ಬಿಜೆಪಿ ದುರಾಡಳಿತದಿಂದ ಜನರ ಶಾಂತಿ ಭಂಗ: ವೆಂಕಪ್ಪ ಗೌಡ

Team Udayavani, Oct 29, 2019, 5:50 AM IST

ಮಡಿಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತದಿಂದ‌ ದೇಶದ ಆರ್ಥಿಕ ಕ್ಷೇತ್ರ ಕುಂಟಿತಗೊಳ್ಳುತ್ತಿದ್ದು, ಜನರ ನೆಮ್ಮದಿ ಭಂಗವಾಗಿದೆ ಎಂದು ಆರೋಪಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ವೆಂಕಪ್ಪಗೌಡ, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿ ಮತ್ತು ಮಡಿಕೇರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಗರದ ಬಾಲಭಾವನದಲ್ಲಿ ನಡೆದ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಜನರಿಗೆ ಮರು ಸ್ವಾತಂತ್ರ್ಯ ಪಡೆಯುವ ಅನಿವಾರ್ಯತೆ ಎದುರಾಗಿದ್ದು, ಕೇಂದ್ರ ಸರ್ಕಾರದ‌ ಅರ್ಥವಿಲ್ಲದ ಆರ್ಥಿಕ ನೀತಿಯಿಂದ ಆತಂಕ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.
ದೇಶ ವಿದೇಶಗಳಿಗೆ ಪ್ರಯಾಣ ಬೆಳೆಸುವ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದ ಸಮಸ್ಯೆಗಳನ್ನು ಕಡೆಗಣಿಸುತ್ತಿದ್ದಾರೆ. ಈ ನಡುವೆ ಪ್ರಾಕೃತಿ ವಿಕೋಪದಿಂದ ಕಾಫಿ, ಕಾಳು ಮೆಣಸು ಸೇರಿದಂತೆ ಇನ್ನಿತರ ಬೆಳೆಗಳು ನಾಶವಾಗಿರುವ ಸಂದರ್ಭವೇ ಆರ್‌ಸಿಇಪಿ ಮುಕ್ತ ವ್ಯಾಪರ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿರುವುದು ಖಂಡನೀಯವೆಂದು ವೆಂಕಪ್ಪಗೌಡ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಸದಸ್ಯ‌ ವೀಣಾಅಚ್ಚಯ್ಯ ಮಾತನಾಡಿ, ಕಾಂಗ್ರೆಸ್‌ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಬ್ಲಾಕ್‌ ಕಾಂಗ್ರೆಸ್‌ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆಗೆ ಕೆಪಿಸಿಸಿ ಸೂಚನೆ ನೀಡಿದೆ. ಇದರಿಂದ ಯಾವ ಕಾರ್ಯಕರ್ತರಿಗೂ ಅನ್ಯಾಯವಾಗುವುದಿಲ್ಲ, ಬದಲಿಗೆ ಪಕ್ಷ ಬಲಿಷ್ಠವಾಗಿ ಪ್ರತಿಯೊಬ್ಬರು ಅಧಿಕಾರವನ್ನು ಅನುಭವಿಸಬಹುದು ಎಂದು ಸ್ಪಷ್ಟ ಪಡಿಸಿದರು.

ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್‌ ಕುಮಾರ್‌ ಮಾತನಾಡಿ, ಬಿಜೆಪಿ ನೇತೃತ್ವದ ಸರ್ಕಾರದ ಜನವಿರೋಧಿ ನೀತಿಯಿಂದ ದೇಶದ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಪ್ರು ರವೀಂದ್ರ ತಾವು ಪಕ್ಷದ ಬೆಳವಣಿಗೆಗಾಗಿ ಶ್ರಮಿಸಿದ ಬಗ್ಗೆ ವಿವರಿಸಿದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕ ಶಾಹೀದ್‌, ಕೆಪಿಸಿಸಿ ಹಿರಿಯ ಸದಸ್ಯ ಟಿ.ಪಿ.ರಮೇಶ್‌, ಕೆ.ಎಂ.ಲೋಕೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಹನೀಫ್ ಸಂಪಾಜೆ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹ್ಯಾರಿಸ್‌, ಮಡಿಕೇರಿ ನಗರ ಕಾಂಗ್ರೆಸ್‌ ಅಧ್ಯಕ್ಷ ಕೆ.ಯು.ಅಬ್ದುಲ್‌ ರಜಾಕ್‌, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್‌, ಜಿ.ಪಂ. ಸದಸ್ಯರಾದ ಕುಮುದಾ ಧರ್ಮಪ್ಪ ಮತ್ತಿತರರುಉಪಸ್ಥಿತರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ