ಕೊಡಗು: ಕೋವಿಡ್ ಸೋಂಕಿಗೆ ಮತ್ತೊಂದು ಬಲಿ, ಸೋಂಕಿತರ ಸಾವಿನ ಸಂಖ್ಯೆ 28ಕ್ಕೆ ಏರಿಕೆ
Team Udayavani, Sep 15, 2020, 4:48 PM IST
ಕೊಡಗು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಂದು ಮತ್ತೊಂದು ಸಾವು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 28 ಕ್ಕೇರಿದೆ.
ಮಡಿಕೇರಿ ತಾಲ್ಲೂಕು ಎಮ್ಮೆಮಾಡು ಗ್ರಾಮದ ನಿವಾಸಿ 50 ವರ್ಷದ ಪುರುಷರೊಬ್ಬರು ಈ ಹಿಂದಿನಿಂದಲೂ ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಪಾರ್ಶ್ವವಾಯು ಕಾಯಿಲೆಗೆ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸೆ.8ರಂದು ಕಫ ಸಮಸ್ಯೆಯಿಂದ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ (ಅಶ್ವಿನಿ ಆಸ್ಪತ್ರೆಗೆ) ಬಂದಿದ್ದು, ಆಗ ಅವರಿಗೆ ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ತಕ್ಷಣ ಅವರನ್ನು ಕೋವಿಡ್ ಆಸ್ಪತ್ರೆಯ ಐ.ಸಿ.ಯು ಗೆ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರೆಸಿದ್ದುಇಂದು ಬೆಳಿಗ್ಗೆ 8.00 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಈರುಳ್ಳಿ ರಫ್ತು ನಿಷೇಧದಿಂದ ಪಾಕ್ ಗೆ ಲಾಭವಾಗಲಿದೆಯಾ…; ಶರದ್ ಪವಾರ್ ವಾದವೇನು?
ಮೃತ ದೇಹದ ಅಂತ್ಯ ಸಂಸ್ಕಾರವನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ