ಜಿಡಗಾದಲ್ಲಿ ನಾಳೆ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Team Udayavani, May 26, 2022, 11:38 AM IST

5DC

ಆಳಂದ: ರೈತರ ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್‌ ಮೇ 27ರಂದು ತಾಲೂಕಿನ ಜಿಡಗಾದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆ ವರೆಗೆ ಗ್ರಾಮದಲ್ಲಿಯೇ ಜಿಲ್ಲಾಧಿಕಾರಿಗಳು ಇದ್ದು, ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಹಾಗೂ ಕಂದಾಯ ಇಲಾಖೆಯ ಇತರೇ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿ ಕಾರಿಗಳ ಅಹವಾಲು ಸ್ವೀಕಾರ ಸಮಾರಂಭವನ್ನು ನವಕಲ್ಯಾಣ ಮಠದಲ್ಲಿ ಆಯೋಜಿಸಲಾಗಿದೆ.

ಗ್ರಾಮದಲ್ಲಿನ ಎಲ್ಲ ರೈತರ ಪಹಣಿಯಲ್ಲಿ ಲೋಪದೋಷ, ಪಹಣಿ ಕಾಲಂ ನಂ.3 ಮತ್ತು ಆಕಾರಬಂದ್‌, ತಾಳೆ ಹೊಂದಿರುವ ಕುರಿತು ಖಚಿತಪಡಿಸಿಕೊಳ್ಳುವುದು, ಎಲ್ಲ ಪಹಣಿಗಳಲ್ಲಿಯೂ ಕಾಲಂ ನಂ.3, ಕಾಲಂ ನಂ.9 ತಾಳೆ ಹೊಂದುವಂತೆ ಸೂಕ್ತ ಆದೇಶ ಹೊರಡಿಸುವುದು. ಗ್ರಾಮದಲ್ಲಿ ಪೌತಿ (ಮರಣ) ಹೊಂದಿದ ಖಾತೆದಾರ ಹೆಸರನ್ನು ಪಹಣಿ ಕಾಲಂ 9ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮದ ಎಲ್ಲ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯದ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ಕೈಗೊಳ್ಳುವರು. ಅಲ್ಲದೇ ಬಿಟ್ಟು ಹೋದಂತ ಅರ್ಹ ಪ್ರಕರಣಗಳ ಕುರಿತು ಪರಿಶೀಲಿಸಿ ಪರಿಹಾರ ಒದಗಿಸಲಿದ್ದಾರೆ.

ಗ್ರಾಮದಲ್ಲಿ ಸ್ಮಶಾನ ಭೂಮಿ ಲಭ್ಯತೆ ಕುರಿತು ಮಾಹಿತಿ ಕಲೆಹಾಕುವರು. ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ, ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳಲಾಗುವುದು. ಆಧಾರ ಕಾರ್ಡ್‌ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಆನಲೈನ್‌ ಮುಖಾಂತರ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಯೋಜನೆಗಳ ಅಡಿಯಲ್ಲಿನ ಸೌಲಭ್ಯಗಳ ಕುರಿತು ಜನತೆಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ವಾಸ್ತವ್ಯ ನಡೆಯಲಿದೆ.

ಮೇ 27ರಂದು ತಾಲೂಕಿನ ಜಿಡಗಾದಲ್ಲಿನ “ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ’ ಕಾರ್ಯಕ್ರಮ ಕುರಿತು ಗ್ರಾಮದಲ್ಲಿ ಡಂಗೂರ ಸಾರಬೇಕು. ಒಟ್ಟಿನಲ್ಲಿ ಜನರ ಕುಂದುಕೊರತೆ ನಿವಾರಣೆ ಆಗಬೇಕು. ಗ್ರಾಮೀಣ ಜನರ ಹಲವಾರು ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ರಾಜ್ಯ ಸರ್ಕಾರದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಪರಿಕಲ್ಪನೆಯಡಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. -ಸುಭಾಷ ಗುತ್ತೇದಾರ, ಶಾಸಕ

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಜನರ ಮನೆಬಾಗಿಲಿಗೆ ಬರುತ್ತಿರುವುದರಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಧಿಕಾರಿಗಳು ಜಿಡಗಾ ಗ್ರಾಮ ವಾಸ್ತವ್ಯ ಕೈಗೊಳ್ಳಲಿದ್ದು, ಗ್ರಾಮಸ್ಥರು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಬಂದು ದಾಖಲೆಗೆ ಸಂಬಂಧಿತ ತೊಂದರೆಗಳಿದ್ದರೆ ಗ್ರಾಮಸ್ಥರು ಬಗೆಹರಿಸಿಕೊಳ್ಳಬೇಕು. -ಯಲ್ಲಪ್ಪ ಸುಬೇದಾರ, ತಹಶೀಲ್ದಾರ್‌

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.