ಶನಿವಾರಸಂತೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
Team Udayavani, May 25, 2019, 6:10 AM IST
ಶನಿವಾರಸಂತೆ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ಸಿಂಹ ಗೆಲವು ಹಿನ್ನಲೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಸಂಜೆ 5 ಗಂಟೆ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕೆಆರ್ಸಿ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ಸಿಂಹ ಗೆಲುವು ಹಿನ್ನಲೆಯಲ್ಲಿ ಸಂತಸಗೊಂಡು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಪ್ರಮುಖ ಎಸ್.ಎನ್.ರಘು, ಎಚ್.ಆರ್.ಹರೀಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.