ಅಣಕಿಸುವಂತಿದೆ ಸರ್ಕಾರದ ಪರಿಹಾರ: ಮೌಲಾ ಮುಲಾ


Team Udayavani, Jun 2, 2021, 5:36 PM IST

nಚಬಷನಜಚಹವಚಷಜಱ

ಆಳಂದ: ಸರ್ಕಾರ ಪ್ರಕಟಿಸಿರುವ ಕೊರೊನಾ ಲಾಕ್‌ಡೌನ್‌ ಪರಿಹಾರ ಸಂಕಷ್ಟದಲ್ಲಿರುವ ಜನತೆಯನ್ನು ಅಣಕಿಸಿದಂತೆ ಕಂಡು ಬರುತ್ತಿದೆ ಎಂದು ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ (ಎಂ), ಸಿಪಿಐ ಸೋಷಲಿಷ್ಟ್ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ, ಆಲ್‌ ಇಂಡಿಯಾ ಫಾರ್ವರ್ಡ್‌ ಬ್ಲಾಕ್‌ ಮತ್ತು ಆರ್‌ಪಿಐ, ಸ್ವರಾಜ್‌ ಇಂಡಿಯಾ ಜಿಲ್ಲಾ ಘಟಕದ ಆಶ್ರಯದಲ್ಲಿ ಮುಖಂಡರು ಕೋವಿಡ್‌ ವಿರುದ್ಧ ಸರ್ಕಾರದ ನಿರ್ಲಕ್ಷé ಖಂಡಿಸಿ ತಹಶೀಲ್ದಾರ್‌ ಕಚೇರಿ ಎದುರು ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ಸಾರ್ವಜನಿಕರಂಗದ ಉದ್ದಿಮೆ, ಸಂಸ್ಥೆಗಳ ಖಾಸಗೀಕರಣ ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಕಿಸಾನಸಭಾ ತಾಲೂಕು ಅಧ್ಯಕ್ಷ ಚಂದ್ರಕಾಂತ ಖೋಬ್ರೆ ಮಾತನಾಡಿ, 18 ವರ್ಷ ಮೇಲ್ಪಟ್ಟ ಜನತೆಗೆ ಉಚಿತ ಸಾರ್ವತ್ರಿಕ ಕೋವಿಡ್‌ ಲಸಿಕೆಯನ್ನು ತಕ್ಷಣವೇ ಒದಗಿಸಬೇಕು. ಅದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಎಲ್ಲ ಕುಟುಂಬಗಳಿಗೆ ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರಧಾನ್ಯ, ಸುರಕ್ಷಾ ಪೊಟ್ಟಣ ಹಾಗೂ 10 ಸಾವಿರ ರೂ. ನೆರವು ಕೊಡಬೇಕು ಎಂದು ಆಗ್ರಹಿಸಿದರು.

ಸಿಪಿಐಎಂ ಜಿಲ್ಲಾ ಮುಖಂಡ ಸುಧಾಮ ಧನ್ನಿ ಮಾತನಾಡಿ, ಇಂದಿರಾ ಕ್ಯಾಂಟಿನ್‌ಗಳನ್ನು ವಿಸ್ತರಿಸಿ ಬಲಗೊಳಿಸಬೇಕು. ತೋಟಗಾರಿಕೆ ಬೆಳೆ ಹಾನಿಗೆ ಕನಿಷ್ಠ 25 ಸಾವಿರ ರೂ. ನೀಡಬೇಕು. ರಾಜ್ಯದ ಎಲ್ಲ ರೈತರು, ಕೂಲಿಕಾರರು, ಕಾರ್ಮಿಕರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರ ಖುಣಮುಕ್ತ ಕಾಯ್ದೆಯಡಿ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಮುಖಂಡ ಪಾಂಡುರಂಗ ಮಾವೀನಕರ್‌ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಮಾನವ ದಿನಗಳನ್ನು ಹೆಚ್ಚಿಸಿ, ಕೂಲಿಯನ್ನು ಹೆಚ್ಚಿಸಬೇಕು. ಕೂಲಿ ಕಾರ್ಮಿಕರಿಗೆ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ನಂತರ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಸಾಯಬಣ್ಣಾ ಪೂಜಾರಿ, ಅಲ್ತಾಪ್‌ ಮುಲ್ಲಾ, ವಿಶ್ವನಾಥ ಕೆ. ಜಮಾದಾರ ಮತ್ತಿತರರು ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.