ಟ್ರಾಮಾ ಸೆಂಟರ್‌ ನವೆಂಬರ್‌ಗೆ ಪೂರ್ಣ

Team Udayavani, Apr 19, 2017, 3:27 PM IST

gul4.jpg

ಕಲಬುರಗಿ: ಅಪಘಾತದಲ್ಲಿ ನೊಂದವರಿಗೆ ತುರ್ತು ಚಿಕಿತ್ಸೆ ಒದಗಿಸಲು ಅನುವಾಗುವಂತೆ ನಗರದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಟ್ರಾಮಾ ಸೆಂಟರ್‌ ನಿರ್ಮಿಸಲಾಗುತ್ತಿದ್ದು, ನಿರ್ಮಾಣ ಕಾರ್ಯ ನವೆಂಬರ್‌ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. 

ತಾಲೂಕಿನ ನಂದೂರ (ಬಿ) ಗ್ರಾಮದಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ 2.25 ಕೋಟಿ ರೂ. ಅಂದಾಜು ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಆಸ್ಪತ್ರೆ ಹಾಗೂ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್‌ ಆಸ್ಪತ್ರೆ ಪ್ರಾರಂಭಿಸಲಾಗಿದೆ.

ಎರಡು ಆಸ್ಪತೆಗಳಲ್ಲಿ ಎಲ್ಲ ಬಿಪಿಎಲ್‌ ಚೀಟಿದಾರರಿಗೆ ಮತ್ತು ಎಸ್‌ಸಿ-ಎಸ್‌ಟಿ ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ. ಅದಲ್ಲದೇ ಎಪಿಎಲ್‌ ಕಾರ್ಡುದಾರರಿಗೂ ಚಿಕಿತ್ಸಾ ವೆಚ್ಚದ ಶೇ. 70ರಷ್ಟು ರಿಯಾಯಿತಿ ನೀಡಲಾಗುವುದು ಹೇಳಿದರು. ಕರ್ತವ್ಯ ಲೋಪ ಮಾಡುವ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ವೈದ್ಯರು ಕೇಂದ್ರ ಸ್ಥಾನದಲ್ಲಿ ವಾಸವಿದ್ದು, ಜನರಿಗೆ ಪ್ರಾಮಾಣಿಕವಾಗಿ ಆರೋಗ್ಯ ಸೇವೆ ಒದಗಿಸಲು ಬದ್ಧರಾಗಬೇಕು. ಕರ್ತವ್ಯಕ್ಕೆ ಹಾಜರಾಗದ ನಂದೂರ(ಬಿ) ಕೇಂದ್ರದ ವೈದ್ಯರ ಬಗ್ಗೆ ಬಂದಿರುವ ಆರೋಪದ ಕುರಿತು ಜಿಲ್ಲಾ ಆರೋಗ್ಯಾಧಿಧಿಕಾರಿಗಳು ಗಮನಹರಿಸಿ ನೋಟಿಸ್‌ ನೀಡಬೇಕು ಎಂದು ಸೂಚಿಸಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮಾತನಾಡಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ತಮ್ಮ ತಮ್ಮ ಕಾರ್ಯಸ್ಥಾನಗಳಲ್ಲೇ ವಾಸ್ತವ್ಯ ಮಾಡಿ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಮೂಲಕ ವೈದ್ಯ ವೃತ್ತಿ ಘನತೆ ಕಾಪಾಡಬೇಕು ಎಂದು ಹೇಳಿದರು. 

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ. ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಜಿಪಂ ಸದಸ್ಯ ಶರಣಗೌಡ ದೌಲತರಾವ ಪಾಟೀಲ, ನಂದೂರ(ಬಿ) ಗ್ರಾಪಂ ಅಧ್ಯಕ್ಷೆ ನಿಂಗಮ್ಮ ಕಟ್ಟಿಮನಿ, ಉಪಾಧ್ಯಕ್ಷ ಕಲ್ಲಪ್ಪ ಬಿರಾದಾರ, ಗಣ್ಯರಾದ ಶಾಂತಕುಮಾರ ಪಾಟೀಲ, ವಿಜಯಕುಮಾರ, ಜಿ. ರಾಮಕೃಷ್ಣ, ಡಾ| ರಜನೀಶ ಪಟೇಲ್‌, ಮೃತ್ಯುಂಜಯ ಸ್ವಾಮಿ, 

ಶರಣು ಕಣ್ಣಿ, ಲಿಂಗರಾಜ ತಾಡಪಳ್ಳಿ, ಶರಣಪ್ಪ ಸಾಹುಕಾರ, ವೇದಮೂರ್ತಿ ಗಂಗಾಧರ, ಜಯದೇವ ಹೃದ್ರೋಗ ಆಸ್ಪತ್ರೆ ಡಾ| ರಶೀದ್‌, ತಾಲೂಕು ಆರೋಗ್ಯಾಧಿಕಾರಿ ಡಾ| ರಾಜಕುಮಾರ ಕುಲಕರ್ಣಿ ಪಾಲ್ಗೊಂಡಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶಿವರಾಜ ಸಜ್ಜನಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕೀಟನಾಶಕ ಅಧಿಕಾರಿ ಚಾಮರಾಜ ದೊಡ್ಮನಿ ಕಾರ್ಯಕ್ರಮ ನಿರೂಪಿಸಿದರು.  

ಟಾಪ್ ನ್ಯೂಸ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.