ನಿಲ್ಲುವುದೇ ಕಬ್ಬು ಬೆಳೆಗಾರರ ಪ್ರತಿಭಟನೆ


Team Udayavani, Nov 11, 2017, 12:53 PM IST

sugarcane_deaths_mandya.jpg

ಅಫಜಲಪುರ: ರೈತರ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ನೀಡುವುದಿಲ್ಲ, ರೈತ ಪರ ಸಂಘಟನೆಗಳು ಪ್ರತಿಭಟನೆ ನಿಲ್ಲಿಸುವುದಿಲ್ಲ, ನೂರಾರು ಬೇಡಿಕೆಗಳಲ್ಲಿ ಕೆಲವಾರು ಬೇಡಿಕೆಗಳು ಈಡೇರಿದರೆ ಖುಷಿ ಪಡುವ
ರೈತರಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಈಗ ರೈತರ ಬೇಡಿಕೆ ಈಡೆರುವುದೇ? ಕಬ್ಬು ಬೆಳೆಗಾರರ ಪ್ರತಿಭಟನೆ ನಿಲ್ಲುವುದೇ? ಎನ್ನುವ ಪ್ರಶ್ನೆ ಕಾಡತೊಡಗಿದೆ.

ತಾಲೂಕಿನ ಹವಳಗಾದಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಎದುರು ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕೆಂದು
ತಾಲೂಕಿನ ಕಬ್ಬು ಬೆಳೆಗಾರ ರೈತರು ಸಂಘಟನೆ ಮಾಡಿಕೊಂಡು ಧರಣಿ ಕುಳಿತಿದ್ದಾರೆ. ಕಾರ್ಖಾನೆಯವರು ಕಬ್ಬಿಗೆ ತೀರಾ ಕಡಿಮೆ ದರ ನಿಗದಿಪಡಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೇಣುಕಾ ಸಕ್ಕರೆ ಕಾರ್ಖಾನೆಯವರು ಪ್ರತಿ ಟನ್‌ ಕಬ್ಬಿಗೆ 2200 ರೂಪಾಯಿ ದರ ನಿಗದಿಗೊಳಿಸಿದ್ದಾರೆ, ಬೇರೆ ಕಡೆಯಲ್ಲಿ 3100 ರೂ. ದರ
ನಿಗದಿಗೊಳಿಸಿದ್ದಾರೆ. ಹೀಗಾಗಿ ರೈತರು ಮತ್ತಷ್ಟು ಸಹನೆ ಕಳೆದುಕೊಳ್ಳುವಂತಾಗಿದೆ.

ಕಬ್ಬು ನುರಿಸುವುದು ಶುರುವಾಗಿದೆ ಎಂದು ರೈತರಿಗೆ ಗೊತ್ತಾದ ತಕ್ಷಣ ಕಬ್ಬು ಕಟಾವಿಗೆ ಮುಂದಾಗಿದ್ದಾರೆ. ಅಲ್ಲದೆ ಅನೇಕ ರೈತರು ಕಬ್ಬು ಕಟಾವು ಮಾಡಿ ಕಾರ್ಖಾನೆ ಮುಂದೆ ತಂದು ಕಬ್ಬಿನ ಗಾಡಿಗಳನ್ನು ನಿಲ್ಲಿಸಿದ್ದಾರೆ. ಕಾರ್ಖಾನೆಯ ಧೋರಣೆ ಖಂಡಿಸಿ ತಾಲೂಕು ಕಬ್ಬು ಬೆಳೆಗಾರರ ಸಂಘದವರು ಕಾರ್ಖಾನೆಯ ಮುಂದೆ ಎರಡು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪ್ರತಿಭಟನೆ ಎರಡು ದಿನ ದಾಟಿ ಮೂರನೆ ದಿನಕ್ಕೆ ಕಾಲಿಟ್ಟಿದೆ. ಆದರೂ ಕಾರ್ಖಾನೆಯವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ತಾಲೂಕಿನ ಶಾಸಕರು, ಮಾಜಿ ಶಾಸಕರು, ಜಿ.ಪಂ ಉಪಾದ್ಯಕ್ಷರು, ಸದಸ್ಯರು ಅನೇಕ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಮಠಗಳ ಮಠಾಧಿಶರು ಬಂದು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. 

ಆದರೆ ಕಾರ್ಖಾನೆಯವರು ಮಾತ್ರ ಪ್ರತಿಭಟನಾ ನಿರತರ ಕೂಗು ಕೇಳುತ್ತಿಲ್ಲ ಎಂದು ಪ್ರತಿಭಟನಾ ನಿರತ ರೈತರು
ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಾಲೂಕಿನ ಏಕೈಕ ಸಕ್ಕರೆ ಕಾರ್ಖಾನೆಯಾಗಿರುವ ರೇಣುಕಾ ಸಕ್ಕರೆ ಕಾರ್ಖಾನೆ ತಾಲೂಕಿನ ರೈತರ ಹಿತ ಕಾಪಾಡುವುದಕ್ಕಿಂತಲೂ ಕಾರ್ಖಾನೆಯ ಲಾಭದ ಕಡೆಗೆ ಹೆಚ್ಚಿನ ಒಲವು ತೋರಿಸದಂತೆ ಕಾಣುತ್ತಿದೆ. ಒಟ್ಟಿನಲ್ಲಿ ತಾಲೂಕಿನ ಕಬ್ಬು ಬೆಳೆಗಾರರ ಸಂಕಷ್ಟಗಳಿಗೆ ಕೊನೆ ಇಲ್ಲದಂತಾಗಿದ್ದು ವರ್ಷದಿಂದ ವರ್ಷಕ್ಕೆ ರೈತರ ಸಮಸ್ಯೆಗಳ ಸರಮಾಲೆ ಹೆಚ್ಚಾಗುತ್ತಿದೆ. 
ಮಲ್ಲಿಕಾರ್ಜುನ ಹಿರೇಮಠ್

ಮಾಲೀಕರಿಂದ ಭರವಸೆ : ರೈತರ ಪ್ರತಿಭಟನೆ ಕುರಿತು ಆಡಳಿತಾ ಕಾರಿಗಳೊಂದಿಗೆ ಮತ್ತು ಕಾರ್ಖಾನೆಯ ಮಾಲೀಕರೊಂದಿಗೆ ಮಾತನಾಡಿದ್ದೇನೆ. ಅವರು ಚರ್ಚಿಸಿ ರೈತರ ಸಮಸ್ಯೆಗಳಿಗೆ ಉತ್ತರ ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಕಬ್ಬು ಕಟಾವು ಮಾಡಿರುವ ರೈತರಿಗೆ ನಮ್ಮ ಕೇನ್‌ ಮ್ಯಾನೇಜರ್‌ ಅವರು ಕಬ್ಬು ಹಾಳಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಿದ್ದಾರೆ.
 ಎನ್‌. ಮಲ್ಲಿಕಾರ್ಜುನ, ಜಿ.ಎಂ ರೇಣುಕಾ ಸಕ್ಕರೆ ಕಾರ್ಖಾನೆ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.