ಸ್ವತ್ಛತೆ ಎಲ್ಲಿದೆಯೋ ಅಲ್ಲಿದೆ ಆರೋಗ್ಯ: ದೇಶಮುಖ

Team Udayavani, Sep 21, 2018, 11:15 AM IST

gul-3.jpg

ಕಲಬುರಗಿ: ಸ್ವತ್ಛತೆ ಎಲ್ಲಿದೆಯೋ ಅಲ್ಲಿದೆ ಆರೋಗ್ಯ ಎನ್ನುವ ಮಾತಿನಂತೆ ಪ್ರತಿಯೊಬ್ಬರು ತಮ್ಮ ಮನೆ ಅಂಗಳ ಸ್ವತ್ಛವಾಗಿಟ್ಟುಕೊಂಡಲ್ಲಿ ಇಡೀ ಗ್ರಾಮವೇ ಸ್ವತ್ಛವಾಗುತ್ತದೆ. ಇದರಿಂದ ಗಾಂಧೀಜಿ ಕಂಡ ಕನಸು ನನಸಾಗುತ್ತದೆ ಎಂದು
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ಭಾರತ ಸರಕಾರದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಕಲಬುರಗಿ-ಬಳ್ಳಾರಿ, ಮಹಾನಗರ ಪಾಲಿಕೆ, ಶಿಶು ಅಭಿವೃದ್ಧಿ ಯೋಜನೆ (ನಗರ), ಗೋದುತಾಯಿ ದೂಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮತ್ತು ಪೂರ್ವ ಮಹಾವಿದ್ಯಾಲಯ, ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ಸಂಯುಕ್ತ ಪದವಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸ್ವತ್ಛಭಾರತ
ಅಭಿಯಾನ (ನಗರ) ಕಾರ್ಯಕ್ರಮ ಮತ್ತು ಜಾಥಾ ಉದ್ಗಾಟಿಸಿ ಅವರು ಮಾತನಾಡಿದರು. ಸ್ವತ್ಛ ಪರಿಸರದಿಂದ ಜನರ ಆರೋಗ್ಯವು ಉತ್ತಮವಾಗಿರುತ್ತದೆ. ಅದಕ್ಕಾಗಿ ಎಲ್ಲರೂ ಸ್ವತ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಸ್ವತ್ಛ ಭಾರತ ಅಭಿಯಾನ ರಾಜ್ಯ ಸಂಯೋಜಕಿ ಅನ್ನಪೂರ್ಣ ಮಾತನಾಡಿ, ಸ್ವತ್ಛ ಭಾರತ ಅಭಿಯಾನದಡಿ ಪ್ರತಿ ಮನೆಗೊಂದು ಶೌಚಾಲಯ ಕಟ್ಟಿಸಲು ಸರಕಾರ ಬಡವರಿಗೆ ಹಾಗೂ ಹಿಂದುಳಿದ ಜನರಿಗೆ ಧನ ಸಹಾಯ ಮಾಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಕರೆ ನೀಡಿದರು.
 
ಜಿಪಂ ಜಿಲ್ಲಾ ಸಂಯೋಜಕಿ ಗುರುಬಾಯಿ ಪಾಟೇಲ ಮಾತನಾಡಿ, ನಾವೆಲ್ಲರೂ ಸ್ವತ್ಛ ಪರಿಸರ ನಿರ್ಮಿಸಬೇಕಾದರೆ ಪ್ರತಿಯೊಂದು ಕುಟುಂಬದವರು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಂಡು ಸ್ವತ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಕಲಬುರಗಿ ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಸಂಯುಕ್ತ ಪದವಿ ಕಾಲೇಜಿನ ಪ್ರಚಾರ್ಯ ಬಿ.ಸಿ. ಚವ್ಹಾಣ, ಗೋದುತಾಯಿ ದೂಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ನೀಲಾಬಿಕಾ ಪೊಲೀಸ್‌ ಪಾಟೀಲ ಸ್ವತ್ಛ ಭಾರತ ಅಭಿಯಾನ ಮತ್ತು ಪರಿಸರ ಸಂರಕ್ಷಣಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿನಿಯರಿಗೆ ಭಾಷಣ, ರಂಗೋಲಿ, ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಕಲಬುರಗಿ-ಬಳ್ಳಾರಿ ಉಪ ನಿರ್ದೇಶಕ ಜಿ.ಡಿ. ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳ್ಳಾರಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಸಹಾಯಕ ಎನ್‌. ರಾಮಕೃಷ್ಣ ಸ್ವಾಗತಿಸಿದರು, ಕಲಬುರಗಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಸಹಾಯಕ ನಾಗಪ್ಪ ಅಂಬಾಗೋಳ ವಂದಿಸಿದರು. 

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.