ಶವವೂ ಸಿಗಲಿಲ್ಲ; ಪರಿಹಾರವೂ ಬರಲಿಲ್ಲ!

Team Udayavani, May 6, 2022, 11:42 AM IST

8govt

ಚಿಂಚೋಳಿ: ತಾಲೂಕಿನಲ್ಲಿ ಕಳೆದ ವರ್ಷ 2021ರ ಜುಲೈ 17ರಂದು ತುಂಬಿ ಹರಿಯುತ್ತಿದ್ದ ಮುಲ್ಲಾಮಾರಿ ನದಿಯ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದ ಪೋತಂಗಲ್‌ ಗ್ರಾಮದ ಬಡ ರೈತ ಪ್ರಹ್ಲಾದ ದಶರಥ (30) ಎಂಬಾತನ ಶವ ಇನ್ನೂ ಪತ್ತೆಯಾಗಿಲ್ಲ. ಸರ್ಕಾರದಿಂದಲೂ ಯಾವುದೇ ಪರಿಹಾರವೂ ದೊರಕಿಲ್ಲ. ಇದರಿಂದ ಕುಟುಂಬಸ್ಥರು ಕಣ್ಣೀರಿನಲ್ಲಿ ಕಾಲ ಕಳೆಯುವಂತಾಗಿದೆ.

ಪ್ರಹ್ಲಾದ ತನ್ನ ಉಪಜೀವನಕ್ಕಾಗಿ ಕೆಲಸ-ಕಾರ್ಯ ಮಾಡಿಕೊಂಡು ಬರಲು ತೆಲಂಗಾಣ ರಾಜ್ಯದ ಬಶೀರಾಬಾದ್‌ ನಗರಕ್ಕೆ ಹೋಗಿ ಮರಳಿ ತನ್ನ ಹೊಲದಲ್ಲಿದ್ದ ಎತ್ತುಗಳೊಂದಿಗೆ ನದಿ ದಾಟಿಕೊಂಡು ಮನೆಗೆ ಬರುತ್ತಿದ್ದಾಗ ನಡು ನೀರಿನಲ್ಲಿ ಕಾಲು ಜಾರಿ ಕೊಚ್ಚಿ ಹೋಗಿದ್ದಾನೆ. ಪ್ರಹ್ಲಾದನ ಶವ ಪತ್ತೆಗೆ ಎಸ್‌ ಡಿಆರ್‌ಎಫ್‌ ತಂಡ, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಗ್ರಾಮದಲ್ಲಿ ಬಿಡಾರ ಹೂಡಿ ಶೋಧ ಕಾರ್ಯ ನಡೆಸಿದ್ದರು. ಶವ ಸಿಗದ ಕಾರಣ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ಆನಂತರ ಸರ್ಕಾರದಿಂದ ಯಾವುದೇ ಪರಿಹಾರವೂ ದೊರಕಿಲ್ಲ.

ಪ್ರಹ್ಲಾದ ದಶರಥನ ತಂದೆ-ತಾಯಿಗೆ ನಾಲ್ವರು ಪುತ್ರಿಯರು, ಇಬ್ಬರು ಪುತ್ರರು. ಎರಡನೇ ಮಗ ರಘುನಾಥ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟು ಐದು ವರ್ಷಗಳೇ ಕಳೆದಿವೆ. ಇಬ್ಬರು ತಂಗಿಯರ ಮದುವೆಯೂ ಆಗಿಲ್ಲ. ಮೃತನ ಪತ್ನಿ ಮಂಜುಳಾ ತನ್ನೆರಡು ವರ್ಷದ ಮಗನೊಂದಿಗೆ ಜೀವನ ಕಳೆಯುವುದೇ ಕಷ್ಟವಾಗಿದೆ. ಈಗ ಪ್ರಹ್ಲಾದನ ತಂಗಿಯ ಮದುವೆ ನಿಶ್ಚಯವಾಗಿದೆ. ಕುಟುಂಬಕ್ಕೆ ಖರ್ಚಿನ ಚಿಂತೆ ಕಾಡುತ್ತಿದೆ. ದುಡಿದು ತಂದು ಕುಟುಂಬ ನಡೆಸುತ್ತಿದ್ದ ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡದೇ ನಿರ್ಲಕ್ಷ್ಯ ತೋರುತ್ತಿದೆ ಎಂದು ಮೃತನ ಅಳಿಯ ಸಂತೋಷ ಪೋತಂಗಲ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಘಟನಾ ಸ್ಥಳಕ್ಕೆ ಬಂದು ಪರಿಸ್ಥಿತಿ ವೀಕ್ಷಿಸಿ ವೈಯಕ್ತಿಕ ಪರಿಹಾರ ನೀಡಿದ್ದಾರೆ. ಕಂದಾಯ ಅಧಿಕಾರಿಗಳು ಪರಿಶೀಲಿಸಿ 11 ತಿಂಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ದೊರಕಿಲ್ಲ. ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು. ವೆಂಕಟರೆಡ್ಡಿ ಪಾಟೀಲ, ಗ್ರಾಪಂ ಅಧ್ಯಕ್ಷ, ಜಟ್ಟೂರ

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.