರಿ ವ್ಯವಸ್ಥೆ ಜಾರಿಗೆ ಬಂದಿರುವುದರಿಂದ ನಾಡು-ದೇಶ ಪ್ರೇಮ, ಪ್ರಾಮಾಣಿಕತೆ ಕೊರತೆ ಎದ್ದುಕಾಣುತ್ತಿದೆ. ನಮ್ಮ ನೆಲದ ಮೂಲ ಸಂಸ್ಕೃತಿ ಸಂಪೂರ್ಣ ಮಾಯವಾಗಿ ನಿರುತ್ಸಾಹವಾಗಿದೆ. ಆದ್ದರಿಂದ ಸ್ವದೇಶಿ ಚಳವಳಿ ಆರಂಭಿಸುವುದರ ತುರ್ತು ಅವಶ್ಯಕತೆ ಇದೆ ಎಂದು ಸಾಹಿತಿ, ಪರಿಸರ ಪ್ರೇಮಿ ಪ. ಮಾನುಸಗರ್‌ ಹೇಳಿದರು.

ಇಲ್ಲಿನ ಜಯನಗರದ ಅನುಭವ ಮಂಟಪದಲ್ಲಿ ಶನಿವಾರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬ-ಹರಿ ದಿನಗಳಲ್ಲಿ ನಡೆಯುತ್ತಿದ್ದ ಜನಕಲೆಗಳು ನಿಂತು ಹೋಗಿವೆ. ಇದರಿಂದ ಅನಾದಿಕಾಲದಿಂದ ಬಳುವಳಿಯಾಗಿ ಬಂದ ದೇಶಿಯ ಶ್ರೀಮಂತಿಕೆ ಸೊರಗುತ್ತಾ ಸಾಗಿದೆ ಎಂದು ಹೇಳಿದರು.

ಮೊಬೈಲ್‌, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಬಿಗ್‌ ಬಜಾರ್‌, ಪಿಜ್ಜಾ ಸಂಸ್ಕೃತಿಗೆ ಆಕರ್ಷಿತರಾಗಿ ಅವುಗಳ ಹಿಂದೆ ಸಾಗಲಾಗುತ್ತಿದೆ. ಇದರಿಂದ ಮನುಷ್ಯ ಸಮೂಹ ಸಂಬಂಧ ಕಳಚಿಕೊಳ್ಳುತ್ತಾ ಒಬ್ಬಂಟಿ ಆಗುತ್ತಿದ್ದಾನೆ ಎಂದು ಕಳವಳ ವ್ಯಕ್ತಪಡಿಸಿದರು.

ನಮ್ಮನ್ನಾಳುವ ಸರ್ಕಾರಗಳು ಖಾಸಗೀಕರಣವನ್ನು ಮುಕ್ತವಾಗಿ ಸ್ವಾಗತಿಸಿ ಪ್ರೋತ್ಸಾಹಿಸುತ್ತಿವೆ. ಖಾಸಗೀಕರಣ ಪ್ರಬಲಗೊಂಡು ಸರ್ಕಾರಗಳು ತನ್ನ ಹಿಡಿತ ಸಾಧಿಸುವಲ್ಲಿ ವಿಫಲಗೊಂಡಿವೆ. ಪರಿಣಾಮ ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಅತ್ಯಂತ ವಿಷಾದದ ಸಂಗತಿ ಎಂದರು.

ತಾಲೂಕಿನಲ್ಲಿರುವ ಕೋಟೆ, ಕೊತ್ತಲುಗಳು ನಶಿಸುತ್ತಿವೆ. ಅವುಗಳನ್ನು ಪುನರುಜ್ಜೀವನಗೊಳಿಸಿ, ಪ್ರೇಕ್ಷಣೀಯ ಸ್ಥಳಗಳನ್ನಾಗಿ ಅಭಿವೃದ್ಧಿ ಪಡಿಸುವ, ಪ್ರವಾಸಿಗರನ್ನು ಸೆಳೆಯುವ ಕಾರ್ಯವಾಗಬೇಕು. ನಮ್ಮದು ಭಾವೈಕ್ಯತೆಯ ನಾಡು, ಬೀಡು ಎನ್ನಿಸಿಕೊಂಡಿದೆ. ಈ ಹಿರಿಮೆ, ಗರಿಮೆಯೊಂದಿಗೆ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಕರೆ ನೀಡಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಜಾನಪದ ವಿದ್ವಾಂಸ ಡಾ| ವೀರಣ್ಣ ದಂಡೆ, ನಮ್ಮ ಪ್ರದೇಶವು ಕನ್ನಡದ ಕಲೆ, ಭಾಷೆಗೆ ಹದವಾದ ನೆಲೆಯಾಗಿದೆ. ಕನ್ನಡಕ್ಕಾಗಿ ಅನೇಕ ಮಹನೀಯರು ದುಡಿದಿದ್ದಾರೆ. ನೈಜ ಕನ್ನಡವನ್ನು ಉಳಿಸಿಕೊಂಡು ಹೋಗುವುದು ಹಿಂದೆಂದಿಗಿಂತಲೂ ಅತ್ಯವಶ್ಯಕವಾಗಿದೆ ಎಂದರು. 

ಸಾನ್ನಿಧ್ಯ ವಹಿಸಿದ್ದ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು ಮಾತನಾಡಿ, ಕನ್ನಡ ಸಾಹಿತ್‌ ಪರಿಷತ್‌ ಇತ್ತೀಚಿಗೆ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆಗಳನ್ನು ಆರಂಭಿಸಿದೆ. ಇದರಿಂದ ಗ್ರಾಮೀಣ ಭಾಗದ ಸಾಹಿತ್ಯಾಸ್ತಕರು, ಯುವ ಲೇಖಕರಿಗೆ ವೇದಿಕೆ ಸಿಕ್ಕಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಶರಣಬಸವ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಮುಖ್ಯಸ್ಥ ಡಾ| ಎಂ.ಎಸ್‌.ಪಾಟೀಲ “ನೆನಪು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಜಿಲ್ಲಾ ಬಸವ ಸಮಿತಿ ಅಧ್ಯಕ್ಷೆ ಡಾ| ವಿಲಾಸವತಿ ಖೂಬಾ ಆರು ಕಾದಂಬರಿಗಳನ್ನು ಬಿಡುಗಡೆಗೊಳಿಸಿದರು. ಎಂ.ವೈ. ಸುರಪುರ ಹಾಗೂ ತಂಡದವರು ನಾಡಗೀತೆ ಹಾಡಿದರು.

ತಾಲೂಕು ಕಸಾಪ ಅಧ್ಯಕ್ಷ ಸಿ.ಎಸ್‌. ಮಾಲಿಪಾಟೀಲ ಸ್ವಾಗತಿಸಿದರು. ಟಿ.ಸಿ.ಮಾಲಿಪಾಟೀಲ ನಿರೂಪಿಸಿದರು. ಡಾ| ಸಂಗಮೇಶ ಹಿರೇಮಠ ವಂದಿಸಿದರು. 

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18vaccine

ವ್ಯಾಕ್ಸಿನೇಶನ್‌; ಗುರಿ ತಲುಪಲು ಹರಸಾಹಸ!

14globaization

ಎಲ್ಲೆಲ್ಲೂ ಜಾಗತೀಕರಣದ ಪ್ರಭಾವ: ವೀರೇಂದ್ರ ಕುಮಾರ

13kalaburugi

5.27 ಕೋಟಿ ಮೌಲ್ಯದ ನಕಲಿ ಕ್ರಿಮಿನಾಶಕ-ಗೊಬ್ಬರ ಜಪ್ತಿ

12Insurance,

ಸಂಕಷ್ಟಕ್ಕೆ ಸಿಲುಕಿದ ಕೃಷಿಕನ ನೆರವಿಗೆ ಸಿಗದ ವಿಮೆ

11shed

ಶೆಡ್‌ ನಿರ್ಮಿಸಲಿಲ್ಲ-ತಾಡಪತ್ರಿಯೇ ಗತಿಯಾಯ್ತು!

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.