ಶಾಂತಿಗೆ ಸಹಕಾರ-ಅಶಾಂತಿಗೆ ಕಡಿವಾಣ


Team Udayavani, Aug 22, 2017, 10:53 AM IST

gul 4.jpg

ವಾಡಿ: ಸಾಂಪ್ರದಾಯಿಕ ಹಬ್ಬಗಳನ್ನು ಶಾಂತಿ ಮತ್ತು ಸಹೋದರತೆಯಿಂದ ಆಚರಿಸುವುದಾದರೆ ಸಹಕಾರ
ನೀಡುತ್ತೇವೆ. ಆಚರಣೆ ಎಂಬುದು ಅಶಾಂತಿಗೆ ಕಾರಣವಾಗುವಂತಿದ್ದರೆ ಕಿಡಿಗೇಡಿಗಳಿಗೆ ಕಡಿವಾಣ ಹಾಕಲು ಕಾನೂನು ಕ್ರಮಕ್ಕೆ ಮುಂದಾಗಲು ಹಿಂದೆಮುಂದೆ ನೋಡುವುದಿಲ್ಲ ಎಂದು ಚಿತ್ತಾಪುರ ಸಿಪಿಐ ಶಂಕರಗೌಡ ಪಾಟೀಲ ಎಚ್ಚರಿಕೆ ನೀಡಿದರು. ಗಣೇಶ ಚತುರ್ಥಿ ಹಾಗೂ ಬಕ್ರೀದ್‌ ಹಬ್ಬಗಳ ನಿಮಿತ್ತ ಪಟ್ಟಣದ ಪೊಲೀಸ್‌ ಠಾಣೆ ಮೈದಾನದಲ್ಲಿ ಸೋಮವಾರ ಸಂಜೆ ಏರ್ಪಡಿಸಲಾಗಿದ್ದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬಗಳಂದು ಕುಟುಂಬ ಸದಸ್ಯರಿಂದ ಬೇರ್ಪಟ್ಟು ಬಂದೋಬಸ್ತ್ ಮಾಡುವ ಜತೆಗೆ ಸ್ನೇಹಪೂರ್ವಕವಾಗಿ ಸಾರ್ವಜನಿಕರೊಂದಿಗೆ ಬರೆಯುತ್ತೇವೆ. ಪೊಲೀಸ್‌ ಮುಕ್ತ ಹಬ್ಬಗಳ ಆಚರಣೆಯಾದಾಗ ಮಾತ್ರ ಕೋಮು ಸೌಹಾರ್ಧತೆಗೆ ಅರ್ಥ ಬರುತ್ತದೆ ಎಂದು ಹೇಳಿದರು. ಸಾರ್ವಜನಿಕವಾಗಿ ರಸ್ತೆಗಳಲ್ಲಿ ನಿಂತು ವಾಹನಗಳನ್ನು ತಡೆದು ಹೆದರಿಸುವ ಮೂಲಕ ಚಂದಾ ವಸೂಲಿ ಮಾಡುವಂತಿಲ್ಲ. ವಿದ್ಯಾ ಬುದ್ಧಿ ಕರುಣಿಸುವ ಗಣೇಶ ಆಚರಣೆ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲೆಗಳನ್ನು ತಪ್ಪಿಸುವುದು ತರವಲ್ಲ. ಇನ್ನೊಬ್ಬರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಆಚರಣೆಗಳಿರಬಾರದು. ವಿದ್ಯುತ್‌ ಅವಘಡಗಳ ಬಗ್ಗೆ ಎಚ್ಚರವಿರಲಿ. ಈಜಲು ಬಾರದವರು ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿಗಿಳಿಯಬಾರದು.
ಪಾಲಕರು ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕು. ಕಾನೂನು ಉಲ್ಲಂಘಿಸುವ ಕೃತ್ಯಕ್ಕೆ ಕೈಹಾಕಬಾರದು ಎಂದು ವಿವರಿಸಿದರು. ಪಿಎಸ್‌ಐ ಸಂತೋಷ ರಾಠೊಡ ಮಾತನಾಡಿ, ಗಣೇಶ ಉತ್ಸವದ ವೇಳೆ ಪಟಾಕಿ ಸಿಡಿಸುವುದು ಮತ್ತು ಗುಲಾಲು ಎರೆಚುವುದನ್ನು ನಿಷೇಧಿ ಸಲಾಗಿದೆ ಎಂದು ಹೇಳಿದರು. ಮುಖಂಡರಾದ ಬಸವರಾಜ ಪಂಚಾಳ,
ಇಂದ್ರಜೀತ ಸಿಂಗೆ, ಫಿರೋಜ್‌ ಖಾನ್‌, ವೀರಣ್ಣ ಯಾರಿ, ಸಿದ್ದಣ್ಣ ಕಲಶೆಟ್ಟಿ, ಬಾಬುಮಿಯ್ನಾ, ಮಹ್ಮದ್‌ ಹುಸೇನ್‌ ರಾವೂರ ಮಾತನಾಡಿ, ಪರಸ್ಪರ ಸಹಕಾರದಿಂದ ಹಬ್ಬಗಳನ್ನು ಆಚರಿಸುತ್ತೇವೆ ಎಂದು ಭರವಸೆ ನೀಡಿದರು. ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮುಕುºಲ್‌ ಜಾನಿ, ಎಎಸ್‌ಐ ಬಾನುದಾಸ, ಉಪ ತಹಶೀಲ್ದಾರ ಮಲ್ಲಿಕಾರ್ಜುನ, ಜೆಸ್ಕಾಂ ಅಧಿಕಾರಿ ಶರಣಪ್ಪ ಎಸ್‌, ಪುರಸಭೆ ಸದಸ್ಯರಾದ ಶರಣು ನಾಟೀಕಾರ, ಮಹ್ಮದ್‌ ಗೌಸ್‌, ಮುಖಂಡರಾದ ರವಿ ಕಾರಬಾರಿ, ಸಿದ್ದು ಪಂಚಾಳ, ಶ್ರವಣಕುಮಾರ ಮೌಸಲಗಿ, ರವಿ ಬಡಿಗೇರ, ಹಣಮಂತ ಹೇರೂರ, ಸತೀಶ ಭಟ್ಟರ್ಕಿ, ಜಗತಸಿಂಗ ರಾಠೊಡ, ಆನಂದ ಇಂಗಳಗಿ, ಬಾಬಾ ಖಾನ್‌, ಬಸವರಾಜ ಕೇಶ್ವಾರ, ಸಾಯಬಣ್ಣ ಜಾಲಗಾರ, ಹಣಮಂತ ಚವ್ಹಾಣ, ನಾಗೇಂದ್ರ ಜೈಗಂಗಾ, ಪೇದೆ ದತ್ತು ಜಾನೆ, ದೊಡ್ಡಪ್ಪ, ಬಸಲಿಂಗಪ್ಪ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಸಿದ್ದಲಿಂಗ ಬಾಳಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.