ಮುಂಗಾರು ಮಳೆ:ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ

Team Udayavani, May 29, 2018, 6:55 AM IST

z-dc-meeting-1.jpg

ಮಡಿಕೇರಿ: ಮಳೆಗಾಲದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೆಗೊಳ್ಳುವ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  
      
ನಾಲ್ಕು ದಿನಗಳಿಂದ ಕೊಡಗು ಜಿಲ್ಲೆ ಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್‌ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಅವರು ಹೇಳಿದ‌ರು.
 
ಮಳೆ  ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶ ನೀಡಿದರು. 
  
ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡು, ದುಬಾರೆ ಮತ್ತು ಲಕ್ಷ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ಭೂ ಕುಸಿತ ಹಾಗೂ ರಸ್ತೆಯ ಮೇಲೆ ಮರ ಬಿದ್ದು, ಸಾರಿಗೆ ಸಂಪರ್ಕ ಕಡಿದು ಹೋಗುವ ಸಂದರ್ಭದಲ್ಲಿ ಲೋಕೋಪಯೋಗಿ, ಅರಣ್ಯ, ಗ್ರಾಮೀàಣ ಅಭಿವೃದ್ಧಿ ಎಂಜಿನಿಯರಿಂಗ್‌ ವಿಭಾಗ, ಸೆಸ್ಕ್ ಇಲಾಖೆಗಳು ಹಾಗೂ ಪೋಲೀಸ್‌ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.    
  
ಕಾವೇರಿ ನದಿ ಪಾತ್ರದ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಗಂಜಿ ಕೇಂದ್ರ ತೆರೆಯುವುದು, ನಿರಾಶ್ರಿತರನ್ನು ಸ್ಥಳಾಂತರ ಮಾಡುವುದು ಮತ್ತಿತರ ಕಾರ್ಯಗಳನ್ನು ಚುರುಕಿನಿಂದ ನಿರ್ವ”ಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.   

ವಿದ್ಯುತ್‌ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವ:ಇಸುವುದು. ಹೋಂ ಗಾರ್ಡ್‌ ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾುªರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಡಿವೈಎಸ್‌ಪಿ ಸುಂದರರಾಜ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್‌, ಗƒಹ ರಕ್ಷಕದಳದ ಅಧಿಕಾರಿ ಚಂದನ್‌, ಸೆಸ್ಕ್ ಇಇ ಸೋಮಶೇಖರ, ಲೋಕೋಪಯೋಗಿ ಇಲಾಖೆ ಇಇ ವಿನಯಕುಮಾರ್‌, ಪೌರಾಯುಕ್ತೆ ಬಿ.ಶುಭಾ, ತಹಶೀಲ್ದಾರರಾದ ಶಾರದಾಂಬ, ಗೋವಿಂದರಾಜು, ಬಾಡ್ಕರ್‌, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್‌, ಎಇಇ ಗಳಾದ ಇಬ್ರಾಹಿಂ, ಸ್ವಾಮಿ,  ಸುರೇಶ್‌, ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್‌, ತಾ.ಪಂ.ಇಒಗಳಾದ ಜೀವನ್‌ ಕುಮಾರ್‌, ಮತ್ತಿತರರು ಮಾಹಿತಿ ನೀಡಿದರು.  

ಸಹಾಯವಾಣಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬಂದಿ, ಸಾರ್ವ ಜನಿಕರು ಅತಿವೃಷ್ಟಿ ಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ ಸಂಖ್ಯೆ 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು. 
 
ವಿದ್ಯುತ್‌ ವ್ಯತ್ಯಯ, ಕಂಬ ಬಿದ್ದಿರು ವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯ ವಾಣಿ 1912 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.ಮಳೆಗಾಲದ ಅವಧಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ-ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.  

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.