ಹುತಾತ್ಮರ ಸ್ಮಾರಕ ಪೂರ್ಣಗೊಳ್ಳುವುದೆಂದು?


Team Udayavani, Sep 17, 2019, 10:42 AM IST

gb-tdy-1

ಬಸವಕಲ್ಯಾಣ: ಗೋರ್ಟಾ(ಬಿ) ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಕೈಗೊಂಡಿರುವ ಹುತಾತ್ಮರ ಸ್ಮಾರಕ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದ ಗಿಡ ಗಂಟಿಗಳು ಬೆಳೆದು ಹಾಳು ಕೊಂಪೆಯಂತಾಗಿದೆ

ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ನೂರಾರು ಜನರ ಸಾಮೂಹಿಕ ಹತ್ಯಾಕಾಂಡ ನಡೆದ ಗೋರ್ಟಾ (ಬಿ) ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಕೈಗೊಂಡಿರುವ ಹುತಾತ್ಮರ ಸ್ಮಾರಕ ನಿರ್ಮಾಣ ಕಾರ್ಯ ಜನಪ್ರತಿನಿಧಿಗಳ ನಿರ್ಲಕ್ಷ್ಯತನದಿಂದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಜಿಲ್ಲೆಯ ಜನರಿಗೆ ಬೇಸರ ತರಿಸಿದೆ.

ಗೋರ್ಟಾ(ಬಿ), ಹಾಳಗೋರ್ಟಾ ಮತ್ತು ಮುಚಳಂಬ ಗ್ರಾಮಸ್ಥರು ಏಕತೆಯಿಂದ ನಿಜಾಮನ ಆಡಳಿತದ ವಿರುದ್ಧ ಹೋರಾಟ ನಡೆಸಿದ್ದರು. ಗ್ರಾಮದಲ್ಲಿ ಹೈದರಾಬಾದ್‌ ನಿಜಾಮ ವಂದೇ ಮಾತರಂ ಗೀತೆ ಹಾಡುವುದನ್ನು ನಿಷೇಧಿಸಿದ್ದ. ಇದನ್ನು ಪ್ರತಿಭಟಿಸಿ ಚಳವಳಿಗಾರರು ‘ವಂದೇ ಮಾತರಂ’ ಹಾಡಲು ಮುಂದಾದಾಗ ಅವರನ್ನು ಬಂಧಿಸಿದ ನಂತರ ಕ್ರಾಂತಿ ಆರಂಭಗೊಂಡಿತು. ರಜಾಕಾರರ ಗುಂಪು ಗ್ರಾಮದ ಮೇಲೆ ದಾಳಿ ನಡೆಸಿ ಅನೇಕ ದೌರ್ಜನ್ಯ ನಡೆಸಿತು. ಇದರಿಂದ ಗ್ರಾಮದಲ್ಲಿ 200ಕ್ಕೂ ಹೆಚ್ಚು ಜನರ ಸಾಮೂಹಿಕ ಹತ್ಯೆ ನಡೆದಿದ್ದನ್ನು ಗ್ರಾಮಸ್ಥರು ಹಾಗೂ ಹಿರಿಯರು ಇಂದಿಗೂ ಮರೆತಿಲ್ಲ.

ಇಂತಹ ಐತಿಹಾಸಿಕ ಹಿನ್ನೆಲೆ ಹೊಂದಿದ ಗ್ರಾಮದಲ್ಲಿ ಅಂದಿನ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮುನಿರಾಜು ಗೌಡ ಅವರ ನೇತೃತ್ವದಲ್ಲಿ ಗೋರ್ಟಾ(ಬಿ) ಗ್ರಾಮದ ಹೊರವಲಯದಲ್ಲಿ ಹುತಾತ್ಮರ ಸ್ಮಾರಕ, ಸರ್ದಾರ್‌ ವಲ್ಲಭಭಾಯಿ ಪಟೇಲ ಅವರ ಮೂರ್ತಿ ಮತ್ತು ಧ್ವಜ ಸ್ತಂಭ ನಿರ್ಮಾಣಕ್ಕೆ 2014ರ ಸೆ.17ರಂದು ಅಂದಿನ ರಾಜ್ಯದ ಬಿಜೆಬಿ ನಾಯಕರ ಸಮ್ಮುಖದಲ್ಲಿ ಇಂದಿನ ಕೇಂದ್ರದ ಗೃಹ ಸಚಿವ ಅಮಿತ್‌ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು.

ಕೇವಲ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯವಲ್ಲ. ಮುಂದಿನ ಪೀಳಿಗೆಗೆ ಇತಿಹಾಸ ತಿಳಿಸುವ ಕಾರ್ಯವನ್ನು ಬಿಜೆಪಿ ಯುವ ಮೋರ್ಚಾ ಮಾಡುತ್ತಿದೆ ಎಂದು ಭಾಷಣ ಮಾಡಿ ಹೋಗಿದ್ದರು. ಆದರೆ ಐದು ವರ್ಷಗಳಲ್ಲಿ ಸ್ಮಾರಕ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿದೆ. ಇದರು ಜಿಲ್ಲೆಯ ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ನಿದರ್ಶನವಾಗಿದೆ.

ಹುತಾತ್ಮರ ಸ್ಮಾರಕ ಹಾಗೂ ಸರದಾರ ವಲ್ಲಭಭಾಯಿ ಪಟೇಲ ಅವರ ಮೂರ್ತಿ ತಲೆ ಎತ್ತಬೇಕಾದ ಸ್ಥಳದಲ್ಲಿ ಈಗ ಮುಳ್ಳಿನ ಗಿಡ-ಗಂಟಿಗಳು ಬೆಳೆದು ನಿಂತಿವೆ. ಕಂಪೌಂಡ್‌ ಕಾಮಗಾರಿಗಾಗಿ ಹಾಕಲಾದ ಕಬ್ಬಿಣದ ಸರಳುಗಳು ತುಕ್ಕು ಹಿಡಿಯುತ್ತಿವೆ. ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾದ ಪಿಲ್ಲರ್‌ಗಳ ಸುತ್ತಮುತ್ತ ಮುಳ್ಳಿನ ಮರಗಳು ಬೆಳೆದಿವೆ. ಆದರೂ ಇಂದಿಗೂ ಹುತಾತ್ಮರ ಸ್ಮಾರಕ ಕಾಮಗಾರಿ ಏನಾಯ್ತು ಎಂದು ಸಂಬಂಧ ಪಟ್ಟವರು ಹಾಗೂ ಜಿಲ್ಲೆಯ ಬಿಜೆಪಿ ನಾಯಕರು ಈ ಕಡೆ ತಿರುಗಿ ನೋಡುವುದಾಗಲಿ, ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಇಂದು ಹುತಾತ್ಮರ ಸ್ಮಾರಕ ಕಾಮಗಾರಿ ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿರುವುದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲದಂತೆ ವರ್ತಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ.

 

•ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.