ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಹಾಡಹಗಲೇ‌ ಯುವಕನ ಬರ್ಬರ ಹತ್ಯೆ

Team Udayavani, Aug 20, 2020, 9:44 PM IST

ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಹಾಡಹಗಲೇ‌ ಯುವಕನ ಬರ್ಬರ ಹತ್ಯೆ

ಕೊಲೆಯಾದ ಯುವಕ ವೀರೇಶ ಶರಣಬಸಪ್ಪ ಕಡಗಂಚಿ.

ಕಲಬುರಗಿ: ನಗರದಲ್ಲಿ ಪುಡಿ ರೌಡಿಗಳು ಮತ್ತೆ ಅಟ್ಟಹಾಸ ಮರೆದಿದ್ದಾರೆ.

ಗುರುವಾರ ಹಾಡಹಗಲೇ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ವೀರೇಶ ಶರಣಬಸಪ್ಪ ಕಡಗಂಚಿ (20) ಎಂಬಾತನೇ ಕೊಲೆಯಾದ ಯುವಕ. ನಗರದ ಹೃದಯ ಭಾಗವಾದ ಪಬ್ಲಿಕ್ ಗಾಡರ್ನ್ ನಲ್ಲಿ ಈ ಕೊಲೆ ಮಾಡಲಾಗಿದೆ.

ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಭೀಕರ ಕೊಲೆ ನಗರದ ಜನತೆಯನ್ನು ಭಯಭೀತರನ್ನಾಗಿಸಿದೆ.

ಗಾಡರ್ನ್ ಒಳ ರಸ್ತೆಯಲ್ಲಿ ರಕ್ತ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ವೀರೇಶನನ್ನು108 ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದಾ‌ನೆ.

ಇಲ್ಲಿನ ಆಳಂದ‌ ರಸ್ತೆಯ ರಾಣೋಸಫೀರ್ ದರ್ಗಾ ಪ್ರದೇಶದ ನಿವಾಸಿಯಾಗಿದ್ದ ಮೃತ ವೀರೇಶ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದುತ್ತಿದ್ದ. ಹಣದ ವಿಚಾರಗಾಗಿ ಖಾರದಪುಡಿ ಅಂಬು ಗ್ಯಾಂಗ್ ಈ ಕೊಲೆ ಮಾಡಿದೆ ಎಂದು ಹೇಳಲಾಗಿದೆ.

ಕೋಟನೂರ ಮಠದ ಸಮೀಪದ ನಿವಾಸಿಯಾದ ಅಂಬಾರಾಯ ಅಲಿಯಾಸ್ ಖಾರದಪುಡಿ ಅಂಬು, ಭವನ, ಲವ ನಂದಿಕೂರ, ಗಿರೀಶ, ಕಾಳು, ಬಸ್ಸು, ಅಭಿಲಾಷ್ ಎಂಬುವವರು ಸೇರಿಕೊಂಡು ವೀರೇಶನಿಗೆ‌ ಚಾಕುವಿಂದ ಇರಿದಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಕೊಲೆಯಾದ ವೀರೇಶನ ಬಳಿ ಖಾರದಪುಡಿ ಅಂಬು ಹಣ ಕೇಳಿದ್ದ ಮಾತ್ರವಲ್ಲದೇ, ಇದೇ ಕಾರಣಕ್ಕೆ ಬುಧವಾರ ವೀರೇಶನ ಮನೆಗೂ ಹೋಗಿದ್ದಮಾತ್ರವಲ್ಲದೇ ಇವರಿಬ್ಬರೂ ಫೋನ್ ನಲ್ಲೂ ಪರಸ್ಪರ ಬೈದಾಡಿಕೊಂಡಿದ್ದರು.

ಗುರುವಾರ ವೀರೇಶಗಾಗಿ ಹುಡುಕಾಟ ನಡೆಸಿದಾಗ ಆತ ‌ಗಾಡರ್ನ್ ನಲ್ಲಿ ಇರುವುದಾಗಿ ಗೊತ್ತಾಗಿತ್ತು. ಅಂತೆಯೇ ಎಲ್ಲರೂ ಅಲ್ಲಿಗೆ ಬಂದಾಗ ವಾಗ್ವಾದ ನಡೆದಿದೆ. ಇದೇ ವೇಳೆ ವೀರೇಶನ ತೊಡೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಲೇ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ್, ಡಿಸಿಪಿ ಡಿ.ಕಿಶೋರ್ ಬಾಬು, ಎಸಿಪಿ ವಿಜಯಕುಮಾರ‌ ಮತ್ತು ಸಿಬ್ಬಂದಿ ಭೇಟಿ‌‌‌ ನೀಡಿ, ಪರಿಶೀಲನೆ ನಡೆಸಿದರು. ಈ ಕೊಲೆಗೆ ಸಂಬಂಧಿಸಿದಂತೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13thefting

ಕಲಬುರಗಿ: ಅಂಗಡಿಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

11karnataka

ಕ್ಷಯರೋಗ ಮುಕ್ತ ಕರ್ನಾಟಕಕ್ಕೆ ಕೈಜೋಡಿಸಿ

10thefts

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

9sheeps

ಹಳ್ಳದ ನೀರು ಕುಡಿದು 10 ಕುರಿ ಸಾವು

8road

ಯಡ್ರಾಮಿ ತಾಲೂಕಾದ್ರೂ ಸುಧಾರಿಸಿಲ್ಲ ರಸ್ತೆ ಸ್ಥಿತಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.