ಗಂಡು ಮಗು ಜನಿಸಿದ ಎರಡನೇ ದಿನಕ್ಕೆ ತಂದೆಯನ್ನು ಬಲಿ ಪಡೆದ ಕೋವಿಡ್.!


Team Udayavani, May 23, 2021, 11:30 AM IST

ಕರುಣೆಯಿಲ್ಲದ ಕೋವಿಡ್ : ಗಂಡು ಮಗು ಜನಿಸಿ ಎರಡನೇ ದಿನಕ್ಕೆ ತಂದೆಯನ್ನು ಬಲಿ ಪಡೆದ ಕೋವಿಡ್.!

ಕಲಬುರಗಿ: ಹಲವು ಕುಟುಂಬಗಳಲ್ಲಿ ಕೋವಿಡ್ ಮಹಾಮಾರಿ ಸೋಂಕು ಕಣ್ಣೀರಿನ ಹೊಳೆಯನ್ನೇ ಹರಿಸುವಂತೆ ಮಾಡುತ್ತಿದ್ದು, ತನಗೆ ಮಗು ಹುಟ್ಟಿದ ಎರಡನೇ ದಿನಕ್ಕೆ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.

32 ವರ್ಷದ ಸುಭಾಷ್ ತಾವರಖೇಡ ಎಂಬಾತನೇ ಕೋವಿಡ್ ಗೆ ಬಲಿಯಾದ ತಂದೆ. ಕೋವಿಡ್ ಸೋಂಕು ಕಾಣಿಸಿಕೊಂಡ ಪರಿಣಾಮ ಸುಭಾಷ್  ಕಳೆದ15 ದಿನಗಳಿಂದ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತ, ತುಂಬು ಗರ್ಭಿಣಿಯಾಗಿದ್ದ ಈತನ ಪತ್ನಿ ಸರಸ್ವತಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಬುಧವಾರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು.

ಇದನ್ನೂ ಓದಿ : ಸುಶೀಲ್ ಕುಮಾರ್ ಬಂಧನ ಊಹಾಪೋಹ: ಅಧಿಕೃತ ಮಾಹಿತಿ ನೀಡಿದ ದೆಹಲಿ ಪೊಲೀಸರು

ಆದರೆ, ಮಗು ಜನಿಸಿದ ಎರಡನೇ ದಿನಗಳ ನಂತರ ಅಂದರೆ ಶುಕ್ರವಾರ ಸುಭಾಷ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌ ಎಂದು ಮೂಲಗಳು ತಿಳಿಸಿವೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಇನ್ನೂ ಆಸ್ಪತ್ರೆಯಲ್ಲೇ ಇದ್ದಾರೆ.

ಸುಭಾಷ್ ಮತ್ತು ಸರಸ್ವತಿ ದಂಪತಿಗೆ ಇದು ಚೊಚ್ಚಲ ಮಗುವಾಗಿದೆ. ಪುಟ್ಟ ಮಗುವನ್ನು ಮುದ್ದಾಡುತ್ತಾ, ಸಂತಸದಲ್ಲಿರಬೇಕಿದ್ದ ತಂದೆ ಕೋವಿಡ್ ಗೆ ಬಲಿಯಾಗಿರುವುದು ದುರಂತವೇ ಸರಿ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.