ಕಾನೂನು ತಿದ್ದುಪಡಿಗೆ ಕಾರ್ಮಿಕರ ಆಕ್ರೋಶ

Team Udayavani, Jan 5, 2019, 6:56 AM IST

gul-6.jpg

ಚಿತ್ತಾಪುರ: ಜ. 8,9 ರಂದು ನಡೆಯಲಿರುವ ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಪ್ರಯುಕ್ತ ಪಟ್ಟಣದಲ್ಲಿ ವಿವಿಧ ಕಾರ್ಮಿಕ
ಸಂಘಟನೆಗಳ ಮುಖಂಡರು ಜೀಪ್‌ ಜಾಥಾ ನಡೆಸಿದರು.

ಈ ವೇಳೆ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ ಮಾತನಾಡಿ, ದೇಶದಲ್ಲಿ ಕಾರ್ಮಿಕರ ಪರವಾದ 44 ಕಾನೂನುಗಳಿವೆ. ಅವುಗಳನ್ನು ಕೇಂದ್ರ ಸರ್ಕಾರ ಬದಲಿಸಿ ನಾಲ್ಕು ಕೋಡ್‌ಗಳಾಗಿ ಮಾಡಲು ಹೊರಟಿದೆ. ಜತೆಗೆ ಕಾರ್ಮಿಕರ ಕಾನೂನು ತಿದ್ದುಪಡಿ ಮಸೂದೆ ತರಲು ಮುಂದಾಗಿದೆ.

ಒಂದು ವೇಳೆ ಮಸೂದೆಗೆ ಒಪ್ಪಿಗೆ ಸಿಕ್ಕರೆ ದೇಶದಲ್ಲಿರುವ ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಅದನ್ನು ವಿರೋಧಿಸಿ ಜ.
8,9 ರಂದು ಅಖೀಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿದರು.

ದಿನನಿತ್ಯ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ತಡೆಗಟ್ಟಲು, ಹೊಸ ಮತ್ತು ಸಭ್ಯ ಉದ್ಯೋಗಗಳನ್ನು ಸೃಷ್ಟಿಸಲು, 18 ಸಾವಿರ ರೂ. ಕನಿಷ್ಠ ವೇತನ ಜಾರಿ, ಕಾರ್ಮಿಕ ಕಾನೂನುಗಳ ತಿದ್ದುಪಡಿ ಕಡಿತ, ಸ್ಕೀಂ ನೌಕರರನ್ನು ಕಾಯಂ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ದೇಶದ ಎಲ್ಲ ಕಾರ್ಮಿಕರಿಗೂ ಸಾರ್ವತ್ರಿಕ ಸಾಮಾಜಿಕ ರಕ್ಷಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಟೋ, ಬಸ್‌, ಲಾರಿ, ಹಮಾಲರು, ಅಂಗನವಾಡಿ, ಬ್ಯಾಂಕ್‌, ಎಲ್‌.ಐ.ಸಿ, ಸರ್ಕಾರಿ ನೌಕರರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾಗವಹಿಸಲಿವೆ. ಎರಡು ದಿನ ಇಡೀ ಭಾರತ ಸಂಪೂರ್ಣ ಸ್ತಬ್ದಗೊಳ್ಳಲಿದೆ ಎಂದು ಹೇಳಿದರು.

ಮೋಟಾರ್‌ ವಾಹನ ತಿದ್ದುಪಡಿ ಮಸೂದೆ, ಅಂಗನವಾಡಿಗಳಿಗೆ ಆಹಾರ ಪೂರೈಸುವ ಐ.ಸಿ.ಡಿ.ಎಸ್‌ ಯೋಜನೆಯ ಹಣವನ್ನು ಶೇ. 75 ರಷ್ಟು ಕಡಿತಗೊಳಿಸಲಾಗಿದೆ. ಹೀಗೆ ಮಾಡಿದರೆ ಅಪೌಷ್ಟಿಕತೆ ನಿವಾರಿಸಲು ಹೇಗೆ ಸಾಧ್ಯವಾಗುತ್ತದೆ. ಕಾರ್ಮಿಕ ಹಾಗೂ
ಬಡವರ ವಿರುದ್ಧ ಕಾನೂನು ತರಲು ಹೊರಟಿರುವ ಕೇಂದ್ರದ ಕಣ್ಣು ತೆರೆಸಲು ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ಮಾತ್ರ ದುಬಾರಿ ಬೆಲೆ ಕೊಡುವಂತಾಗಿದೆ. ಅನೀಲ ಬೆಲೆಯೂ ಗಗನಕ್ಕೆ ಏರುತ್ತಿದೆ. ಪರಿಣಾಮ ಕೆಳ ವರ್ಗದ ಬಡ ಕಾರ್ಮಿಕರು ಸರಳ ಜೀವನ ನಡೆಸುವುದಕ್ಕೆ ತುಂಬ ಕಷ್ಟಕರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪಾರ್ವತಿ ಕಾಳಗಿ, ಸಾಬಮ್ಮ ನಾಲವಾರ, ಶೇಕಮ್ಮ ಕುರಿ ಇದ್ದರು.

ಟಾಪ್ ನ್ಯೂಸ್

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.