

Team Udayavani, Apr 10, 2017, 3:30 PM IST
ಚಿತ್ತಾಪುರ: ವಾಡಿ ಪುರಸಭೆ 23 ವಾಡ್ìಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 13 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದು ಕ್ಷೇತ್ರದ ಅಭಿವೃದ್ಧಿಗೆ ಸಂದ ಜಯವಾಗಿದೆ ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದರು.
ದೂರವಾಣಿ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಮತದಾರರು ಕಾಂಗ್ರೆಸ್ ಪರ ಇದ್ದರೂ. ಆದರೆ ಕಳೆದ ಬಾರಿ ವಾಡಿ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಪಕ್ಷದಿಂದ 11 ಸದಸ್ಯರು ಗೆದ್ದಿದ್ದರು.
ಆದರೆ ಪಕ್ಷೇತರ ಅಭ್ಯರ್ಥಿಗಳು 5 ಜನ ಆಯ್ಕೆಯಾಗಿ ಬಿಜೆಪಿಗೆ ಬೆಂಲ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಆಗಲಿಲ್ಲ. ಆದರೆ ಈ ಬಾರಿ ಮತ್ತೂಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಲದ ಚುನಾವಣೆಯಲ್ಲಿ 10-12 ವಾಡ್ ìಗಳಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂಬ ವಿಶ್ವಾಸವಿತ್ತು. ಆದರೆ ನೀರಿಕ್ಷೆಗೂ ಮೀರಿ ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸವನ್ನುಂಟು ಮಾಡಿದೆ ಎಂದು ತಿಳಿಸಿದರು.
ತಾವು ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಮೂಲಸೌಕರ್ಯ ಒದಗಿಸಿದ್ದು ಮತ್ತು ಅನೇಕ ಅಭಿವೃದ್ಧಿ ಕೆಲಸ ಮಾಡಿರುವುದನ್ನು ಗಮನಿಸಿದ ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ ಎಂದು ತಿಳಿಸಿದರು.
ಕೆಲವು ವಾರ್ಡ್‌ಗಳಲ್ಲಿ ಬಿಜೆಪಿಯವರು ಹಣದ ಹೊಳೆಯೇ ಹರಸಿದ್ದರಿಂದ ಬಿಜೆಪಿ ಅಭ್ಯರ್ಥಿಗಳು ಗೆದಿದ್ದಾರೆ. ಉಳಿದ 13 ವಾರ್ಡ್‌ಗಳಲ್ಲಿ ಬಿಜೆಪಿಯವರ ಆಟ ನಡೆಯಲಿಲ್ಲ. ಇಲ್ಲಿ ಮತದಾರರು ಅಭಿವೃದ್ಧಿಗೆ ಮೆಚ್ಚಿ ಮತ ನೀಡಿದ್ದಾರೆ ಎಂದು ತಿಳಿಸಿದರು.
Ad
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್ ತಡೆ
ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೇಸ್ ರೀತಿ ಮತ್ತೆರಡು ಭೀಭತ್ಸ ಕೃತ್ಯ!
Recruitments: ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ
Kalaburagi: ಆರ್‌ಎಸ್‌ಎಸ್ ನ ನೂರು ವರ್ಷದ ಇತಿಹಾಸ ಜನರಿಗೆ ತಿಳಿಸಿ: ಸಚಿವ ಪ್ರಿಯಾಂಕ್ ಖರ್ಗೆ
Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ
ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಆ ನಟಿ ʼಬಿಗ್ ಬಾಸ್ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್ ಸಂಗತಿ ರಿವೀಲ್
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
You seem to have an Ad Blocker on.
To continue reading, please turn it off or whitelist Udayavani.