ವಾಡಿ: ಡೀಸೆಲ್ ಟ್ಯಾಂಕ್ ಸ್ಪೋಟಗೊಂಡು ಎಸಿಸಿ ಕಾರ್ಮಿಕ ಮೃತ್ಯು

Team Udayavani, Jan 27, 2023, 8:29 PM IST

1-sadsad

ವಾಡಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಟಿಪ್ಪರ್ ವಾಹನದ ಡೀಸೆಲ್ ಟ್ಯಾಂಕ್ ಸ್ಪೋಟಗೊಂಡು ಮೆಕ್ಯಾನಿಕ್ ವೃತ್ತಿಯಲ್ಲಿದ್ದ ಗುತ್ತಿಗೆ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ.

ಪಟ್ಟಣದ ಕಮಲಿವಾಲೆ ಬಾಬಾ ದರ್ಗಾ ಬಡಾವಣೆಯ ನಿವಾಸಿ ಮಹ್ಮದ್ ನವಾಬ್ ಜಮಾದಾರ (31) ಮೃತಪಟ್ಟ ಕಾರ್ಮಿಕ. ಮೃತ ಕಾರ್ಮಿಕನಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಈತ ಎಸಿಸಿ ಕಂಪನಿಯಲ್ಲಿನ ಕಲ್ಲು ಕ್ವಾರಿ ವಿಭಾಗದ ಟಿಪ್ಪರ್ ವಾಹನಗಳ ರಿಪೇರಿ ಕೆಲಸದಲ್ಲಿ ತೊಡಗಿದ್ದಾಗ ಏಕಾಏಕಿ ವಾಹನದ ಡೀಸೆಲ್ ಟ್ಯಾಂಕ್ ಸ್ಪೋಟಗೊಂಡಿದೆ ಎನ್ನಲಾಗಿದ್ದು, ತೀವ್ರ ಗಾಯಗೊಂಡಿದ್ದ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮಿಕ ಚಿಕಿತ್ಸೆ ಕೊಡಿಸುವ ಮೂಲಕ ಹೈದರಾಬಾದ್‌ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಕಳೆದ ಹದಿನೈದು ದಿನಗಳಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ಮಹ್ಮದ್ ನವಾಬ್ ಶುಕ್ರವಾರ ಮೃತಪಟ್ಟಿದ್ದಾನೆ ಎಂದು ಕಾರ್ಮಿಕ ಸಂಘದ ಮೂಲಗಳು ತಿಳಿಸಿವೆ. ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಾರ್ಮಿಕ ಮುಖಂಡರು ಹಾಗೂ ಮುಸ್ಲಿಂ ಸಮಾಜದ ಮುಖಂಡರು ಎಸಿಸಿ ಆಡಳಿತದೊಂದಿಗೆ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಈ ಕುರಿತು ನಮಗೆ ಯಾರೂ ದೂರು ಸಲ್ಲಿಸಿಲ್ಲ ಎಂದು ವಾಡಿ ಠಾಣೆಯ ಪೊಲೀಸರು ಪ್ರತಿಕ್ರೀಯಿಸಿದ್ದಾರೆ.

ಟಾಪ್ ನ್ಯೂಸ್

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

Mini Tex Tail Park in 25 Districts: CM Bommai

25 ಜಿಲ್ಲೆಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್: ಸಿಎಂ ಬೊಮ್ಮಾಯಿ

ಬಂಜಾರಾ ಜನಾಂಗ ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್ ಯತ್ನ: ಸಿಎಂ ಬೊಮ್ಮಾಯಿ

ಬಂಜಾರಾ ಜನಾಂಗ ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್ ಯತ್ನ: ಸಿಎಂ ಬೊಮ್ಮಾಯಿ

1-sdsaadsad

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ: ದಂಪತಿ‌ ಸಜೀವ ದಹನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

TDY-16

ದೂರು ವಿರುದ್ದ ಕಾನೂನು ಹೋರಾಟ: ಕೆಎಂಶಿ