
ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮ
Team Udayavani, Sep 8, 2022, 5:48 PM IST

ಸೇಡಂ: ಮತಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿವೆ. ಅವುಗಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ತಮ್ಮ ಜೀವ ಇರುವವರೆಗೂ ಶ್ರಮಿಸಲು ತಾವು ಸದಾ ಸಿದ್ಧ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.
ತಾಲೂಕಿನ ಖಂಡೇರಾಯನಪಲ್ಲಿಯಲ್ಲಿ 21ನೇ ದಿನದ ಪಾದಯಾತ್ರೆಯಲ್ಲಿ ಮನೆ, ಮನೆಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಹಲವಾರು ಗ್ರಾಮಗಳು ಮೂಲಸೌಕರ್ಯದಿಂದ ವಂಚಿತವಾಗಿವೆ. ವಿದ್ಯುತ್, ಕುಡಿಯುವ ನೀರು, ಶೌಚಾಲಯ, ರಸ್ತೆ, ಆಸ್ಪತ್ರೆ ಸೇರಿ ಅನೇಕ ಸೌಲಭ್ಯಗಳಿಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಈ ಮೊದಲು ಆಡಳಿತದಲ್ಲಿದ್ದ ಕಾಂಗ್ರೆಸ್ ಎರಡು ಪಕ್ಷಗಳು ಜನರ ಕುಂದುಕೊರತೆ ನಿವಾರಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.
ಕ್ಷೇತ್ರದ ಜನತೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳ ನಡೆಗೆ ಬೇಸತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಹಾಗೂ ರೈತಪರ, ಜನಪರ ಪಕ್ಷವಾದ ಜೆಡಿಎಸ್ ಪಕ್ಷದತ್ತ ಒಲವು ತೋರುತ್ತಿದ್ದು, ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಆಡಳಿತ ಜೆಡಿಎಸ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಬಾಲರಾಜ ಬ್ರಿಗೇಡ್ ತಾಲೂಕಾಧ್ಯಕ್ಷ ಶಿವಕುಮಾರ ನಿಡಗುಂದಾ, ಜೆಡಿಎಸ್ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ ಗೊಬ್ಬೂರ, ಪರ್ವಿನ್ ಬೇಗಂ, ಅನಿಲ ಗುತ್ತೇದಾರ, ಲಕ್ಷಿ¾à, ಪರಮೇಶ್ವರ ಇನ್ನಿತರರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
