ಹೈಕೋರ್ಟ್‌ ಆವರಣ ಪಕ್ಷಿಗಳ ಆಶ್ರಯತಾಣವಾಗಿಸಲು ಸಲಹೆ

Team Udayavani, Jul 24, 2018, 11:45 AM IST

gul-4.jpg

ಕಲಬುರಗಿ: ಕಲಬುರಗಿ ಉತ್ಛ ನ್ಯಾಯಾಲಯದ ಆವರಣದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವ ಮೂಲಕ ಪಕ್ಷಿ ಮತ್ತು ಪ್ರಾಣಿಗಳಿಗೆ ಆಶ್ರಯ ತಾಣವನ್ನಾಗಿಸಬೇಕು ಎಂದು ಕಲಬುರಗಿ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಸಲಹೆ ನೀಡಿದರು. 

ಜಿಪಂನಿಂದ ಉತ್ಛನ್ಯಾಯಾಲಯದ ಆವರಣದಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಮ್ಮಿಕೊಂಡಿರುವ ಕಸ ತೆಗೆಯುವ ಹಾಗೂ ಗುಂಡಿ ತೋಡಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಬುರಗಿ ಉತ್ಛ ನ್ಯಾಯಾಲಯದ ಆವರಣದಲ್ಲಿ ನವಿಲು, ಬಾತುಕೋಳಿಗಳು ತುಂಬಾ ಇವೆ. ಮೊಲ ಹಾಗೂ ಕೆಲವು ಬಾರಿ ಜಿಂಕೆಗಳು ಕಾಣುತ್ತವೆ. ಅವುಗಳಿಗೆ ಆಶ್ರಯ ನೀಡಲು ಪಕ್ಷಿಗಳಿಗೆ ಇಷ್ಟವಾದ ಹತ್ತಿಕಾಯಿ, ಹಣ್ಣಿನ ಗಿಡಗಳನ್ನು ಬೆಳೆಸಿ ಎಂದು ಹೇಳಿದರು.

ಧಾರವಾಡ ಉತ್ಛ ನ್ಯಾಯಾಲಯದ ಆವರಣವನ್ನು ತುಂಬಾ ಚೆನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಅದೇ ಮಾದರಿಯಲ್ಲಿ
ಇಲ್ಲಿಯೂ ಉದ್ಯೋಗ ಖಾತ್ರಿ ಯೋಜನೆಯ ಸಹಾಯದಿಂದ ಟ್ರೀ ಪಾರ್ಕ್‌ ನಿರ್ಮಿಸಬೇಕು. 

ಹೈಕೋರ್ಟ ಆವರಣ ಸಾರ್ವಜನಿಕ ಸ್ಥಳವಾಗುವುದರಿಂದ ತುಂಬಾ ಚೆನ್ನಾಗಿ ಅಭಿವೃದ್ಧಿ ಪಡಿಸಬೇಕು. ಕಲಬುರಗಿಗೆ ಇದೊಂದು ಆಸ್ತಿ ಆಗುವ ಹಾಗೆ ರೂಪುಗೊಳ್ಳಬೇಕು. ಈ ಭಾಗದಲ್ಲಿ ಹಲವು ಪ್ರಬೇಧದ ಪಕ್ಷಿಗಳಿವೆ. ದೂರದೇಶದ ಪಕ್ಷಿಗಳು ವಲಸೆ ಬರುತ್ತವೆ. ಅವುಗಳಿಗೆ ಹೈಕೋರ್ಟ್‌ ಆವರಣ ಆಶ್ರಯ ತಾಣವಾಗಿ ನಿರ್ಮಾಣಗೊಳ್ಳಬೇಕು ಎಂದರು.

ಕಲಬುರಗಿ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್‌.ಎನ್‌. ಸತ್ಯನಾರಾಯಣ ಮಾತನಾಡಿ, ಹೈಕೋರ್ಟ್‌ ಆವರಣದಲ್ಲಿ ಸೂಬಾಬುಲ್‌ ಅರಣ್ಯದ ಮಾದರಿಯಲ್ಲಿ ಬೆಳೆದುಕೊಂಡಿದೆ. ಅದನ್ನು ಬೇರು ಸಮೇತ ಕಿತ್ತುಹಾಕಿ ನಂತರ ಸಸಿ ನೆಡುವ ಕಾರ್ಯ ಕೈಗೊಳ್ಳಬೇಕು. ಹೈಕೋರ್ಟ ಆವರಣದಲ್ಲಿ ಒಂದು ಸಣ್ಣ ಪ್ರಮಾಣದ ಜಿನಗುಕೆರೆ ನಿರ್ಮಿಸಬೇಕು. ನೀರು ನಿಲ್ಲುವ ಹಾಗೆ ಸಂಪುಟ ರಚಿಸಿ ಅರಣ್ಯ ಇಲಾಖೆಗೆ ಉಪಯೋಗವಾಗುವ ಹಾಗೆ ನರ್ಸರಿ ರೂಪಿಸಬೇಕು. ಈ ಕುರಿತು ಪ್ರಸ್ತಾವನೆ ಸಲ್ಲಿಸಿದಲ್ಲಿ ಅದಕ್ಕೆ ಅನುಮೋದನೆ ನೀಡಲಾಗುವುದು ಎಂದರು.

ಶರಣಸಿರಸಗಿ ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ಮಾತನಾಡಿ, ಶರಣಸಿರಸಗಿ ಗ್ರಾಮದಲ್ಲಿ ಎಲ್ಲರೂ ವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಕೊಂಡಿದ್ದಾರೆ. ಗ್ರಾಮದ ಯಾರೂ ಸಹ ಶೌಚಕ್ಕಾಗಿ ಬಯಲಿಗೆ ಹೋಗುವುದಿಲ್ಲ. ನಾನೂ ಸಹ ಈ ಹಿಂದೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ್ದೇನೆ. ಉದ್ಯೋಗ ಖಾತ್ರಿ ಯೋಜನೆ ಗ್ರಾಮದ ವಿಕಾಸಕ್ಕೆ ಬಹು ಉಪಯುಕ್ತವಾಗಿದೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಪಾಲಿಕೆ ಆಯುಕ್ತ ರಘುನಂದನ ಮೂರ್ತಿ,
ಅರಣ್ಯ ಸಂರಕ್ಷಣಾ ಧಿಕಾರಿ ಶಿವಶಂಕರ, ಅರಣ್ಯ ಇಲಾಖೆ ಅಧಿಕಾರಿ ಬಿ.ಎನ್‌. ಚವ್ಹಾಣ, ಹೈಕೋರ್ಟ್‌ನ ಎ.ಆರ್‌.ಜಿ. ಅಸೋಡೆ, ಜಿಪಂ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಹಾಜರಿದ್ದರು.

ಶರಣಸಿರಸಗಿ ಗ್ರಾಮದ 40 ಉದ್ಯೋಗ ಖಾತ್ರಿ ಕಾರ್ಮಿಕರಿಂದ 30 ದಿನಗಳ ಕಾಲ ಹೈಕೋರ್ಟ್‌ ಆವರಣದಲ್ಲಿ ಸೂಬಾಬುಲ್‌ ಗಿಡಗಳನ್ನು ಹಾಗೂ ಹುಲ್ಲು ಸ್ವತ್ಛಗೊಳಿಸುವುದು, ಗುಂಡಿ ತೋಡುವುದು ಹಾಗು ಸಸಿಗಳನ್ನು ನೆಡುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.