ಜೇವರ್ಗಿ ಅಭಿವೃದ್ಧಿಗೆ ಜೆಡಿಎಸ್‌ ಬೆಂಬಲಿಸಿ

Team Udayavani, May 7, 2018, 10:22 AM IST

ಜೇವರ್ಗಿ : ಹಿಂದುಳಿದ ಜೇವರ್ಗಿ ತಾಲೂಕಿನ ಅಭಿವೃದ್ಧಿ ಆಗಬೇಕಾದರೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲಿಸುವಂತೆ ಜೆಡಿಎಸ್‌ ಅಭ್ಯರ್ಥಿ ಕೇದಾರಲಿಂಗಯ್ಯ ಹಿರೇಮಠ ಮನವಿ ಮಾಡಿದರು. ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹಾಗೂ ಬಿಜೆಪಿಗೆ ಅವಕಾಶ ಕೊಟ್ಟು ನೋಡಲಾಗಿದೆ. ಈ ಎರಡೂ ಪಕ್ಷಗಳಿಂದ ತಾಲೂಕಿನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಶಾಸಕ ಡಾ| ಅಜಯಸಿಂಗ್‌ ಕೇವಲ ಸುಳ್ಳು ಆಶ್ವಾಸನೆ ನೀಡುತ್ತಾ ಜನರನ್ನು ವಂಚಿಸಿದ್ದಾರೆ. ರೈತರ, ದೀನ ದಲಿತರ, ಮಹಿಳೆಯರ, ಬಡವರ, ಹಿಂದುಳಿದ ವರ್ಗದವರ ಏಳ್ಗೆಗಾಗಿ ಜೆಡಿಎಸ್‌ಗೆ ಬೆಂಬಲ ನೀಡಬೇಕು. ಕಳೆದ ಮೂರು ಚುನಾವಣೆಗಳಲ್ಲಿ ನನಗೆ ಸೋಲಾದರೂ ಹೆದರದೆ ರೈತ ಪರ ಹೋರಾಟ ಮಾಡುತ್ತಾ ಬಂದಿದ್ದೇನೆ. ದಯಮಾಡಿ ಬರುವ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಬೆಂಬಲಿಸಿ ಮತ ನೀಡುವಂತೆ ಮನವಿ ಮಾಡಿದರು.

ಮುಖಂಡರಾದ ಶಿವಾನಂದ ದ್ಯಾಮಗೊಂಡ, ಮಲ್ಲಿಕಾರ್ಜುನ ಕುಸ್ತಿ, ಎಸ್‌.ಎಸ್‌.ಸಲಗರ, ಶಂಕರ ಕಟ್ಟಿಸಂಗಾವಿ, ಅಲ್ಲಾಪಟೇಲ ಹೂಡಾ, ಸದಾನಂದ ಪಾಟೀಲ, ತಮ್ಮಣ್ಣ ಬಾಗೇವಾಡಿ, ದೇವಿಂದ್ರಪ್ಪಗೌಡ ಸರಕಾರ, ನಿಂಗಣ್ಣ ರದ್ದೇವಾಡಗಿ, ಮಹಿಬೂಬ ಇನಾಮದಾರ, ಸಿದ್ದು ಮಾವನೂರ, ಶಿವಶಂಕರ ಜವಳಗಿ ಹಾಗೂ ಮತ್ತಿತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ