ಸಾರ್ವಜನಿಕರ ಅಹವಾಲು ಆಲಿಸಿದ ಸಿಎಂ


Team Udayavani, Jul 11, 2021, 3:18 PM IST

gdgdsgfsgyty

ಕಲಬುರಗಿ: ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಸಾರ್ವಜನಿಕರು ಅಹವಾಲು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಹಲವು ಸಂಘ-ಸಂಸ್ಥೆಗಳು ಮತ್ತು ವಿವಿಧ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದವು.

ಎಐಡಿಎಸ್‌ಒ ಸಂಘಟನೆ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ ಮತ್ತು ಫಾರ್ಮಸಿ ವಿದ್ಯಾರ್ಥಿಗಳ ಹಿಂದಿನ ಸೆಮಿಸ್ಟರ್‌ ಪರೀಕ್ಷೆಗಳನ್ನು ರದ್ದುಗೊಳಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೂ ಎರಡು ಡೋಸ್‌ ಲಸಿಕೆ ನೀಡುವವರೆಗೆ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದರು.

ಪಿಯು ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿದಂತೆ ಡಿಪ್ಲೋಮಾ ವಿದ್ಯಾರ್ಥಿಗಳ ಸೆಮಿಸ್ಟರ್‌ ಪರೀಕ್ಷೆಯನ್ನು ಆಂತರಿಕ ಮೌಲ್ಯಮಾಪನ ಅಥವಾ ಇನ್ನಾವುದಾದರೂ ವೈಜ್ಞಾನಿಕ ಮಾನದಂಡದ ಮೂಲಕ ಮೌಲ್ಯಮಾಪನ ಮಾಡಬೇಕು. ಶಿಕ್ಷಣ ತಜ್ಞರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳೊಡನೆ ಪ್ರಜಾತಾಂತ್ರಿಕ ಚರ್ಚೆ ನಡೆಸಿ. ಶೈಕ್ಷಣಿಕ ವೇಳಾಪಟ್ಟಿ, ಪರೀಕ್ಷೆ ಮೌಲ್ಯಮಾಪನ ಇವುಗಳ ಬಗ್ಗೆ ವೈಜ್ಞಾನಿಕ-ಪ್ರಜಾತಾಂತ್ರಿಕ ನೀತಿ ರೂಪಿಸಬೇಕೆಂದು ಮನವಿ ಮಾಡಿದರು.

ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಮುನ್ನ ಆಫ್‌ಲೈನ್‌ ತರಗತಿಗಳನ್ನು ಪ್ರಾರಂಭಿಸಬಾರದು ಎಂದು ಸಂಘಟನೆ ಜಿಲ್ಲಾಧ್ಯಕ್ಷ ಹಣಮಂತ ಎಸ್‌.ಎಚ್‌., ಸ್ನೇಹಾ ಕಟ್ಟಿಮನಿ, ಈರಣ್ಣ ಇಸಬಾ, ತುಳಜಾರಾಮ ಎನ್‌.ಕೆ, ವೆಂಕಟೇಶ ದೇವದುರ್ಗ, ಪ್ರೀತಿ ದೊಡ್ಡಮನಿ, ಕಾರ್ತಿಕ, ರಿತ್ವಿಕ್‌ ಮನವಿ ಪತ್ರ ಸಲ್ಲಿಸಿದರು. ಈಗಿರುವ ಕಲ್ಯಾಣ ಕರ್ನಾಟಕ ಇತಿಹಾಸ ಸಮಿತಿ ರದ್ದುಗೊಳಿಸಿ ಪುನರ್‌ ರಚಿಸಬೇಕೆಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿದರು. ಮಂಜುನಾಥ ನಾಲವಾರಕರ್‌, ಸಚಿನ ಫರಹತಾಬಾದ್‌, ಸಂಪತ್‌ ಹಿರೇಮಠ, ದತ್ತು ಹಯ್ನಾಳಕರ್‌, ಶರಣು ಹೊಸಮನಿ ಅವರು ಸಿಎಂ ಅವರನ್ನು ಭೇಟಿ ಮಾಡಿ, ಈಗ ಸಮಿತಿಯ ಕಾರ್ಯ ಚಟುವಟಿಕೆಗಳು ನಿಂತು ಹೋಗಿವೆ. ಆದ್ದರಿಂದ ಈ ಸಮಿತಿ ರದ್ದು ಮಾಡಬೇಕು. ಹೊಸ ಸಮಿತಿ ರಚಿಸಿ, ಸಮಿತಿಗೆ ಬೇಕಾದ ಕಚೇರಿ ಕಟ್ಟಡ, ವಾಹನ, ಕ್ಯಾಮರಾ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೆಕೆಆರ್‌ ಡಿಬಿ ಅನುದಾನದಲ್ಲಿ ಒದಗಿಸ ಬೇಕೆಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘಟನೆ ಮತ್ತು ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಜಂಟಿಯಾಗಿ ರೈತರು, ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಗಮನ ಸೆಳೆಯಲಾಯಿತು. ಡಿಸಿಸಿ ಬ್ಯಾಂಕ್‌ ಮೂಲಕ ವಿಎಸ್‌ಎಸ್‌ಎನ್‌ ಸೊಸೈಟಿ ಮೂಲಕ ಎಲ್ಲ ರೈತರಿಗೆ ಸರಳವಾಗಿ ಹೊಸ ಸಾಲ ವಿತರಣೆ ಮಾಡಬೇಕು. 2017-18ನೇ ಸಾಲಿನ ಸಾಲ ಮನ್ನಾದಲ್ಲಿ ವಂಚನೆಗೊಳಗಾದ ಎಲ್ಲ ರೈತರಿಗೂ ಸಾಲ ಮನ್ನಾ ಅನ್ವಯಿಸಬೇಕು. 2012-13ನೇ ಸಾಲಿನಲ್ಲಿ ಬೆಳೆ ವಿಮೆ ಸಿಗದೆ ವಂಚಿತರಾದ ರೈತರಿಗೆ ಹಣ ಒದಗಿಸಬೇಕು. ಸ್ತಿಶಕ್ತಿ ಸ್ವ-ಸಹಾಯ ಸಂಘಗಳ ಮಹಿಳೆಯರ ಪಡೆದ ಸಾಲವನ್ನು ಬಡ್ಡಿ ಸಹಿತ ಮಾಡಬೇಕು.

ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕೆಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೋರಾಟಗಾರ್ತಿ ಕೆ.ನೀಲಾ, ಹೋರಾಟಗಾರರಾದ ಶರಣಬಸಪ್ಪ ಮಮಶೆಟ್ಟಿ, ಶ್ರೀಮಂತ ಬಿರಾದಾರ, ಪಾಂಡುರಂಗ ಮಾವಿನಕರ, ಗೌರಮ್ಮ ಪಾಟೀಲ, ಮೇಘರಾಜ ಕಠಾರೆ, ಅಮೀನಾ ಬೇಗಂ, ಸೈಯದ್‌ ಖೈರುನ್ನಿಸಾ, ಸುಧಾಮ ಧನ್ನಿ, ಶಹಜಾನ್‌ ಅಖ್ತರ್‌ ಮತ್ತಿತರರು ಇದ್ದರು.

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.