ಮಳೆಹಾನಿ ಸಂತ್ರಸ್ತೆಯಿಂದ ಹಣ ಕಸಿದ ಆರೋಪ: ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

Team Udayavani, Feb 27, 2020, 5:42 AM IST

Z-PROTEST

ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡ ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಂತ್ರಸ್ತ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಪರಿಹಾರದ ಹಣದಲ್ಲಿ ಸುಮಾರು 40 ಸಾವಿರ ರೂ.ಗಳನ್ನು ನಗರಸಭಾ ಸಿಬಂದಿಯೊಬ್ಬರು ಬೆದರಿಕೆವೊಡ್ಡಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರಸಭಾ ಕಚೇರಿ ಎದುರು ದಿಢೀರ್‌ ಧರಣಿ ಕುಳಿತ ವೇದಿಕೆಯ ಪ್ರಮುಖರು ಬಾಕಿ ಉಳಿಸಿಕೊಂಡಿರುವ ಪರಿಹಾರದ ಹಣವನ್ನು ತಕ್ಷಣ ನೀಡಬೇಕು ಮತ್ತು ತಪ್ಪಿತಸ್ಥ ಅಧಿಕಾರಿಯನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಸಂಘಟನೆಯ ಅಧ್ಯಕ್ಷ ಪವನ್‌ ಪೆಮ್ಮಯ್ಯ ಮಾತನಾಡಿ, ಚಾಮುಂಡೇಶ್ವರಿ ನಗರ ಬಡಾವಣೆಯ ನೂರ್‌ ಜಹಾನ್‌ ಎಂಬ ಸಂತ್ರಸ್ತ ಮಹಿಳೆಗೆ ಪರಿಹಾರವಾಗಿ ಒಟ್ಟು 1.40 ಲಕ್ಷ ರೂ. ನೀಡಲಾಗಿತ್ತು. ಆದರೆ ಪರಿಹಾರ ವಿತರಣೆಗೆ ಸಂಬಂಧಿಸಿದ ನಗರಸಭೆಯ ಅಧಿಕಾರಿಯೊಬ್ಬರು ಬೆದರಿಕೆಯೊಡ್ಡಿ 40 ಸಾವಿರ ರೂ. ಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು.

ಫ‌ಲಾನುಭವಿಗಳ ಆಯ್ಕೆಯಲ್ಲಿ ಗೊಂದಲಗಳಿದ್ದರೆ ಪರಿಶೀಲಿಸಿ ಪರಿಹಾರ ವಿತರಣೆಯಲ್ಲಿ ಲೋಪವಾಗಿದ್ದರೆ ಸರಿಪಡಿಸಬೇಕು. ಆದರೆ ಏಕಾಏಕಿ ನಗರಸಭೆಯ ಅಧಿಕಾರಿಯೊಬ್ಬರು ದೌರ್ಜನ್ಯದಿಂದ ಸರ್ಕಾರದ ಹಣವನ್ನು ಕಸಿದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ವಿಕಲಚೇತನ ಪುತ್ರನನ್ನು ಹೊಂದಿರುವ ಸಂತ್ರಸ್ತೆ ಅಸಹಾಯಕರಾಗಿದ್ದು, ತತ್‌ಕ್ಷಣ ಹಣವನ್ನು ಮರಳಿಸಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪೌರಾಯುಕ್ತ ರಮೇಶ್‌ ಅವರು ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಇಲ್ಲ, ಸೂಕ್ತ ತನಿಖೆ ಕೈಗೊಂಡು ಸಂಬಂಧಿಸಿದ ಅಧಿಕಾರಿಗೆ ನೊಟೀಸ್‌ ನೀಡಲಾಗುವುದು. ನಂತರ ನಿಜಾಂಶ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನ್ಯಾಯ ಸಿಗದಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪವನ್‌ ಪೆಮ್ಮಯ್ಯ ತಿಳಿಸಿದರು.

ಖಜಾಂಚಿ ಉಮೇಶ್‌ ಗೌಡ, ನಿರ್ದೇಶಕ‌ ಪಾಪು ರವಿ, ವಿನು, ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ, ಮಡಿಕೇರಿ ನಗರ ಕಾಂಗ್ರೆಸ್‌ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ಸಂತ್ರಸ್ತೆ ನೂರ್‌ಜಹಾನ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.