ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ

Team Udayavani, Sep 17, 2019, 10:54 AM IST

gb-tdy-2

ಕಲಬುರಗಿ: ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಸಮಾರಂಭಕ್ಕೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಿರುವುದು.

ಕಲಬುರಗಿ: ಹೈದ್ರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಿ ಸೆಪ್ಟೆಂಬರ್‌ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗಮಿಸುತ್ತಿದ್ದು, ಸ್ವಾಗತಕ್ಕೆ ಕಲಬುರಗಿ ಮಹಾನಗರ ಸಜ್ಜುಗೊಂಡಿದೆ.

ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿಎಂ ಯಡಿಯೂರಪ್ಪ ತದನಂತರ ಸರ್ಧಾರ್‌ ವಲ್ಲಭಭಾಯಿ ಪಟೇಲ್ ಪ್ರತಿಮೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು.

ಮಧ್ಯಾಹ್ನ 12:30ಕ್ಕೆ ವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರಿ ಸೌಲಭ್ಯ ವಿತರಿಸುವರು.

ಐತಿಹಾಸಿಕವಾಗಿಸಲು ಸಿದ್ಧತೆ: ಕಲ್ಯಾಣ ಕರ್ನಾಟಕ ಘೋಷಣೆ ಐತಿಹಾಸಿಕವಾಗಿಸಲು ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್‌ ಸಭೆ ಆಯೋಜಿಸಲಾಗಿದೆ. ಸಹಸ್ರಾರು ಜನರನ್ನು ಸೇರಿಸಲು ಮುಂದಾಗಲಾಗಿದೆ.

ಹೈದ್ರಾಬಾದ್‌ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಸಲು ಸರ್ಕಾರ ಬದ್ಧವಿದೆ ಎಂಬುದನ್ನು ತೋರಿಸಲು ವಾರದಿಂದ ಸಿದ್ಧತೆಗಳು ನಡೆದಿವೆ. ಮಠಾಧೀಶರು ಸಹ ಸಿಎಂ ಅವರಿಗೆ ಅಭಿನಂದಿಸುವ ಸಮಾರಂಭ ಸಹ ಹಮ್ಮಿಕೊಂಡಿದ್ದಾರೆ. ಸಿಎಂ ಅವರು ಬೆಳಗ್ಗೆಯಿಂದ ಸಂಜೆವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ವಿಮಾನ ನಿಲ್ದಾಣ ಭದ್ರತೆ ಪರಿಶೀಲನೆ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಇದರ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸ್‌ ಆಯುಕ್ತ ಡಾ| ಎಂ.ಎನ್‌. ನಾಗರಾಜ, ಜಿಲ್ಲಾಧಿಕಾರಿ ಬಿ. ಶರತ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಹಾಗೂ ಡಿಸಿಪಿ ಬಿ. ಕಿಶೋರಬಾಬು ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಭದ್ರತೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವುದು, ಪೊಲೀಸ್‌ರಿಂದ ಗೌರವ ವಂದನೆ ಸ್ವೀಕರಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್‌ ಅಮೀನ್‌ ಮುಖ್ತಾರ್‌ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪ್ರೊಬೇಷನರಿ ಐಎಎಸ್‌ ಅಧಿಕಾರಿ ಡಾ| ಬಿ. ಗೋಪಾಲಕೃಷ್ಣ ರಾಘವೇಂದ್ರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.