ಅಚ್ಚೆದಿನ್‌ ಹೆಸರಲ್ಲಿ ಬಿಜೆಪಿ ಸುಳ್ಳು

Team Udayavani, Feb 19, 2018, 10:55 AM IST

ವಾಡಿ: ಮೇಕಿನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಸ್ಕಿಲ್‌ ಇಂಡಿಯಾ ಎಂದು ಹೇಳುತ್ತಾ ಬಿಜೆಪಿಯವರು ದೇಶದ
ಜನರಲ್ಲಿ ಭ್ರಮೆ ಸೃಷ್ಟಿಸಿದ್ದಾರೆ. ಅಚ್ಚೆದಿನ್‌ ಹೆಸರಿನಲ್ಲಿ ಪ್ರಧಾನಿ ಮೋದಿ ಅವರು ಸುಳ್ಳು ಸಾರಿದ್ದಾರೆ ಎಂದು ಐಟಿಬಿಟಿ
ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು. 

ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ 32 ಕೋಟಿ ರೂ. ಅನುದಾನದ 76 ಅಭಿವೃದ್ಧಿ ಕಾಮಗಾರಿ
ಉದ್ಘಾಟನೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ತತ್ವಗಳ ಮೇಲೆ ನಡೆಯುತ್ತಿರುವ ಕಾಂಗ್ರೆಸ್‌ ಸರಕಾರ ನುಡಿದಂತೆ ನಡೆದು ಜನರಿಗೆ ಸಚ್ಚೆದಿನ್‌ ಕೊಟ್ಟಿದೆ. ಬಿಜೆಪಿ ಸುಳ್ಳಿನ ರಾಜಕೀಯ ಮಾಡುತ್ತಿದೆ. ವಾಡಿ ಅಭಿವೃದ್ಧಿಗೆ ನಾನು 83 ಕೋಟಿ ಅನುದಾನ ನೀಡಿದ್ದೇನೆ ಎಂದು ಹೇಳಿದರು.

ಆರ್‌ಎಸ್‌ಎಸ್‌ನವರು ದೇಶದ ತ್ರಿವರ್ಣ ಧ್ವಜ ಮತ್ತು ಸಂವಿಧಾನ ಒಪ್ಪಿಕೊಂಡಿಲ್ಲ. ಸ್ವಾತಂತ್ರ್ಯಕ್ಕಾಗಿ ರಕ್ತ ಹರಿಸುವುದಿರಲಿ ಹನಿ ಬೆವರು ಸುರಿಸಿಲ್ಲ. ಪ್ರತಿಯೊಬ್ಬರ ಖಾತೆಯಲ್ಲಿ 15 ಲಕ್ಷ ರೂ. ಹಾಕುವುದಾಗಿ ಹೇಳಿ 15 ರೂ. ಹಾಕಿಲ್ಲ. ಜನರು ಕೂಡಿಟ್ಟ ಹಣವನ್ನೆಲ್ಲ ಉದ್ಯಮಿಪತಿಗಳಿಗೆ ಕೊಟ್ಟಿದ್ದಾರೆ ಎಂದು ದೂರಿದ ಪ್ರಿಯಾಂಕ್‌, ಬಿಜೆಪಿಯವರಿಗೆ ಜಾತಿ ಅಸ್ಪೈಶ್ಯತೆ ನೋವಿನ ಅರಿವಿಲ್ಲ. ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕೊಲೆ-ಹಿಂಸಾ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ದೂರಿದರು.

ಮುಖಂಡರಾದ ಟೋಪಣ್ಣ ಕೋಮಟೆ, ಪುರಸಭೆ ಸದಸ್ಯ ದೇವಿಂದ್ರ ಕರದಳ್ಳಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ
ಮೈನಾಬಾಯಿ ಗೋಪಾಲ ರಾಠೊಡ, ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಮುಖ್ಯಾಧಿಕಾರಿ ಕೆ. ಮಲ್ಲೇಶ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಜಿಪಂ ಸದಸ್ಯರಾದ ಶಿವುರುದ್ರ ಭೀಣಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೆಮೂದ್‌ ಸಾಹೇಬ, ಭೀಮಣ್ಣ ಸಾಲಿ, ಜಾಫರ್‌ ಪಟೇಲ, ಶಂಕ್ರಯ್ಯಸ್ವಾಮಿ, ಶರಣು ನಾಟೀಕಾರ, ಬಶೀರ್‌ ಖುರೇಶಿ, ಭೀಮಶಾ ಜಿರೊಳ್ಳಿ, ವೀರಣ್ಣಗೌಡ ಪರಸರೆಡ್ಡಿ, ಅಣ್ಣಾರಾಯಗೌಡ ಪಾಟೀಲ ಪಾಲ್ಗೊಂಡಿದ್ದರು.

ಕಾಶೀನಾಥ ಧನ್ನಿ ಸ್ವಾಗತಿಸಿದರು. ಇದಕ್ಕೂ ಮೊದಲು ಬಳಿರಾಮ ವೃತ್ತದಿಂದ ಸಚಿವ ಖರ್ಗೆ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು. 543 ಆಶ್ರಯ ನಿವೇಶನಗಳ ಅಡಿಗಲ್ಲು ಜತೆಗೆ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಯಿತು.

ಪ್ರತಿಭಟನೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ದಲಿತ
ಸೇನೆ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾಯಿತು. ಸೇನೆ ಜಿಲ್ಲಾ ಉಪಾಧ್ಯಕ್ಷ ಶ್ರವಣಕುಮಾರ ಮೌಸಲಗಿ
ನೇತೃತ್ವದಲ್ಲಿ ಸಚಿವರಿಗೆ ಮನವಿ ಕೊಡಲು ಮುಂದಾದ ಕಾರ್ಯಕರ್ತರು, ಸ್ಥಳೀಯ ಎಸಿಸಿ ಸಿಮೆಂಟ್‌ ಕಂಪನಿಯಲ್ಲಿ
ಯುವಕರಿಗೆ ಉದ್ಯೋಗ ಕೊಡಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಪೊಲೀಸರು ಪ್ರತಿಭಟನಾಕಾರರನ್ನು
ಚದುರಿಸಿದರು .

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ