ಸಾರಿಗೆ ಸಂಸ್ಥೆಯ ಸಾಫ್ಟ್ವೇರ್‌ಗೆ ಕನ್ನ; ಲಕ್ಷಾಂತರ ರೂ. ನಾಮ!

Team Udayavani, Jan 10, 2019, 9:14 AM IST

gul-3.jpg

ಬೀದರ: ಸಾರಿಗೆ ಸಂಸ್ಥೆ ಸಾಫ್ಟ್ವೇರ್‌ಗೆ ಕನ್ನ ಹಾಕಿದ ಸಾರಿಗೆ ಸಂಸ್ಥೆ ಸಿಬ್ಬಂದಿ ಲಕ್ಷಾಂತರ ರೂ. ದುರುಪಯೋಗ ಮಾಡಿಕೊಂಡ ಪ್ರಕರಣವೊಂದು ಬೀದರ ಡಿಪೋದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಡಿಪೋದ ಆಡಿಟ್ ಕ್ಲರ್ಕ್‌ (ಲೆಕ್ಕ ಪರಿಶೋಧನಾ) ಕಾರ್ಯ ನಿರ್ವಹಿಸುತ್ತಿರುವ ಅಮರ್‌ ಸಾಫ್ಟ್ವೇರ್‌ನಲ್ಲಿ ಸಮಸ್ಯೆ ಉಂಟು ಮಾಡಿ ಲಕ್ಷಾಂತರ ರೂ. ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಇದುವರೆಗೂ ಯಾವುದೇ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಸಾರಿಗೆ ಸಂಸ್ಥೆಯಡಿ ತನಿಖೆ ನಡೆಸುತ್ತಿದ್ದು, ಒಟ್ಟಾರೆ ಎಷ್ಟು ಮೊತ್ತದ ಹಣ ಸಿಬ್ಬಂದಿ ಪಾಲಾಗಿದೆ ಎಂಬುವುದು ತನಿಖೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ಒಟ್ಟು 556 ಸಾರಿಗೆ ಸಂಸ್ಥೆ ಬಸ್‌ಗಳು ಕಾರ್ಯನಿವರ್ಹಿಸುತ್ತಿವೆ. ಪ್ರತಿನಿತ್ಯ 2400 ಸುತ್ತು ಬಸ್‌ ಸಂಚಾರ ಮಾಡುತ್ತಿವೆ. ಪ್ರತಿ ನಿತ್ಯ ಸರಾಸರಿ 55 ಲಕ್ಷ ರೂ. ಆದಾಯ ಸಂಗ್ರಹವಾಗುತ್ತಿದೆ. ಸಾರಿಗೆ ಸಂಸ್ಥೆಯಲ್ಲಿ ಆಧುನಿಕ ಯಂತ್ರಗಳನ್ನು ಕೂಡ ಅಳವಡಿಸಲಾಗಿದೆ. ಸಂಸ್ಥೆ ಸಾಫ್ಟ್ವೇರ್‌ಗೆ ಕನ್ನ ಹಾಕಿದ ಸಿಬ್ಬಂದಿ ಕೋಟಿಗೂ ಅಧಿಕ ಹಣ ದುರುಪಯೋಗ ಮಾಡಿಕೊಂಡಿರುವ ಸಾಧ್ಯತೆ ಇದೆ.

ಲೂಟಿ ಮಾಡಿದ್ದು ಹೇಗೆ?: 2014ರಿಂದ ನಿರಂತರವಾಗಿ ಪ್ರತಿನಿತ್ಯ ವಿವಿಧ ಊರುಗಳಿಗೆ ಸಂಚರಿಸಿ ಡಿಪೋಗೆ ಬರುವ ಬಸ್‌ಗಳು ಟಿಕೆಟ್ ಮೂಲಕ ಸಂಗ್ರಹಿಸಲಾಗುವ ಹಣವನ್ನು ಸಂಸ್ಥೆಗೆ ಒಪ್ಪಿಸಿ ಲೆಕ್ಕಪತ್ರ ಸರಿ ಮಾಡಿಕೊಂಡು ಮರಳುವುದು ನಿಯಮ. ಹಣ ವ್ಯವಹಾರದ ಕುರಿತು ಎಲ್ಲವೂ ಸಂಸ್ಥೆ ಕಂಪ್ಯೂಟರ್‌ನಲ್ಲಿ ಅಳವಡಿಸಲಾಗುತ್ತದೆ. ಆದರೆ, ಇದನ್ನೇ ಬಂಡವಾಳವಾಗಿ ಮಾಡಿಕೊಂಡ ಸಂಸ್ಥೆ ಸಿಬ್ಬಂದಿ ವ್ಯವಸ್ಥಿತವಾಗಿ ಪ್ರತಿನಿತ್ಯ ಬಸ್‌ ಸಂಚಾರದ ಸಂಖ್ಯೆ ಕಡಿತಗೊಳಿಸಿ ಆ ಹಣ ಲೂಟಿ ಮಾಡಿದ್ದಾನೆ.

ಅಧಿಕಾರಿಗಳ ಸಾಥ್‌: ಕೇವಲ ಒಬ್ಬನೇ ವ್ಯಕ್ತಿ ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಇತರೆ ಅಧಿಕಾರಿಗಳು ಕೂಡ ಈ ಅಕ್ರಮಕ್ಕೆ ಸಾಥ್‌ ನೀಡಿರುವ ಶಂಕೆ ಇದ್ದು, ಅಕ್ರಮದಲ್ಲಿ ಭಾಗಿಯಾದ ವ್ಯಕ್ತಿ ಪ್ರಭಾವಿ ಅಧಿಕಾರಿಗಳ ಸಂಬಂಧಿ ಎನ್ನಲಾಗಿದೆ. ಕಳೆದ ಐದು ವರ್ಷಗಳಿಂದ ನಿರಂತರವಾಗಿ ಅಕ್ರಮ ನಡೆಯುತ್ತಿರುವುದು ಜ.1ರಂದು ಸಂಸ್ಥೆ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಇಂದಿಗೂ ಸೂಕ್ತ ಮಾಹಿತಿ ಕಲೆ ಹಾಕದಿರುವುದು ಅನೇಕ ಅನುಮಾನ ಸೃಷ್ಟಿಯಾಗುವಂತೆ ಮಾಡಿದೆ.

ಐದು ವರ್ಷಗಳಿಂದ ನಿರಂತರವಾಗಿ ಬಸ್‌ ಪ್ರಯಾಣದ ತಪ್ಪು ಮಾಹಿತಿ ನೀಡುತ್ತಿದ್ದರು ಕೂಡ ಅಧಿಕಾರಿಗಳ ಗಮನಕ್ಕೆ ಹೇಗೆ ಬಂದಿಲ್ಲ ಎಂಬುದು ಸದ್ಯ ಉದ್ಭವಿಸಿರುವ ಪ್ರಶ್ನೆ.

ಮೇಲ್ನೋಟಕ್ಕೆ 59 ಲಕ್ಷ ರೂ. ಅಕ್ರಮ ನಡೆದಿರುವುದು ಕಂಡು ಬರುತ್ತಿದೆ. ಈ ಕುರಿತು ವಿಭಾಗೀಯ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರು, ವಿಜಯಪುರ ಮೂಲದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ತಾಂತ್ರಿಕ ಸಮಸ್ಯೆಯಿಂದ ಎಷ್ಟು ಹಣ ದುರುಪಯೋಗವಾಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಂತರ ಪೂರ್ಣ ಮಾಹಿತಿ ಗೊತ್ತಾಗಲಿದೆ.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.