ಬಿಜೆಪಿ ಸಾಧನೆ ಜನರಿಗೆ ತಿಳಿಸಿ

Team Udayavani, Jun 28, 2017, 3:20 PM IST

gul4.jpg

ಚಿತ್ತಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಸರ್ಕಾರದ ಸಾಧನೆಗಳನ್ನು ತಾಲೂಕಿನ 132 ಬೂತ್‌ಗಳಿಗೆ ಹೋಗಿ ತಿಳಿಸಿ,ಯಡಿಯೂರಪ್ಪ ಅವರ 150 ಮಿಷನ್‌ನಲ್ಲಿ ಚಿತ್ತಾಪುರ ನಂಬರ್‌ ಒನ್‌ ಆಗುವಂತೆ ಮಾಡೋಣ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಬಿರೆದಾರ್‌ ಹೇಳಿದರು. 

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಸ್ತಾರಕರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬೂತ್‌ ಮಟ್ಟದ ಸಮಿತಿ ಸದಸ್ಯರ ಜೊತೆ ಎರಡು  ತಾಲೂಕಿನ ಮುಖಂಡರು ಜೊತೆಗೂಡಿ ಪ್ರತಿಯೊಂದು ಮನೆ ಮನೆಗೂ ತೆರಳಿ ಬಿಜೆಪಿ ಸರ್ಕಾರದ ಸಾಧನೆ ಹಾಗೂ ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಹೇಳಿ, ಮನೆಯ ಗೋಡೆಗೆ ಬಿಜೆಪಿ ವಿಸ್ತಾರಕರ ಚೀಟಿ ಅಂಟಿಸಬೇಕು ಎಂದರು. 

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಬಹುಮತ ಸಿಗಲು ವಿಸ್ತಾರಕರೆ ಕಾರಣ. ಆದ್ದರಿಂದ  ನಮ್ಮಲ್ಲೂ ವಿಸ್ತರಿಕಾ ಕಾರ್ಯಕ್ರಮ ಮಾಡಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವಂತೆ ಮಾಡಬೇಕು ಎಂದು ಹೇಳಿದರು. ಸಂಸದ ಭಗವಂತ  ಖೂಬಾ ನೇತೃತ್ವದ ವಿಸ್ತಾರಕರ ತಂಡ 15 ದಿನಗಳ ಕಾಲ ಚಿತ್ತಾಪುರದಲ್ಲೆ ವಾಸ್ತವ್ಯ ಮಾಡಲಿದೆ ಎಂದರು. 

ಬೇಟಿ ಬಚಾವ್‌ ಭೇಟಿ ಪಡಾವೋ ರಾಜ್ಯ ಸಂಚಾಲಕ ಸುಭಾಸ  ರಾಠೊಡ್‌ ಮಾತನಾಡಿ, ಸಚಿವ ಪ್ರಿಯಾಂಕ್‌ ಖರ್ಗೆ ದುರಾಡಳಿತದ ಬಗ್ಗೆ , ಶಿಕ್ಷಣ, ಶಾಲೆ ಹಾಗೂ ಆರೋಗ್ಯ ವ್ಯವಸ್ಥೆ ಬಗ್ಗೆ ತಿಳಿ ಹೇಳಬೇಕು ಎಂದರು. ಮಾಜಿ ಶಾಸಕ ವಾಲ್ಮೀಕಿ  ನಾಯಕ ಮಾತನಾಡಿ, ಬಿಜೆಪಿ ಸಂಘಟನೆಗೆ ಕಾರ್ಯಕರ್ತರು ಹಾಗೂ ವಿಸ್ತಾರಕರು ಹೆಚ್ಚಿನ ಒತ್ತು ಕೊಡಬೇಕು ಎಂದು ಹೇಳಿದರು. 

ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ  ಅಧ್ಯಕ್ಷ ಅರವಿಂದ ಚವ್ಹಾಣ, ಜಿಪಂ ಸದಸ್ಯ ಅಶೋಕ ಸಗರ್‌, ಗ್ರಾಮೀಣ ಅಧ್ಯಕ್ಷ ಶರಣು ಸಲಗರ್‌, ರಾಣೋಜಿ ದೊಡ್ಡಮನಿ, ರಾಜಕುಮಾರ ಕೋಟೆ, ಪ್ರಭು ಕಾಳನೂರ್‌,  ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ, ಪ್ರಧಾನ ಕಾರ್ಯದರ್ಶಿ ಇಂದ್ರಮ್ಮ ವಿ. ರೆಡ್ಡಿ, ತಾಲೂಕಾಧ್ಯಕ್ಷೆ ಅಕ್ಕಮಹಾದೇವಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ  ಎಮ್ಮೆನೂರ್‌, ಕಾರ್ಯದರ್ಶಿ ನಾಗರಾಜ ಹೂಗಾರ, ವಕ್ತಾರ ಮಹೇಶ ಬೆಟಗೇರಿ ಹಾಗೂ ಮತ್ತಿತರರಿದ್ದರು. 

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.