ಅನಿಷ್ಠ ಪದ್ಧತಿಗಳು ಇಂದಿಗೂ ಜೀವಂತ


Team Udayavani, Jan 30, 2019, 7:55 AM IST

gul-6.jpg

ಬಳ್ಳಾರಿ: ಬಾಲ್ಯ ವಿವಾಹ ನಡೆಯಲು ಕೇವಲ ಪೋಷಕರು ಮಾತ್ರವಲ್ಲ, ಅದಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಿಕೊಡುವ ಮದುವೆಯ ಇತರೆ ವಿಭಾಗಗಳವರು ಸಹ ಕಾರಣರಾಗಲಿದ್ದಾರೆ. ಅಂತಹವರು ಎಷ್ಟೇ ದೊಡ್ಡವರು, ಪ್ರಭಾವಿಗಳಾಗಿದ್ದರೂ, ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶರು, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಬಿ.ಹಂದ್ರಾಳ್‌ ಖಡಕ್‌ ಎಚ್ಚರಿಕೆ ನೀಡಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಹಯೋಗದಲ್ಲಿ ಮಂಗಳವಾರ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಮತ್ತು ಬಾಲ್ಯವಿವಾಹ ನಿಷೇಧ ಕುರಿತು ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಬಾಲ್ಯವಿವಾಹವೂ ಒಂದು. ಆರ್ಥಿಕವಾಗಿ ಹಿಂದುಳಿದವರಲ್ಲಿ ಬಡತನ, ಅನಕ್ಷರತೆ, ಮೂಢನಂಬಿಕೆಗಳು ಬಾಲ್ಯವಿವಾಹ ಇಂದಿಗೂ ಜೀವಂತವಾಗಿರಲು ಕಾರಣಗಳಾಗಿವೆ. ಇಂಥ ಅನಿಷ್ಠ ಬಾಲ್ಯವಿವಾಹ ನಡೆಯಲು ಕೇವಲ ವಧು-ವರರ ಪೋಷಕರು ಮಾತ್ರವಲ್ಲ. ಆ ಮದುವೆಗೆ ಆಹ್ವಾನ ಪತ್ರಿಕೆ ಮುದ್ರಿಸಿದ ಮುದ್ರಣಕಾರರು, ಪುರೋಹಿತರು, ಮೌಲ್ವಿಗಳು, ಪಾದ್ರಿಗಳು, ಕಲ್ಯಾಣ ಮಂಟಪ, ಮಂದಿರಗಳ ವ್ಯವಸ್ಥಾಪಕರು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಹ ಕಾರಣರಾಗಲಿದ್ದು, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ. ಹಾಗಾಗಿ ಬಾಲ್ಯವಿವಾಹವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅಂತಹ ಸಂದರ್ಭ ಬಂದಾಗ ಕಾನೂನಿನ ರಕ್ಷಣೆ ಪಡೆಯಬೇಕು ಎಂದು ಸಲಹೆ ನೀಡಿದರು. ಇದಲ್ಲದೇ, ಕಲ್ಯಾಣ ಮಂಟಪದ ಮಾಲೀಕರು ಕೂಡ ವಧು-ವರರ ಪೂರ್ವಾಪರ ಮಾಹಿತಿಯನ್ನು ಪಡೆಯದೇ ಮಂಟಪವನ್ನ ಬಾಡಿಗೆ ರೂಪದಲ್ಲಿ ನೀಡಿದರೂ ಕಾನೂನಿನ ಪ್ರಕಾರ ಅಪರಾಧ. ಹಾಗಾಗಿ, ಯಾವುದೇ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸುವ ಕುರಿತು ಆಯೋಜಕರು ಮಾಹಿತಿ ನೀಡಿದ ಕೂಡಲೇ ವಧು-ವರರ ಮಾಹಿತಿ ಹಾಗೂ ವಯಸ್ಸು ಮತ್ತು ಪ್ರೌಢ ಶಿಕ್ಷಣ ಪೂರೈಸಿರುವ ಮಾಹಿತಿಯನ್ನು ಮೊದಲೇ ಪಡೆದುಕೊಂಡಿರಬೇಕು. ಅಲ್ಲದೇ, ಪ್ರಿಟಿಂಗ್‌ ಪ್ರಸ್‌ ಮಾಲೀಕರೂ ಸಹ ವಧು-ವರರ ಹೆಸರು ಮತ್ತು ವಯೋ ಮಾನದ ಮಾಹಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸಂಬಂಧಪಟ್ಟ ಶಾಲೆಯ ಮುಖ್ಯ ಶಿಕ್ಷಕರಿಂದ ಪಡೆದುಕೊಳ್ಳಬೇಕೆಂದರು.

ಕಡ್ಡಾಯವಾಗಿ ವಧು-ವರರ ಹೆಸರನ್ನು ವಿವಾಹ ಮಹೋತ್ಸವದ ಆಹ್ವಾನ ಪತ್ರಿಕೆಯ ಮೇಲೆ ಮುದ್ರಿಸಬೇಕು. ಅವರ ವಯಸ್ಸನ್ನೂ ಕೂಡ ನಮೂದಿಸಬೇಕು. ಕೆಲವೊಮ್ಮೆ ವಯಸ್ಸು ಮುದ್ರಿಸದೇ ಕಾರ್ಡ್‌ ಅನ್ನು ಮುದ್ರಿಸುತ್ತಾರೆ. ಅಂತಹವರು ಮುದ್ರಿಸಿದ ಕಾರ್ಡಿನಿಂದಾಗಿ ಬಾಲ್ಯವಿವಾಹ ಮಾಡಿಕೊಂಡಿರುವ ಕುರಿತಾದ ಅಂಶ ಬೆಳಕಿಗೆ ಬಂದ್ರೆ ಕಾನೂನಾತ್ಮಕ ಅಪರಾಧವೆಂದು ಭಾವಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗೇಶ ಬಿಲ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರಿ ಉಪವಿಭಾಗಾಧಿಕಾರಿ ಕೆ.ಆರ್‌.ನಂದಿನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಂ.ವಿಜಯಲಕ್ಷ್ಮೀ ಪ್ರಸಾದ್‌ರಾವ್‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ, ನ್ಯಾಯವಾದಿ ವಿಜಯಲಕ್ಷ್ಮೀ ಸೇರಿದಂತೆ ಇನ್ನಿತರರಿದ್ದರು.

ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಬಾಲ್ಯವಿವಾಹವೂ ಒಂದು. ಆರ್ಥಿಕವಾಗಿ ಹಿಂದುಳಿದವರಲ್ಲಿ ಬಡತನ, ಅನಕ್ಷರತೆ, ಮೂಢನಂಬಿಕೆಗಳು ಬಾಲ್ಯವಿವಾಹ ಇಂದಿಗೂ ಜೀವಂತವಾಗಿರಲು ಕಾರಣಗಳಾಗಿವೆ. ಇಂಥ ಅನಿಷ್ಠ ಬಾಲ್ಯವಿವಾಹ ನಡೆಯಲು ಕೇವಲ ವಧು-ವರರ ಪೋಷಕರು ಮಾತ್ರವಲ್ಲ. ಆ ಮದುವೆಗೆ ಆಹ್ವಾನ ಪತ್ರಿಕೆ ಮುದ್ರಿಸಿದ ಮುದ್ರಣಕಾರರು, ಪುರೋಹಿತರು, ಮೌಲ್ವಿಗಳು, ಪಾದ್ರಿಗಳು, ಕಲ್ಯಾಣ ಮಂಟಪ, ಮಂದಿರಗಳ ವ್ಯವಸ್ಥಾಪಕರು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಹ ಕಾರಣರಾಗಲಿದ್ದು, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ. ಹಾಗಾಗಿ ಬಾಲ್ಯವಿವಾಹವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅಂತಹ ಸಂದರ್ಭ ಬಂದಾಗ ಕಾನೂನಿನ ರಕ್ಷಣೆ ಪಡೆಯಬೇಕು.
•ನ್ಯಾ| ಎಸ್‌.ಬಿ.ಹಂದ್ರಾಳ್‌, ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.