ರೈತರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ

Team Udayavani, Nov 23, 2021, 5:35 AM IST

ರೈತರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ

ಮಡಿಕೇರಿ: ಕೃಷಿಗೆ ಸಂಬಂಧಿಸಿದಂತೆ ರೈತರ ಹಿತ ಕಾಯಲು ಅಗತ್ಯವಿರುವ ಕಾನೂನುಗಳನ್ನು ರೂಪಿಸಲು ರಾಜ್ಯ ಸರಕಾರ ಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಕೇಂದ್ರ ಸರಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು.

ಮಡಿಕೇರಿಯಲ್ಲಿ ಬಿಜೆಪಿಯ ಜನಸ್ವರಾಜ್‌ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿ
ಗಾರರೊಂದಿಗೆ ಮಾತನಾಡಿದರು. ಮೂರು ಕೃಷಿ ಮಸೂದೆಗಳನ್ನು ಸರಕಾರ ವಾಪಸು ಪಡೆದಿದ್ದರೂ ರೈತರ ಹಿತ ಕಾಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಳ್ಳಲಿದೆ ಎಂದರು.

ಕೃಷಿ ಕಾಯ್ದೆ ರೂಪಿಸುವುದು 30 ವರ್ಷಗಳ ಹಿಂದಿನ ಬೇಡಿಕೆಯಾಗಿದ್ದು, ಬೇರೆಬೇರೆ ಸರಕಾರಗಳು ಅಧಿಕಾರದಲ್ಲಿದ್ದಾಗಲೂ ಚರ್ಚೆಯಾ ಗಿದೆ. ಅಲ್ಲದೆ ಬೇರೆ ಬೇರೆ ಸಮಿತಿಗಳು ನೀಡಿದ ವರದಿಯ ಆಧಾರದಲ್ಲೇ ಕಾಯ್ದೆಯನ್ನು ರೂಪಿಸಲಾಗಿದೆ. ಆದರೆ ಕಾಯ್ದೆ ಕುರಿತು ಜನತೆಗೆ ಮನವರಿಕೆಮಾಡಿಕೊಡುವಲ್ಲಿ ಕೊರೊನಾ ಕಾರಣದಿಂದ ಸ್ವಲ್ಪ ಹಿನ್ನಡೆಯಾಯಿತು ಎಂದು ಶೋಭಾ ಒಪ್ಪಿಕೊಂಡರು.

ಇದನ್ನೂ ಓದಿ:ಪ್ರವಾಹ ಪೀಡಿತ ಪ್ರದೇಶಗಳಿಗೆ ಇಲಾಖಾ ಸಚಿವರ ಭೇಟಿ: ಸಿಎಂ

ಮರು ಸಮೀಕ್ಷೆಗೆ ಆದೇಶ
ಕೊಡಗು ಸೇರಿದಂತೆ ರಾಜ್ಯದ ಕಾಫಿ ಬೆಳೆಯುವ ಜಿಲ್ಲೆಗಳಲ್ಲಿ ಈ ಬಾರಿ ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದಾಗಿ ಕಾಫಿ, ಅಡಿಕೆ ಹಾಗೂ ಭತ್ತದ ಬೆಳೆಗೆ ಭಾರೀ ಹಾನಿಯಾಗಿದೆ. ನಷ್ಟದ ಮರು ಸಮೀಕ್ಷೆ ನಡೆಸಿ ವರದಿ ನೀಡುವಂತೆ ವಾಣಿಜ್ಯ ಸಚಿವಾಲಯದ ಮೂಲಕ ಕಾಫಿ ಮಂಡಳಿಗೆ ಆದೇಶ ಕೊಡಿಸಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ಜನ ಸ್ವರಾಜ್‌ ಸಮಾವೇಶದಲ್ಲಿ ಭರವಸೆ ನೀಡಿದರು.

ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸಚಿವರ ಗಮನಸೆಳೆದು, ಕಾಫಿ ಮಂಡಳಿ ಅಧಿಕಾರಿಗಳು ಸ್ಥಳ ಸಮೀಕ್ಷೆ ಮಾಡದೆ ಬೆಳೆಗಾರರೊಂದಿಗೆ ಉಡಾಫೆಯಿಂದ ವರ್ತಿಸುತ್ತಿದ್ದು, ಕಾಫಿ ಬೆಳೆ ಹಾನಿಯಾಗಿರುವ ಕೆಲವು ಗ್ರಾಮಗಳನ್ನೇ ಕೈಬಿಟ್ಟಿದ್ದಾರೆ. ಇದರಿಂದಾಗಿ ಕೊಡಗಿನ ಬಹುತೇಕ ಕಾಫಿ ಬೆಳೆಗಾರರು ಪರಿಹಾರದಿಂದ ವಂಚಿತರಾಗುವ ಸಂಭವವಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈ ಸಂಬಂಧ ಮರು ಸಮೀಕ್ಷೆಗೆ ಕೇಂದ್ರ
ಸರಕಾರದಿಂದಲೇ ಆದೇಶ ಹೊರಡಿಸ ಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.