ಪಾಳುಬಿದ್ದ ಮಡಿಕೇರಿ ಅರಮನೆ ವೀಕ್ಷಿಸಿದ ಜಿಲ್ಲಾಧಿಕಾರಿ
Team Udayavani, Mar 7, 2020, 12:19 AM IST
ಮಡಿಕೇರಿ: ನಗರದ ಐತಿಹಾಸಿಕ ಕೋಟೆ ಆವರಣದಲ್ಲಿರುವ ಅರಮನೆಯ ಅವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬುಧವಾರ ಪರಿಶೀಲಿಸಿದರು. ಎರಡು ತಿಂಗಳ ಒಳಗಾಗಿ ಅರಮನೆಯ ಮೇಲ್ಚಾವಣಿ ಸರಿಪಡಿಸುವ ಕಾರ್ಯವನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರವು ಕೋಟೆ ಮೇಲ್ಚಾವಣಿ ದುರಸ್ತಿ ಕಾರ್ಯಕ್ಕೆ ಒಟ್ಟು 54 ಲಕ್ಷ ರೂ. ಬಿಡುಗಡೆ ಮಾಡಿದ್ದು, ಮೊದಲನೇ ಹಂತದಲ್ಲಿ 40 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.
ಪಾರಂಪರಿಕ ವಾಸ್ತುಶಿಲ್ಪ ಹೊಂದಿರುವ ಮಡಿಕೇರಿಯ ಐತಿಹಾಸಿಕ ಅರಮನೆ ಮತ್ತು ಕೋಟೆ ಆವರಣವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಕಂದಾಯ ಇಲಾಖೆಯು ಈಗಾಗಲೇ 8 ಕೋಟಿ ರೂ. ಅನುದಾನಕ್ಕೆ ಮಂಜೂರಾತಿ ನೀಡಿದ್ದು, ಹೆಚ್ಚುವರಿಯಾಗಿ 2 ಕೋಟಿ ರೂ. ಅನುಧಾನಕ್ಕೆ ಬೇಡಿಕೆ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ