ಶರಣನ ಸಂಸಾನದ ಶೈಕಣಿಕ ದಾಸೋಹ ಅನನ್ಯ


Team Udayavani, Jul 10, 2017, 11:59 AM IST

10-gub-3.jpg

ಕಲಬುರಗಿ: ಪ್ರತಿ ವರ್ಷ 25 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಹೊರಹೊಮ್ಮುತ್ತಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅದರಲ್ಲೂ ಸಂಘದ ಅಧ್ಯಕ್ಷರೂ ಆಗಿರುವ ಡಾ| ಶರಣಬಸವಪ್ಪ ಅಪ್ಪ ಅವರ ಶೈಕ್ಷಣಿಕ ದಾಸೋಹ ಅನನ್ಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಶರಣಪ್ಪ ಮಟ್ಟೂರ ಹೇಳಿದರು. 

ಸಂಘದ ಅಪ್ಪಾ ಶತಮಾನೋತ್ಸವ  ಸಭಾಂಗಣದಲ್ಲಿ ರವಿವಾರ ನಡೆದಶರಣಬಸವೇಶ್ವರ ವಸತಿ ಶಾಲೆ ಹಾಗೂ ಕಾಲೇಜಿನ
ಮಿನಿ ಘಟಿಕೋತ್ಸವದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ವೈದ್ಯಕೀಯವೊಂದನ್ನು ಬಿಟ್ಟು ಶಿಕ್ಷಣ ಕ್ಷೇತ್ರದ ಎಲ್ಲ ಕೋರ್ಸ್‌ಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿರುವುದು ಸಣ್ಣದಲ್ಲ. ಶರಣರು ಈ ಹಿಂದೆ ಅನ್ನದಾಸೋಹಗೈದರೆ ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಅವರು ಅಕ್ಷರ ದಾಸೋಹ ಸೂತ್ರ ಅಳವಡಿಸಿಕೊಂಡಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಹೈದ್ರಾಬಾದ್‌ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಡಾ| ಅಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರಕುವುದು ಹೆಚ್ಚು ಸಮಂಜಸವಾಗಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮಟ್ಟೂರ ಅವರು ಹೇಳಿದರು.

ಸತ್ಕಾರ: ನೀಟ್‌, ಜೆಇಇ, ಕೆ-ಸೆಟ್‌ ಹಾಗೂ ಪಿಯುಸಿಯಲ್ಲಿ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುತ್ತಮ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಪ್ರಮುಖವಾಗಿ ನೀಟ್‌ನಲ್ಲಿ ರಾಜ್ಯಕ್ಕೆ 41ನೇ ರ್‍ಯಾಂಕ್‌ ಪಡೆದ
ಸಂತೋಷಿ ಕೋರವಾರಗೆ ಲಕ್ಷ ರೂ. ಪ್ರೋತ್ಸಾಹ ಧನದೊಂದಿಗೆ ಸನ್ಮಾನಿಸಿದ್ದು ವಿಶೇಷವಾಗಿತ್ತು. ಅದೇ ರೀತಿ ನೀಟ್‌ನಲ್ಲಿ 352ನೇ ರ್‍ಯಾಂಕ್‌ ಹಾಗೂ ಪಿಯುನಲ್ಲಿ ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದ ಮನೋಜ ಟಿ., 561ನೇ ರ್‍ಯಾಂಕ್‌
ಶರಣಪ್ರಸಾದ ಕೋಲಾರ, 581ನೇ ರ್‍ಯಾಂಕ್‌ ಪಡೆದ ಅಖೀಲೇಷ, ಜೆಇಇ ಅಡ್ವಾನ್ಸ್‌ದಲ್ಲಿ ರ್‍ಯಾಂಕ್‌ ಪಡೆದ ಮನೋಜ ರಾಠೊಡ, ಜ್ಯೋರ್ತಿಲಿಂಗ ಜತೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ಶ್ರೀರಕ್ಷಾ ಅವಧಾನಿ, ಮೊಹಮ್ಮದ್‌
ಅದ್ನಾನ್‌ ಇಡ್ರೇಸ್‌, ಕಾರ್ತಿಕ ಶೆಟ್ಟರ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಕಾರ್ಯಾಧ್ಯಕ್ಷ ಬಸವರಾಜ ದೇಶಮುಖ ಮಾತನಾಡಿ, ಡಾ| ಅಪ್ಪ ಅವರು ದೂರದೃಷ್ಟಿ ಹಾಗೂ ನಿಷ್ಠುರ ಹಾದಿಯಲ್ಲಿ ಸಂಸ್ಥೆ ಮುನ್ನಡೆಸಿದ್ದರಿಂದ ಸಂಸ್ಥೆ ಈಗ ಎತ್ತರಕ್ಕೆ ಬೆಳೆಯಲು ಕಾರಣವಾಗಿದೆ. ರಾಜ್ಯದ ಪ್ರತಿಷ್ಠಿತ ಪಬ್ಲಿಕ್‌ ಶಾಲೆಗಳಲ್ಲಿ ತಮ್ಮದು ಮೊದಲನೆಯದಾಗಿ ನಿಲ್ಲುವುದರಲ್ಲಿ ಎಲ್ಲರ ಪರಿಶ್ರಮ ಅಡಗಿದೆ ಎಂದು ಹೇಳಿದರು.

ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ಶರಣಬಸಪ್ಪ ಹರವಾಳ ಸಹ ಅತಿಥಿಗಳಾಗಿ ಮಾತನಾಡಿ, ಒಂದು ಔಷಧಿಯಿಂದ ಹೇಗೆ ರೋಗಿಯನ್ನು ಗುಣಪಡಿಸಲಾಗುತ್ತದೆಯೋ ಅದೇ ರೀತಿ ಸಮಾಜದಲ್ಲಿ ಒಂದು ಉನ್ನತ ಹುದ್ದೇಗೇರಿಸಿ ಸಮಾಜದ ನ್ಯೂನತೆ ಸರಿಪಡಿಸಲು ತಾವೆಲ್ಲ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಎಸ್‌ಐ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ನಾಗರಾಜ, ಗುಲಬರ್ಗಾ ವೈದ್ಯಕೀಯ ಸಂಸ್ಥೆ ಪ್ರಿನ್ಸಿಪಾಲ್‌ ಡಾ| ಉಮೇಶ ಎಸ್‌.ಆರ್‌. ಗೌರವ ಅತಿಥಿಗಳಾಗಿ
ಆಗಮಿಸಿದ್ದರು. ಪ್ರಾಚಾರ್ಯರಾದ ರಾಮಕೃಷ್ಣರೆಡ್ಡಿ ಇದ್ದರು. ಉಪನ್ಯಾಸಕ ಶಂಕರಗೌಡ ಹೊಸಮನಿ ನಿರೂಪಿಸಿದರು.

ಯುಪಿಎಸ್ಸಿ ರ್‍ಯಾಂಕ್‌ ವಿಜೇತರಿಗೆ ವಿಶೇಷ ಸತ್ಕಾರ ಮಿನಿ ಘಟಿಕೋತ್ಸವದಲ್ಲಿ ಪ್ರಸಕ್ತವಾಗಿ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ ದೇಶಕ್ಕೆ 25ನೇ ರ್‍ಯಾಂಕ್‌ ಪಡೆದ ಎಸ್‌ಬಿಆರ್‌ನ ಹಿಂದಿನ ವಿದ್ಯಾರ್ಥಿಗಳಾದ ಶೇಖ್‌ ತನ್ವೀರ್‌ ಆಸೀಫ್‌ ಹಾಗೂ 376ನೇ ರ್‍ಯಾಂಕ್‌ ಪಡೆದ ಅಮರೇಶ್ವರ ಪಾಟೀಲ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಸನ್ಮಾನಿತಗೊಂಡು ಮಾತನಾಡಿದ ಶೇಖ್‌ ತನ್ವಿರ್‌ ಆಸೀಫ್‌, ಅಮರೇಶ್ವರ ಪಾಟೀಲ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತಡ ಇದ್ದೇ ಇರುತ್ತದೆ. ಆದರೆ ಕಠಿಣ ಪರಿಶ್ರಮ ಹಾಗೂ ಪ್ರಮುಖವಾಗಿ ಮನಸ್ಸಿನೊಳಗೆ ಮಾಡುವ ಛಲಗಾರಿಕೆ ಇದ್ದಲ್ಲಿ ಸುಲಭವಾಗಿ ಎದುರಿಸಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.