ಲೋಪವಾಗದಂತೆ ನೋಡಿಕೊಳ್ಳಿ

Team Udayavani, Sep 17, 2019, 11:04 AM IST

gb-tdy-3

ಕಲಬುರಗಿ: ಸಿಎಂ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಿ. ಶರತ್‌ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ವಿವಿಧ ಅಭಿವೃದ್ಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೆ. 17ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿಗಳು ಭಾಗವಹಿಸುವ ಎಲ್ಲ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಯಾವುದೇ ರೀತಿಯಲ್ಲಿ ಲೋಪಕ್ಕೆ ಅಸ್ಪದ ನೀಡದೆ ತಮಗೆ ವಹಿಸಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ. ಶರತ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಸಿದ್ಧತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಸೆ. 17ರಂದು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 8:45ಕ್ಕೆ ಆಗಮಿಸುವರು. ಮುಖ್ಯಮಂತ್ರಿಗಳನ್ನು ಶಿಷ್ಠಾಚಾರದಂತೆ ಬರಮಾಡಿಕೊಳ್ಳುವುದು. ವಿಮಾನ ನಿಲ್ದಾಣಕ್ಕೆ ಜನಪ್ರತಿನಿಧಿಗಳು ಸಹ ಆಗಮಿಸುವುದರಿಂದ ಸೂಕ್ತ ಪೊಲೀಸ್‌ ಬಂದೋಬಸ್ತ್ ಏರ್ಪಡಿಸುವುದು. ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಸುತ್ತಮುತ್ತ ಸ್ವಚ್ಛತೆ ಕೈಗೊಂಡು ಪ್ರತಿಮೆಯನ್ನು ಹೂವಿನಿಂದ ಆಲಂಕಾರಗೊಳಿಸಬೇಕು ಎಂದು ಸೂಚಿಸಿದರು.

ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆಯುವ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡುವರು. ಇಲ್ಲಿ ಹೆಚ್ಚಿನ ಸಂಖ್ಯೆ ಮಕ್ಕಳು ಮತ್ತು ಸಾರ್ವಜನಿಕರು ಬರುವುದರಿಂದ ಕುಡಿಯುವ ನೀರಿನ ವ್ಯವಸ್ಥೆ, ಇ-ಟಾಯಲೆಟ್ ವ್ಯವಸ್ಥೆ, ಪೊಲೀಸ್‌ ಬಂದೋಬಸ್ತ್, ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿದ್ಯುತ್‌ ಸಂಪರ್ಕ ಕಡಿತವಾಗದಂತೆ ಗಮನಹರಿಸಿ ಎಂದು ಹೇಳಿದರು. ಜಿಲ್ಲಾ ಪೊಲೀಸ್‌ ಅಧೀಕ್ಷಕ ವಿನಾಯಕ ಪಾಟೀಲ, ಕಾನೂನು ಮತ್ತು ಸುವ್ಯಸ್ಥೆ ಡಿಸಿಪಿ. ಕಿಶೋರ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ, ಪ್ರೊಬೇಷನರ್‌ ಐಎಎಸ್‌ ಅಧಿಕಾರಿ ಡಾ| ಗೋಪಾಲಕೃಷ್ಣ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.