ವಿದ್ಯಾರ್ಥಿಗಳಿಗೆ ರಾಷ್ಟ್ರಪ್ರೇಮ ಅಗತ್ಯ


Team Udayavani, Aug 29, 2017, 10:05 AM IST

gul 1 29.jpg

ಕಲಬುರಗಿ: ಇಂದಿನ ಪರಿಸ್ಥಿತಿಯಲ್ಲಿ ದೇಶದಲ್ಲಿ ಅಭಿಮಾನದ ಕಿಚ್ಚು ಕಡಿಮೆಯಾಗುತ್ತಿದೆ. ಆದ್ದರಿಂದ ಪಠ್ಯ ಮತ್ತು ಸ್ಪರ್ಧೆ ಜತೆಯಲ್ಲಿ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಆಳಂದ ಶಾಸಕ
ಬಿ.ಆರ್‌. ಪಾಟೀಲ ಪ್ರತಿಪಾದಿಸಿದರು. ಆಳಂದ ಪಟ್ಟಣದ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿ ಸಂಘ ಹಾಗೂ ಎನ್‌ಎಸ್‌ಎಸ್‌ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಈಚೆಗೆ ಶಿಸ್ತು ಮಾಯವಾಗುತ್ತಿದೆ. ಬೇಡದ ವಿಷಯಗಳಲ್ಲೂ ತಮ್ಮ ಮಧ್ಯಸ್ಥಿಕೆ ವ್ಯಕ್ತಪಡಿಸುವುದು, ಸಲ್ಲದ ಸಂದರ್ಭಗಳಲ್ಲಿ ಅತಿಯಾದ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸಿಕೊಂಡು ಒದ್ದಾಡುವುದರಿಂದ ಹೊರಬರಬೇಕು. ಇದಕ್ಕೆ ಪಾಲಕರು ಹಾಗೂ ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಅದ್ಯಯನಶೀಲತೆ ಜತೆಯಲ್ಲಿ ಪರಿಸರ ರಕ್ಷಣೆ ಮಾಡಬೇಕಾದ ಅನಿವಾರ್ಯತೆಯೂ ಎದುರಾಗಿದೆ. ಇದರಿಂದಾಗಿ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಡಿ. ಕಲಬುರಗಿ ಮಾತನಾಡಿ, ಈಗ ವಿದ್ಯಾರ್ಥಿಗಳ ಹೆಗಲ ಮೇಲೆ ಗುರುತರವಾದ ಜವಾಬ್ದಾರಿಗಳಿವೆ. ಒಂದೆಡೆ ಶೈಕ್ಷಣಿಕ ಸ್ಪರ್ಧೆ ಮತ್ತೂಂದೆಡೆ ಸಮಾಜದಲ್ಲಿನ ಸವಾಲುಗಳು ಎದುರಿಸುವ ನಿಟ್ಟಿನಲ್ಲಿ ತಯಾರಿ ನಡೆಸಬೇಕಾಗಿದೆ. ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸಧೃಢತೆ ಬರುತ್ತದೆ. ಇದು ನಿಮ್ಮನ್ನು ಜೀವನದಲ್ಲಿ
ಯಶಸ್ವಿ ಜೀವನ ನಡೆಸಲು ಸಹಕಾರ ನೀಡುತ್ತದೆ ಎಂದು ಹೇಳಿದರು. ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಹಾಗೂ ಪ್ರಾಧ್ಯಾಪಕ ಭಗವಂತರಾಯ ಬಳುಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೇವಿ ಸುರಗಾಳಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧಿಕಾರಿ ಡಾ| ಸಂಜೀವ ರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಕಾಶಿನಾಥ ಬಿರಾದಾರ ಇದ್ದರು. ಸುಭಾಶ್ಚಂದ್ರ ಆರ್‌. ಕಾರ್ಯಕ್ರಮ ನಿರೂಪಿಸಿದರು. ಬಸವರಾಜ ಅಲ್ದಿ ವಂದಿಸಿದರು.

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9grama

ಜನಧ್ವನಿಯಾಗಿ ಹೋರಾಟಕ್ಕೆ ಮುಂದಾಗಿ

7toilet

ಇನ್ನೂ ತೊಲಗಿಲ್ಲ ಬಯಲು ಶೌಚದ ಪಿಡುಗು

5protest

ಕಬ್ಬಿನ ದರ ನಿಗದಿಗೆ ರೈತರ ಪಟ್ಟು; ಧರಣಿ ಮುಂದುವರಿಕೆ

4bank

ಮಧ್ಯಾಮಾವಧಿ ಸಾಲ ವಿತರಣೆಗೆ

3fall

ನೋಡುಗರ ಕಣ್ಮನ ಸೆಳೆಯುತ್ತಿದೆ ನೀರಿನ ಝರಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.