ಕುರಿ-ಗೋ ಸಾಕಣೆಯಿಂದ ರೈತ ಸದೃಢ: ಜೈಶಂಕರ

Team Udayavani, Sep 11, 2017, 11:12 AM IST

gul-5.jpg

ಕಾಳಗಿ: ಕೃಷಿ ಜೊತೆ ಜೊತೆಗೆ ಕುರಿ ಹಾಗೂ ಗೋವು ಸಾಕಾಣಿಕೆ ಮಾಡುವುದರಿಂದ ರೈತ ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢನಾಗುತ್ತಾನೆ ಎಂದು ರದ್ದೆವಾಡಿ ಕೃಷಿ ವಿಜ್ಞಾನ ಕೇಂದ್ರದ ಪಶು ವಿಜ್ಞಾನಿ ಡಾ| ಜೈಶಂಕರ ಹೇಳಿದರು. 

ಟೆಂಗಳಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಜ್ಞಾನಿಕ ಪದ್ಧತಿಯಲ್ಲಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ರೈತರು ಪ್ರತಿ ವರ್ಷ ಅತಿವೃಷ್ಟಿ ಅನಾವೃಷ್ಟಿಯಿಂದ ಕೃಷಿಯಲ್ಲಿ ನಿರಂತರ ನಷ್ಟ ಅನುಭವಿಸಿ ಸಾಲಭಾದೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕಾದರೆ ರೈತರು ಕೃಷಿ ಜೊತೆಗೆ ಕುರಿ, ಆಡು, ಗೋವು, ಹೈನುಗಾರಿಕೆಯಂತ ಉಪಕಸುಬನ್ನು ಮಾಡಿದಾಗ ಅಧಿಕ ಲಾಭ ಗಳಿಸಿ ಸದೃಢನಾಗುತ್ತಾರೆ ಎಂದರು.

ವಿದ್ಯಾವಂತ ಯುವಕರು ನೌಕರಿಗಾಗಿ ಅಲೆದಾಡಿ ಸಮಯ ಕಳೆಯುವುದರ ಬದಲು ಹಳ್ಳಿಯಲ್ಲೇ ಸ್ವಯಂ ಉದ್ಯೋಗ ಸೃಷ್ಟಿಸಿ ಮಾಲಿಕರಾಗಿ ಉತ್ತಮ ಆದಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಪಶು ವೈದ್ಯಾಧಿಕಾರಿ ಡಾ| ಅಣ್ಣರಾವ್‌ ಪಾಟೀಲ ಮಾತನಾಡಿ, ದಿನೆ ದಿನೇ ಕುರಿಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ರೈತರು ಹಳೆಯ ಪದ್ಧತಿಯಂತೆ ಕುರಿ ಸಾಕಾಣಿಕೆ ಮಾಡದೆ, ಹಟ್ಟಿ ಪದ್ಧತಿ ಮೂಲಕ 2ರಿಂದ3 ತಿಂಗಳ 2500-3000ರೂ.
ಬೆಲೆಯ ಗಂಡು ಕುರಿ ತಂದು ಐದಾರು ತಿಂಗಳು ಸಲುಹಿ ಒಂಭತ್ತು ತಿಂಗಳಿಗೆ ಪಟ್ಟಣಗಳಲ್ಲಿ ಮಾರಾಟ ಮಾಡಿದರೆ ಒಂದು ಗಂಡು ಕುರಿ ಸುಮಾರು 12,000-15,000ರೂ. ವರೆಗೆ ಮಾರಾಟವಾಗುತ್ತವೆ. ಈ ಮಾದರಿಯಲ್ಲಿ 2-3 ಗುಂಪು ರಚಿಸಿ ಅವುಗಳಿಗೆ ಜಂತು ನಾಶಕ, ಕರಳು ಬೇನೆ, ಹಿರೆ ಬೇನೆ ರೋಗದ ವಿರುದ್ಧ ಲಸಿಕೆ ಹಾಕಿಸಿ ಲಾಲನೆ, ಪೋಷಣೆ ಮಾಡಿದರೆ ತಿಂಗಳಿಗೆ 5ರಿಂದ 6 ಲಕ್ಷ ರೂ. ಆದಾಯ ಗಳಿಸಬಹುದಾಗಿದೆ ಎಂದು ಹೇಳಿದರು. ರೈತರಾದ ಭೀಮಾಶಂಕರ, ಹನೀಫಸಾಬ ಅಫಘಾನ ಹಾಗೂ 50ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10false

ಸುಳ್ಳು ಆಶ್ವಾಸನೆಗೆ ಬಲಿಯಾಗಬೇಡಿ: ಅಜಯಸಿಂಗ್

8babasaheb

ಬಾಬಾ ಸಾಹೇಬ ಜ್ಞಾನದ ಸಂಕೇತ

7country

ದೇಶದ ದಿಕ್ಕು ಬದಲಿಸಿದ್ದು ಅಂಬೇಡ್ಕರ್

6ambedkar

ಅಂಬೇಡ್ಕರ್‌ ಕಷ್ಟ-ನೋವು ಕಣ್ಣೀರಿನದ್ದು

5bjp

ಮತದಾರರ ಬೇಟೆಗೆ ಕೈ-ಕಮಲದ ಅಬ್ಬರ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.