ಮೂಲ ಮೃತ್ತಿಕಾ ಬೃಂದಾವನಕ್ಕಿದೆ ರೋಗ ಕಳೆಯುವ ಶಕ್ತಿ

ಕಂಪ್ಲಿ ನೂತನ ಮಠದಲ್ಲಿ ಬೃಂದಾವನ ಪ್ರತಿಷ್ಠಾಪನೆ •ಭಕ್ತಿಯಿಂದ ಕರೆದರೆ ಇಷ್ಟಾರ್ಥ ಸಿದ್ಧಿ: ಸುಬುಧೇಂದ್ರ ಶ್ರೀ

Team Udayavani, May 10, 2019, 12:50 PM IST

10-May-16

ಕಂಪ್ಲಿ: ರಾಯರ ಮೂಲಮೃತ್ತಿಕಾ ಬೃಂದಾನವನದಲ್ಲಿ ಶ್ರೀ ಸುಬುಧೇಂದ್ರ ತೀರ್ಥರು ಮೃತ್ತಿಕೆ ಹಾಗೂ ಸಾಲಿ ಗ್ರಾಮಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಕಂಪ್ಲಿ: ನೆನೆದವರ ಮನದಲ್ಲಿ ನೆಲೆಸುವ ,ಇಷ್ಟಾರ್ಥ ನೆರವೇರಿಸುವ ರಾಯರು ಎಲ್ಲೆಲ್ಲಿಯೂ ನೆಲೆಸಿದ್ದು, ಎಲ್ಲಾ ರೋಗಗಳನ್ನು ಕಳೆಯುವ ಬೃಹತ್‌ ಶಕ್ತಿ ಮೂಲಮೃತ್ತಿಕಾ ಬೃಂದಾನವಕ್ಕಿದೆ ಎಂದು ಜಗದ್ಗುರು ಶ್ರೀಮನ್‌ ಮಧ್ವಾಚಾರ್ಯ ಮೂಲಸಂಸ್ಥಾನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದ ದಿಗ್ವಿಜಯ ವಿದ್ಯಾಸಿಂಹಾಸನಾಧೀಶ್ವರರಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು.

ಪಟ್ಟಣದ ಸತ್ಯನಾರಾಯಣ ಪೇಟೆ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಿದ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಗುರುವಾರ ಶ್ರೀ ಮುಖ್ಯ ಪ್ರಾಣದೇವರ ಹಾಗೂ ಶ್ರೀ ರಾಘವೇಮದ್ರಸ್ವಾಮಿಗಳವರ ಮೂಲ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪಿಸಿ, ಬಿಂಬವಾಹನ ತತ್ವನ್ಯಾಸ, ಮಾತೃಕಾನ್ಯಾಸ, ಪೂರ್ವಕ ಪ್ರತಿಷ್ಠಾ ಅಷ್ಟಬಂಧನ ಹಾಗೂ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಮತ್ತು ಮಹಾಮಂಗಳಾರತಿ ನೆರವೇರಿಸಿ ಅನುಗ್ರಹ ಸಂದೇಶ ನೀಡಿ ಆರ್ಶೀವಚನ ನೀಡಿದರು.

ಭಕ್ತಿಯಿಂದ ಕರೆದರೆ ರಾಯರು ಭಕ್ತರ ಇಷ್ಟಾರ್ಥವನ್ನು ನೆರವೇರಿಸು ತ್ತಾರೆ. ಜಗತ್ತಿನ ನಮ್ಮ ನಿಮ್ಮೆಲ್ಲರ ಉಸಿರಾಗಿರುವ ರಾಯರು ಕಲಿಯುಗದ ಕಾಮಧೇನು, ಕಲ್ಪವೃಕ್ಷವಾಗಿರುವ ರಾಘವೇಂದ್ರ ಸ್ವಾಮಿಗಳು ದೈವಿಕವಾಗಿ ಅನುಗ್ರಹ ನೀಡುತ್ತಾರೆ ಎಂದರು.

ವಿದ್ಯಾರ್ಥಿಗಳಿಗೆ ವಿದ್ಯೆ, ಮಕ್ಕಳಾಗದವರಿಗೆ ಸಂತಾನ ಭಾಗ್ಯ ನೀಡುವ ಮೂಲಕ ಇಂದಿಗೂ ಜೀವಂತ ಇರುವ ರಾಯರು, ಭೂತ, ಪ್ರೇತಾ, ಪಿಶಾಚ ಬಾಧೆಗಳನ್ನು ಪರಿಹರಿಸುವ ರಾಯರು ಬೇಡಿದವರಿಗೆ ಅನುಗ್ರಹ ನೀಡುತ್ತಾರೆ. ಭಕ್ತರ ಪರಿಶ್ರಮದಿಂದ ಎಲ್ಲ ಶಾಸಕರು,ರಾಜಕಾರಣಿಗಳು, ರೈತರು, ವ್ಯಾಪಾರಸ್ಥರು ಎಲ್ಲರೂ ಕೈಜೋಡಿಸಿ ಸುಸಜ್ಜಿತ ಮಠವನ್ನು ನಿರ್ಮಿಸಿದ್ದೀರಿ. ನಿಮಗೆಲ್ಲರಿಗೂ ಅನುಗ್ರಹ ನೀಡುತ್ತಾರೆ ಎಂದು ಹೇಳಿದರು.

ಗುಣವಂತ ಭಕ್ತರಿರುವ ನಮಗೆ ಹಣದ ಅವಶ್ಯಕತೆ ಇಲ್ಲ. ನೂತನ ಮಠವನ್ನು ಹಣದಾಸೆಗಾಗಿ ಮಾಡಿಲ್ಲ, ಭಕ್ತರಿಗಾಗಿ ಮಾಡಿದ್ದೇವೆ. ಆ ಮಠ, ಈ ಮಠ ಎನ್ನುವ ಭೇದ ಇಟ್ಟುಕೊಳ್ಳಬೇಡಿ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಎಲ್ಲರೂ ಸಹಕರಿಸಿದ್ದಾರೆ. ಎಲ್ಲರಿಗೂ ರಾಯರ ಅನುಗ್ರಹವಿದ್ದು, ನೂತನ ಮಠವು ಭಕ್ತರ ಶ್ರದ್ಧಾಕೇಂದ್ರವಾಗಿ ಬೆಳಗಲಿ ಎಂದರು.

ಪಟ್ಟಣದ ವರ್ತಕರು ಹಾಗೂ ಶ್ರೀಮಠದ ಭಕ್ತರಾದ ಟಿ. ಕೊಟ್ರೇಶ್‌ ಶ್ರೇಷ್ಠಿಯವರನ್ನು ನೂತನ ಮಠದ ಗೌರವ ವಿಚಾರಣಾ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ ಎಂದು ಶ್ರೀಪಾದಂಗಳವರು ಘೋಷಿಸಿದರು.

ಇದಕ್ಕೂ ಮೊದಲು ಶ್ರೀಮಠದ ಅನೇಕ ವಿದ್ವಾಂಸರು ವಿಶೇಷ ಉಪನ್ಯಾಸ ನೀಡಿದರು. ಕಂಪ್ಲಿ ಶಾಸಕರಾದ ಜೆ.ಎನ್‌.ಗಣೇಶ್‌ ಅವರು ಇಂದಿನ ಶ್ರೀಮಠದ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿ ಶ್ರೀಪಾದಂಗಳವರಿಂದ ಆರ್ಶೀವಾದ ಪಡೆದರು.

ನಂತರ ಶ್ರೀಮಠದ ನಿರ್ಮಾಣಕ್ಕೆ ಸಹಕಾರ ನೀಡಿದ ಗಣ್ಯರು, ದಾನಿಗಳನ್ನು ಶ್ರೀಪಾದಂಗಳವರು ರಾಯರ ಮಂತ್ರಾಕ್ಷತೆ ನೀಡಿ ಸನ್ಮಾನಿಸಿ ಆಶೀರ್ವದಿಸಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.