ಅರ್ಥಪೂರ್ಣ ಹೈಕ ವಿಮೋಚನಾ ದಿನ ಆಚರಣೆಗೆ ತೀರ್ಮಾನ

Team Udayavani, Sep 9, 2017, 10:08 AM IST

gul-3.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನವನ್ನು ನಗರ ಮತ್ತು ಜಿಲ್ಲೆಯಾದ್ಯಂತ ಸೆ.17ರಂದು ಅರ್ಥಪೂರ್ಣವಾಗಿ ಆಚರಿಸಲು ಹಾಗೂ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಶುಕ್ರವಾರ ನಡೆದ ಹೈದ್ರಾಬಾದ ಕರ್ನಾಟಕ ಪ್ರದೇಶ ವಿಮೋಚನಾ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ತೀರ್ಮಾನಿಸಿತು.

ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೆ.17ರಂದು ಬೆಳಗ್ಗೆ 8:30 ಗಂಟೆಗೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪುತ್ಥಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾಲಾರ್ಪಣೆ ಮಾಡುವರು.ನಂತರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ (ಡಿಎಆರ್‌) ಮೈದಾನದಲ್ಲಿ ಬೆಳಗ್ಗೆ 9:00
ಗಂಟೆಗೆ ಹೈದ್ರಾಬಾದ ಕರ್ನಾಟಕ ವಿಮೋಚನೆ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡ ಸ್ವಾತಂತ್ರ್ಯಯೋಧರಿಗೆ ಸನ್ಮಾನಿಸಲಾಗುವುದು. ನಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹೈದ್ರಾ ಬಾದ ಕರ್ನಾಟಕ ವಿಮೋಚನೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಜಿಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ
ನೆರವೇರಿಸಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಪೊಲೀಸ ಪರೇಡ್‌ ಮೈದಾನದಲ್ಲಿ ನಡೆಯುವ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಯಿತು. ಹಾಜರಾಗದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಶುಕ್ರವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಗೆ ಗೈರು ಹಾಜರಾದ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ, ನಗರ ನೀರು ಸರಬರಾಜು ಮಂಡಳಿ ಮತ್ತು ಜೆಸ್ಕಾಂ
ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಮಾರಂಭದ ಸೂಕ್ತ ವೇದಿಕೆ ನಿರ್ಮಾಣ ಹಾಗೂ ಸಮಾರಂಭಕ್ಕೆ ಆಗಮಿಸುವ ಹೈಕೋರ್ಟ್‌ ನ್ಯಾಯಾಧೀಶರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ, ಹೈದ್ರಾಬಾದ ಕರ್ನಾಟಕ ವಿಮೋಚನಾ ಚಳವಳಿ ಹೋರಾಟಗಾರರಿಗೆ, ಗಣ್ಯವ್ಯಕ್ತಿಗಳಿಗೆ, ಪತ್ರಕರ್ತರಿಗೆ ಹಾಗೂ ಅಧಿಕಾರಿಗಳಿಗೆ ಬಿಸಿಲು ಬೀಳದಂತೆ, ಮಳೆ ಬರುವ ಸಂಭವ ಇರುವುದರಿಂದ ವಾಟರ್‌ ಪ್ರೂಫ್‌ ಶ್ಯಾಮಿಯಾನ, ಆಸನಗಳ ವ್ಯವಸ್ಥೆ ಮತ್ತು ಸಮರ್ಪಕ ವಿದ್ಯುತ್‌ ಮತ್ತು ಧ್ವನಿವರ್ಧಕ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.

ದಿನಾಚರಣೆ ಅಂಗವಾಗಿ ಸಾಮೂಹಿಕ ಪಥಸಂಚಲನ, ಕವಾಯತು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಆಯೋಜಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತ ಸ್ವತ್ಛಗೊಳಿಸಬೇಕು. ವಾಟರ್‌ ಬೋರ್ಡ್‌ ಮತ್ತು ಮಹಾನಗರ ಪಾಲಿಕೆಯಿಂದ ಧ್ವಜಾರೋಹಣ ನಡೆಯುವ ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಅಂಬ್ಯುಲೆನ್ಸ್‌ ಮತ್ತು ಅಗ್ನಿಶಾಮಕದಳದ ವ್ಯವಸ್ಥೆ, ಮಕ್ಕಳಿಗೆ ಸಿಹಿ ತಿಂಡಿ ನೀಡುವ ವ್ಯವಸ್ಥೆ, ಸಮಾರಂಭದಲ್ಲಿ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಜಿಲ್ಲಾ ಹೆಚ್ಚುವರಿ ಪೊಲೀಸ ಅಧೀಕ್ಷಕ ಜಯಪ್ರಕಾಶ, ವಿಧಾನ ಪರಿಷತ್‌ ಮಾಜಿ ಶಾಸಕ ಶಶೀಲ ಜಿ.ನಮೋಶಿ, ಹೈದ್ರಾಬಾದ ಕರ್ನಾಟಕ ವಿಮೋಚನಾ ಸಮಿತಿ ಸದಸ್ಯ ಲಕ್ಷ್ಮಣ ದಸ್ತಿ, ಸಾಹಿತಿ ಪ್ರೊ| ವಸಂತ ಕುಷ್ಠಗಿ, ಗಣ್ಯರಾದ ಶಿವರಾಜ ಪಾಟೀಲ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.