Udayavni Special

ಪ್ರತಿ ತಿಂಗಳು ಗ್ರಾಹಕರ ಕುಂದುಕೊರತೆ ಸಭೆ ನಡೆಸಿ


Team Udayavani, Feb 12, 2019, 8:11 AM IST

gul-2.jpg

ಕಲಬುರಗಿ: ಗ್ರಾಹಕರ ಹಾಗೂ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಹಾಗೂ ಪರಿಹಾರ ಕಂಡುಕೊಳ್ಳಲು ಜೆಸ್ಕಾಂ ಅಧಿಕಾರಿಗಳು ಪತ್ರಿ ತಿಂಗಳಿಗೊಮ್ಮೆ ಗ್ರಾಹಕರ ಕೊಂದು ಕೊರತೆ ಸಭೆ ನಡೆಸುವಂತೆ ಕರ್ನಾಟಕ ವಿದ್ಯಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭು ದಯಾಳ ಮೀನಾ ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಲಬುರಗಿ ವಿದ್ಯುಚ್ಛಕ್ತಿ ಸರಬರಾಜು ಕಂಪನಿ 2017-18ನೇ ಸಾಲಿನ ಕಾರ್ಯನಿರ್ವಹಣೆ ಪರಿಶೀಲನೆ ಹಾಗೂ 2019-20ನೇ ಅವಧಿಯ ಕಂದಾಯ ಬೇಡಿಕೆ ಮತ್ತು ದರ ಪರಿಷ್ಕರಣೆ ಕುರಿತು ಸಾರ್ವಜನಿಕ ಅಹವಾಲುಗಳ ವಿಚಾರಣೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ತಿಂಗಳು ಕೈಗೊಂಡ ಗ್ರಾಹಕರ ಸಭೆ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು. ಬಹು ಮುಖ್ಯವಾಗಿ ನೀರು ಸರಬರಾಜು ಮಂಡಳಿಯಿಂದ ಜೆಸ್ಕಾಂಗೆ ಬರಬೇಕಾಗಿರುವ 2 ಕೋಟಿ ರೂ.ಗಳು ಬಾಕಿ ಹಣವನ್ನು ಜೆಸ್ಕಾಂ ಅಧಿಕಾರಿಗಳು ಕೂಡಲೇ ಪಡೆಯಬೇಕು ಎಂದು ನಿರ್ದೇಶನ ನೀಡಿದರು.

ಈಗ ಜೆಸ್ಕಾಂ ಸೇರಿದಂತೆ ಎರಡು ಕಡೆ ಗ್ರಾಹಕರ ಅವಹಾಲು ಅಲಿಸಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ಹಾಗೂ ಬೆಂಗಳೂರು ಕಂಪನಿಗಳ ಸಭೆ ನಡೆಸಿದ ಬಳಿಕ ಅಯೋಗ ಸಭೆ ನಡೆಸಿ ದರ ಪರಿಷ್ಕರಣೆ ಬಗ್ಗೆ ತೀರ್ಮಾನ ಕೈಗೊಂಡು ಸೂಕ್ತ ಆದೇಶವಿರುವ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಾ| ಆರ್‌. ರಾಗಪ್ರೀಯ ಮಾತನಾಡಿ, ಜೆಸ್ಕಾಂನಲ್ಲಿ 2019-20ನೇ ಸಾಲಿಗಾಗಿ ನಿರೀಕ್ಷಿಸುತ್ತಿರುವ 968.41 ಕೋಟಿ ರೂ.ಗಳ ಕಂದಾಯ ಕೊರತೆ ಸರಿಪಡಿಸಲು ವಿದ್ಯಚ್ಛಕ್ತಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನೀರಾವರಿ ಪಂಪ್‌ಸೆಟ್‌ಗಳು ಹಾಗೂ ಐಟಿ ಇಂಡಸ್ಟ್ರೀಗಳ ಗ್ರಾಹಕರನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಗ್ರಾಹಕರಿಂದ ಪ್ರತಿ ಯೂನಿಟ್‌ಗೆ 98 ಪೈಸೆ ದರ ಹೆಚ್ಚಳ, ನೀರಾವರಿ ಪಂಪ್‌ಸೆಟ್‌ಗಳಿಂದ 1.35 ರೂ., ಐಟಿ ಇಂಡಸ್ಟ್ರೀಗಳಿಂದ 85 ಪೈಸೆ ದರಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಗ್ರಾಹಕರ ಸ್ನೇಹಿ ಉಪಕ್ರಮಗಳು, ಸುಧಾರಣೆ ಕೆಲಸಗಳು ಹಾಗೂ ಗ್ರಾಹಕರಿಗೆ ಒದಗಿಸುವ ಸೇವೆಗಳ ಗುಣಮಟ್ಟ ಸುಧಾರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಹಾನಿ ತಡೆಯಲು ಅವಶ್ಯಕ ಕಡೆಗಳಲ್ಲಿ ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಸಲಾಗಿದೆ. ಸಮಗ್ರ ಇಂಧನ ಅಭಿವೃದ್ಧಿ ಯೋಜನೆಯಡಿಯಲ್ಲಿ 158 ಸರ್ಕಾರಿ ಮತ್ತು ನಿಗಮದ ಕಚೇರಿಗಳಿಗೆ ಮೇಲ್ಛಾವಣಿ ಸೌರ ವಿದ್ಯುತ್‌ ಘಟಕ ಸ್ಥಾಪಿಸುವ ಕಾಮಗಾರಿ ಪ್ರಗತಿಯಲ್ಲಿದೆ. 11.75 ಲಕ್ಷ ಎಲ್‌.ಇ.ಡಿ. ದೀಪಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಪರಿವರ್ತಕಗಳ ದುರಸ್ತಿಗಾಗಿ 28 ದುರಸ್ತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಮಾಡಿದ ತಪ್ಪಿಗೆ ಗ್ರಾಹಕರ ಮೇಲೆ ವಿದ್ಯುಚ್ಛಕ್ತಿ ದರ ಹೆಚ್ಚಳ ಮಾಡಬಾರದು. ನಿರಂತರ ಜ್ಯೋತಿ ಯೋಜನೆ ಸರಿಯಾದ ರೀತಿಯಲ್ಲಿ ವಿದ್ಯುಚ್ಛಕ್ತಿ ಗ್ರಾಹಕರಿಗೆ ತಲುಪುತ್ತಿಲ್ಲ. ಜೆಸ್ಕಾಂನಿಂದ ಉಚಿತ ಸಹಾಯವಾಣಿ ಸಂಖ್ಯೆಗೆ ವಿದ್ಯುತ್‌ ನಿಲುಗಡೆಯಾದಾಗ ಕರೆ ಮಾಡಿದ್ದಲ್ಲಿ ಯಾರು ಸ್ವೀಕರಿಸುವುದಿಲ್ಲ. ಬೇರೆ ಬೇರೆ ಅನ್ಯ ಮಾರ್ಗಗಳಿಂದ ವಿದ್ಯುತ್‌ ಸೋರಿಕೆ ಆಗುವುದನ್ನು ಜೆಸ್ಕಾಂ ಅಧಿಕಾರಿಗಳು ತಡೆಯಬೇಕು. ವಿದ್ಯುತ್‌ ವ್ಯತ್ಯಯದ ಮುನ್ನ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಕೆಟ್ಟು ಹೋಗಿರುವ ಟ್ರಾನ್ಸ್‌ಫಾರ್ಮರ್‌ ಬದಲಿಸಿ ಹೊಸ ಟ್ರಾನ್ಸ್‌ಫಾರ್ಮರ್‌ ಅಳವಡಿಸಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ವಿದ್ಯಚ್ಛಕ್ತಿ ನಿಯಂತ್ರಣ ಆಯೋಗದ ಸದಸ್ಯ ಎಚ್.ಡಿ. ಅರುಣಕುಮಾರ, ಎಚ್.ಎಂ. ಮಂಜುನಾಥ, ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ಹೀರಾಸಿಂಗ್‌, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿ ಡಾ| ಪಾಂಡುರಂಗ ಬಿ. ನಾಯಕ, ಜಿ. ಕಲ್ಪನಾ, ಸಲಹಾ ಸಮಿತಿ ಸದಸ್ಯ ದೀಪಕ ಗಾಲಾ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ವಿದ್ಯುತ್‌ ಗ್ರಾಹಕರಾದ ಅಪ್ಪಾರಾವ್‌, ಜಗದೀಶ, ಶಾಂತಗೌಡರು, ಭೀಮ ಶೇಖರ, ಬಸ್ವಂತರಾವ, ಸಿದ್ದು ಸುಬೇದಾರ, ಕಲ್ಯಾಣರಾವ, ಸುಭಾಷ ಚಂದ್ರ, ಉಮಾಪತಿ, ಚಂದ್ರಶೇಖರ ಅಹವಾಲು ಸಲ್ಲಿಸಿದರು.

ವಿದ್ಯುತ್‌ ದರ ಹೆಚ್ಚಳಕ್ಕೆ ವಿರೋಧ
ಬರಗಾಲದಿಂದ ಎಲ್ಲ ಪರಿಸ್ಥಿತಿ ಕೈ ಮೀರುತ್ತಿದೆ. ಇಂತಹ ಸಂದರ್ಭದಲ್ಲಿ ಜೆಸ್ಕಾಂ ವಿದ್ಯುತ್‌ ದರ ಏರಿಕೆಗೆ ಸಲ್ಲಿಸಿರುವ ಪ್ರಸ್ತಾವನೆ ಅವೈಜ್ಞಾನಿಕವಾಗಿದೆ. ಜೆಸ್ಕಾಂ ಅಧಿಕಾರಿಗಳು ಮಾಡಿರುವ ತಪ್ಪಿನಿಂದಾಗಿ ಆಗುತ್ತಿರುವ ನಷ್ಟ ಸರಿದೂಗಿಸಿಕೊಳ್ಳಲು ಗ್ರಾಹಕರ ಮೇಲೆ ಹೊರೆ ಹೊರಿಸಲು ಮುಂದಾಗಿರುವುದರಿಂದ ಯಾವುದೇ ಕಾರಣಕ್ಕೂ ವಿದ್ಯುತ್‌ ದರ ಪರಿಷ್ಕರಣೆ ಮಾಡಬಾರದು. ಜತೆಗೆ ಕಂಪನಿ ಸಲ್ಲಿಸಿರುವ ಬೆಲೆ ಏರಿಕೆ ಬೇಡಿಕೆ ತಿರಸ್ಕರಿಸಬೇಕು ಎಂದು ವಿದ್ಯುಚ್ಛಕ್ತಿ ಆಯೋಗಕ್ಕೆ ರೈತರು-ಗ್ರಾಹಕರು ಅಹವಾಲು ಮಂಡಿಸಿದರು. ಅಧಿಕಾರಿಗಳು ಮಾಡುವ ತಪ್ಪನಿಂದಾಗಿ ಉಂಟಾಗುವ ಹಾನಿಯನ್ನು ಜನರ ಮೇಲೆ ಹಾಕಲು ಹೊರಟಂತಿದೆ. ಹೀಗಾಗಿ ದರ ಏರಿಸಲು ಅನುಮತಿ ನೀಡಬಾರದು ಎಂದು ಆರ್‌ಟಿಐ ಕಾರ್ಯಕರ್ತ ಸಿದ್ದರಾಮಯ್ಯ ಹಿರೇಮಠ ಆಯೋಗಕ್ಕೆ ಒತ್ತಾಯಿಸಿದರೆ ಎಚ್ಕೆಸಿಸಿಐ, ರೈಲ್ವೆ, ಎಫ್ಕೆಸಿಸಿಐ, ಕಾಸಿಯಾ, ಕೈಗಾರಿಕೋದ್ಯಮಿಗಳ ಸಂಘ, ರೈತರು ಹೀಗೆ ಹಲವು ತಮ್ಮ ಆಕ್ಷೇಪಣೆ ಸಲ್ಲಿಸಿ, ನಿರಂತರವಾಗಿ ಗುಣಮಟ್ಟದ ವಿದ್ಯುತ್‌ ನೀಡಲ್ಲ. ಗ್ರಾಹಕರ ದೂರುಗಳಿಗೆ ಸ್ಪಂದಿಸಲ್ಲ. ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿದರೆ ಸ್ಪಂದಿಸಲ್ಲ. ಸೋರಿಕೆ ಹಾಗೂ ಕಳ್ಳತನ ತಡೆಯಲು ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಇದನ್ನು ಮೊದಲು ಸರಿಪಡಿಸುವಂತೆ ಆಗ್ರಹಿಸಲಾಯಿತು.

ಯೂನಿಟ್‌ಗೆ 98 ಪೈಸೆ ಹೆಚ್ಚಳಕ್ಕೆ ಕೋರಿಕೆ
ಸಭೆ ಆರಂಭದಲ್ಲಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಾ| ಆರ್‌.ರಾಗಪ್ರೀಯ ಮಾತನಾಡಿ, ಜೆಸ್ಕಾಂನಲ್ಲಿ ನಿರೀಕ್ಷಿಸುತ್ತಿರುವ 968.41 ಕೋಟಿ ರೂ.ಗಳ ಕಂದಾಯ ಕೊರತೆ ಸರಿದೂಗಿಸಲು ನೀರಾವರಿ ಪಂಪ್‌ಸೆಟ್ ಹೊರತುಪಡಿಸಿ ಉಳಿದ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 98 ಪೈಸೆ ಹೆಚ್ಚಳ ಮಾಡಲು ಅನುಮತಿ ನೀಡಿ ಆದೇಶಿಸಬೇಕು ಎಂದು ಆಯೋಗಕ್ಕೆ ಕೋರಿ ಪ್ರಸ್ತಾವನೆ ಸಲ್ಲಿಸಿದರು.

ಟಾಪ್ ನ್ಯೂಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಕುಮಾರಸ್ವಾಮಿ ಟೀಕಿಸಲು ಅನ್ಸಾರಿ-ಜಮೀರ್‌ಗಿಲ್ಲ ನೈತಿಕತೆ

4

ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

3

ನಿಯಮ ಪಾಲಿಸಿ ಜಾತ್ರೆ ನಡೆಸಿ

2

ಪುನರ್ವಸತಿ-ಕಾಳಜಿ ಕೇಂದ್ರ ಪ್ರಾರಂಭಕ್ಕೆ ಮನವಿ

18ald3

ಬೋಳಣಿಗೆ ಅಧಿಕಾರಿಗಳ ದೌಡು: ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

5

ಕುಮಾರಸ್ವಾಮಿ ಟೀಕಿಸಲು ಅನ್ಸಾರಿ-ಜಮೀರ್‌ಗಿಲ್ಲ ನೈತಿಕತೆ

4

ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

3

ನಿಯಮ ಪಾಲಿಸಿ ಜಾತ್ರೆ ನಡೆಸಿ

2

ಪುನರ್ವಸತಿ-ಕಾಳಜಿ ಕೇಂದ್ರ ಪ್ರಾರಂಭಕ್ಕೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.