ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವ ಸರಳ

Team Udayavani, Oct 18, 2021, 11:39 AM IST

8

ಸೇಡಂ: ಕಲ್ಯಾಣ ನಾಡು ಸಾಧು, ಸತ್ಪುರುಷರು, ಆದರ್ಶ ವ್ಯಕ್ತಿಗಳು, ಧರ್ಮ ಪ್ರಚಾರಕರು ನಡೆದಾಡಿದ ನಾಡಾಗಿದೆ. ಈ ನಾಡಿನ ಧಾರ್ಮಿಕ ಕ್ಷೇತ್ರಗಳು ಅಭಿವೃದ್ಧಿಯಾಗಿ ಪ್ರವಾಸಿ ತಾಣವನ್ನಾಗಿಸಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ| ಬಸವರಾಜ ಪಾಟೀಲ ಸೇಡಂ ಹೇಳಿದರು.

ಪಟ್ಟಣದ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ವಿಜಯದಶಮಿ ಉತ್ಸವದ ನಿಮಿತ್ತ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಏರ್ಪಡಿಸಿದ ಔತಣಕೂಟದಲ್ಲಿ ಅವರು ಮಾತನಾಡಿದರು.

ದೇಶದ ವಿವಿಧ ಭಾಗದ ಜನರಿಗೆ ಕಲ್ಯಾಣ ನಾಡನ್ನು ಪರಿಚಯಿಸುವ ಕೆಲಸವಾಗಬೇಕು. ಈ ನಾಡಿನ ಕೀರ್ತಿ ಎಲ್ಲೆಡೆ ಹಬ್ಬಬೇಕು. ವಿಶ್ವ ಮಟ್ಟದ ಜನರನ್ನು ಆಕರ್ಷಿಸುವ ಕೇಂದ್ರ ಇದಾಗಬೇಕು ಎಂದರು.

ವಿಶ್ವ ಹಿಂದೂ ಪರಿಷತ್‌ ಉತ್ತರ ಪ್ರಾಂತದ ಸಹ ಸಂಘಟನಾ ಕಾರ್ಯದರ್ಶಿ ಮನೋಹರ ಮಠ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಮತಾಂತರಕ್ಕೆ ಕಡಿವಾಣ ಹಾಕಬೇಕಿದೆ. ಪ್ರತಿಯೊಬ್ಬರೂ ಧರ್ಮ ರಕ್ಷಣೆ ಪಣ ತೊಡಬೇಕು. ಮನುಷ್ಯ ಮನುಷ್ಯರ ನಡುವೆ ಅಂತರ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಂದುಗೂಡಬೇಕು ಎನ್ನುವ ಉದ್ದೇಶಕ್ಕೆ ಶಾಸಕರು ಔತಣಕೂಟ ಏರ್ಪಡಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ದೇಶದ ಪ್ರಧಾನಿ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಿದ್ದಾರೆ ಎಂದು ಹೇಳಿದರು.

ಸಂಸದ ಡಾ| ಉಮೇಶ ಜಾಧವ ಮಾತನಾಡಿ, ಶಾಸಕ ರಾಜಕುಮಾರ ಪಾಟೀಲ ಸಾಮಾಜಿಕ ಹರಿಕಾರರಾಗಿದ್ದು, ಮುಚ್ಚುವ ಹಂತದಲ್ಲಿದ್ದ ಡಿಸಿಸಿ ಬ್ಯಾಂಕ್‌ನ್ನು ತಮ್ಮ ಕೈಗೆ ತೆಗೆದುಕೊಂಡು ಪುನಶ್ಚೇನಗೊಳಿಸುವ ಮೂಲಕ ರೈತರ ಬಾಳು ಹಸನಾಗಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಪ್ರಶಂಶಿಸಿದರು.

ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ, ಹಾಲಪಯ್ಯ ಮಠದ ಪಂಚಾಕ್ಷರಿ ಸ್ವಾಮೀಜಿ ಆಶೀರ್ವಚನ ನೀಡಿದರು. ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರು, ರಾಯಕೋಡದ ಕಟ್ಟಿಮನಿ ಸಂಸ್ಥಾನದ ಚಿಕ್ಕ ಶಿವಲಿಂಗೇಶ್ವರ ಸ್ವಾಮೀಜಿ, ಮಳಖೇಡದ ಶ್ರೀ ವೀರಗಂಗಾಧರ ಶಿವಾಚಾರ್ಯರು, ಪುರಸಭೆ ಅಧ್ಯಕ್ಷೆ ಚನ್ನಮ್ಮ ಪಾಟೀಲ ಇದ್ದರು. ಹಣಮಂತರಾವ್‌ ಪಾಟೀಲ ಬಿಬ್ಬಳ್ಳಿ, ಶರಣು ಕೆರಳ್ಳಿ ಪ್ರಾರ್ಥಿಸಿದರು, ಮುಖಂಡ ಬಸವರಾಜ ರೇವಗೊಂಡ ಸ್ವಾಗತಿಸಿದರು, ವಿರೇಶ ಹೂಗಾರ ನಿರೂಪಿಸಿದರು, ಪುರಸಭೆ ಉಪಾಧ್ಯಕ್ಷ ಶಿವಾನಂದಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.