ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಅಸಮಾಧಾನ

Team Udayavani, Jun 10, 2019, 6:10 AM IST

ಮಡಿಕೇರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರಕಾರ ಕೊಡಗು ಜಿಲ್ಲೆಯ ಸಂತ್ರಸ್ತರ ಪಾಲಿಗೆ ದುಃಸ್ವಪ್ನವಾಗಿ ಕಾಡುತ್ತಿದೆ ಎಂದು ಟೀಕಿಸಿರುವ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ, ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವ ಸರಕಾರಕ್ಕೆ ಮಳೆಹಾನಿ ಸಂಭವಿಸಿ 10 ತಿಂಗ‌ಳುಗಳೇ ಕಳೆದರು ಕೊಡಗಿನ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ಸಾಧ್ಯವಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ ಅವರು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಸಿಲುಕಿ ಸಂತ್ರಸ್ತರಾದ ಕುಟುಂಬಗಳು ಇಂದಿಗೂ ದಿಕ್ಕು ಕಾಣದ ಕುರುಡರಂತೆ ಜೀವನ ಸಾಗಿಸುವ ಪರಿಸ್ಥಿತಿಯಲ್ಲಿದ್ದು, ಅವರ ನೋವಿಗೆ ಸ್ಪಂದಿಸಬೇಕಾದ ರಾಜ್ಯದ ಮೈತ್ರಿ ಸರಕಾರ ಕೇವಲ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಫೆವಿಕಾಲ್‌ ಸರಕಾರವಾಗಿ ಕುರ್ಚಿಗೆ ಅಂಟಿ ಕುಳಿತಿದೆ ಎಂದು ಟೀಕಿಸಿದರು.

ಕಳೆದ ಮಳೆಗಾಲದಲ್ಲಿ ಕೊಡಗಿನ ಸುಮಾರು 32 ಗ್ರಾಮಗಳಲ್ಲಿ ಸಂಭವಿಸಿದ ಜಲಪ್ರಳಯದಿಂದಾಗಿ ಆ ಗ್ರಾಮಗಳಲ್ಲಿ ಹರಿಯುತ್ತಿದ್ದ ನದಿ, ತೊರೆಗಳೇ ಮಾಯವಾಗಿದ್ದು, ಗದ್ದೆಗಳಲ್ಲಿ ಹೂಳು ತುಂಬಿಕೊಂಡಿದೆ. ಹಾರಂಗಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಸುಮಾರು 30 ಅಡಿಗಳಷ್ಟು ಹೂಳು ನಿಂತಿದೆ. ಈ ಹೂಳುಗಳನ್ನು ತೆಗೆದು ರೈತರ ಜೀವನಕ್ಕೆ ಆಸರೆಯಾಗಬೇಕಿದ್ದ ಸರಕಾರ ಯಾವುದೇ ಕ್ರಮಕೈಗೊಳ್ಳದೆ ನಿದ್ರಾವಸ್ಥೆಗೆ ಜಾರಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೈಗೊಳ್ಳಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಬಗ್ಗೆಯೂ ಕಿಡಿಕಾರಿದ ಯಮುನಾ ಚಂಗಪ್ಪ ಗ್ರಾಮ ವಾಸ್ತವ್ಯ ಎನ್ನುವುದೇ ಹಾಸ್ಯಾಸ್ಪದ. ಮುಖ್ಯಮಂತ್ರಿಯಾದವರಿಗೆ ಎಲ್ಲಾ ಸಮಸ್ಯೆಗಳ ಅರಿವು ಇದ್ದು, ಕುರ್ಚಿಯಲ್ಲಿ ಕುಳಿತುಕೊಂಡೇ ಆ ಸಮಸ್ಯೆಗಳನ್ನು ಪರಿಹರಿಸಬಹುದು. ಅದಕ್ಕಾಗಿ ಗ್ರಾಮ ವಾಸ್ತ$Âವ ಮಾಡುವ ಅಗತ್ಯವಿಲ್ಲ. ಈ ಹಿಂದಿನ ವರ್ಷಗಳಲ್ಲಿ ಮುಖ್ಯಮಂತ್ರಿಗಳು ನಡೆಸಿದ ಗ್ರಾಮ ವಾಸ್ತವ್ಯಗಳಿಂದ ಎಷ್ಟು ಗ್ರಾಮಗಳು ಸುವರ್ಣ ಗ್ರಾಮಗಳಾಗಿವೆ ಎಂದು ಪ್ರಶ್ನಿಸಿದರು.

ಗ್ರಾಮ ವಾಸ್ತವ್ಯ ಊಟ, ತಿಂಡಿ, ನಿದ್ದೆಗಷ್ಟೇ ಸೀಮಿತವಾಗಲಿದೆ ಎಂದು ಲೇವಡಿ ಮಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ವಾಸ್ತವ್ಯ ಮಾಡುವ ಬದಲು ಮುಖ್ಯಮಂತ್ರಿಗಳು ಕೊಡಗಿನಲ್ಲಿ ವಾಸ್ತವ್ಯ ಹೂಡಿ ಇಲ್ಲಿನ ಸಂತ್ರಸ್ತರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಿ ಎಂದು ಸಲಹೆ ನೀಡಿದರು.
ಕೊಡಗಿನ ಸಂತ್ರಸ್ತರಿಗಾಗಿ ದಾನಿಗಳು ಹಲವು ರೀತಿಯಲ್ಲಿ ನೆರವು ನೀಡಿದ್ದು, ಅದರಲ್ಲಿ ಸರಕಾರ ಎಷ್ಟು ಹಣವನ್ನು ವೆಚ್ಚ ಮಾಡಿದೆ ಎಂಬ ಬಗ್ಗೆ ಶ್ವೇತ್ರಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ ರು. ತಮ್ಯಮ ಪುತ್ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಕಾರಣಕ್ಕಾಗಿ ಮಂಡ್ಯ ಜಿಲ್ಲೆಯೊಂದಕ್ಕೇ 8 ಸಾವಿರ ಕೋಟಿ ರೂ.ಗಳ ನೆರವು ಘೋಷಿಸಿದ ಮುಖ್ಯಮಂತ್ರಿಗೆ ಕೊಡಗಿನ ಸಂತ್ರಸ್ತರಿಗೆ ನೆರವು ನೀಡಲು ಸರಕಾರ ಬಳಿ ಹಣವಿಲ್ಲವೇ ಎಂದು ಯಮುನಾ ಚಂಗಪ್ಪ ಪ್ರಶ್ನಿಸಿದರು.

ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಪವಿತ್ರಾ ಮಡಿಕೇರಿ ತಾಲೂಕು ಅಧ್ಯಕ್ಷೆ ಕವಿತಾ ಬೆಳ್ಯಪ್ಪ, ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ನಳಿನಿ ಗಣೇಶ್‌, ಮಡಿಕೇರಿ ನಗರಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ರಾಜ್ಯ ಸಮಿತಿ ಸದಸ್ಯೆ ಉಷಾ ತೇಜಸ್ವಿ ಉಪಸ್ಥಿತರಿದ್ದರು.

ಮಹಿಳಾ ಬಲ
ದೇಶದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಗೆಲವು ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದಾಗಿದೆ. ಮಹಿಳಾ ಮೋರ್ಚಾದ ಕಾರ್ಯಕರ್ತರು ಮನೆಮನೆಗಳಿಗೆ ತೆರಳಿ ಮೋದಿ ಅವರ ಸಾಧನೆ, ಅವರ ಜನಪರ ಕಾರ್ಯಕ್ರಮಗಳು, ಜಾತ್ಯತೀತ ಮನೋಭಾವದ ಬಗ್ಗೆ ಮಹಿಳೆಯರಿಗೆ ಮನದಟ್ಟು ಮಾಡುವಲ್ಲಿ ಸಫ‌ಲರಾಗಿದ್ದಾರೆ. ಮೋದಿ ನೇತೃತ್ವದ ಸರಕಾರ 5 ವರ್ಷಗಳಲ್ಲಿ ಜಾತಿ ಧರ್ಮವನ್ನು ನೋಡದೆ ಎಲ್ಲÉ ಜಾತಿ, ಜನಾಂಗದವರಿಗೂ ಅನುಕೂಲವಾಗುವಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದಲ್ಲದೆ ಈ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಆಡಳಿತ ನಡೆಸಿದೆ ಎಂದು ಯಮುನಾ ಚಂಗಪ್ಪ ಹೇಳಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕೇಂದ್ರೀಯ ಪ್ರತ್ಯಕ್ಷ ತೆರಿಗೆ ಮಂಡಳಿ ವಾರ್ಷಿಕ ತೆರಿಗೆ ಸಂಗ್ರಹದ ಅಂಕಿಅಂಶವನ್ನು ಇಂದು ಬಿಡುಗಡೆಗೊಳಿಸಿದೆ. ಮಹಾರಾಷ್ಟ್ರ, ದಿಲ್ಲಿ ಮತ್ತು ಕರ್ನಾಟಕ ಈ ಮೂರು...

  • ಉಡುಪಿ: ಮಣಿಪಾಲ ಕೆಎಂಸಿಯ ಫಾರ್ಮಕಾಲಜಿ ವಿಭಾಗ ಮತ್ತು ಎಂಐಟಿಯ ಮಾಹಿತಿ ಮತ್ತು ಸಂವಹನ ವಿಭಾಗಗಳು ರೋಗಿಗಳ ಸುರಕ್ಷೆಗಾಗಿ ಔಷಧಗಳ ಪ್ರತಿಕೂಲ ಪರಿಣಾಮಗಳನ್ನು ವರದಿ...

  • ಜಲಮುನಿಗಳು ಅನ್ನುವ ಒಬ್ಬ ಗುರುಗಳಿದ್ದರು. ಅವರು ನೀರಿನ ಮೇಲೆ ನಡೆದಾಡುವ, ಓಡುವ, ಕುಳಿತುಕೊಳ್ಳುವ, ನಿದ್ದೆ ಮಾಡುವ ಸಿದ್ದಿಯನ್ನು ಗಳಿಸಿಕೊಂಡಿದ್ದರು. ಅದನ್ನು...

  • ಮಂಗಳೂರು: ಬಹುಭಾಷಾ ನಟ ಅರ್ಜುನ್‌ ಸರ್ಜಾ ಅವರು ಚೆನ್ನೈಯ ಗೇರುಗಂಬಕ್ಕಂನಲ್ಲಿ ನಿರ್ಮಿಸುತ್ತಿರುವ ಬೃಹತ್‌ ಹನುಮಾನ್‌ ದೇವಸ್ಥಾನಕ್ಕೆ ಅಗತ್ಯವಾಗಿರುವ ಮರದ...

  • ಬಂಟ್ವಾಳ/ ಮಂಗಳೂರು: ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಅ. 24ರಂದು ದ.ಕ. ಜಿಲ್ಲಾ ಪ್ರವಾಸ ನಡೆಸಲಿದ್ದು, ಬೆಳಗ್ಗೆ 8.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ...