ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ : ಪವನೇಶ್‌ 

Team Udayavani, Jul 4, 2017, 3:45 AM IST

Z-PARISARA-1.jpg

ಮಡಿಕೇರಿ: ದೇಶದ ಸಂವಿಧಾನದ 51 (ಎ) ಅಡಿಯಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯಗಳಲ್ಲಿ ಒಂದಾಗಿದೆ. ಈ ಬಗ್ಗೆ ನಾವು ಕಾಳಜಿ ತೋರಬೇಕಾಗುತ್ತದೆ. ಕಾನೂನಿಂದಲೇ ಇದೆಲ್ಲವನ್ನೂ ರಕ್ಷಿಸಲು ಸಾಧ್ಯವಿಲ್ಲ, ಬದಲಿಗೆ ಸಾರ್ವಜನಿಕರ ಸಹಕಾರದಿಂದ ಮಾತ್ರ ಪರಿಸರ ರಕ್ಷಣೆ ಸಾಧ್ಯ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ್‌ ಡಿ. ತಿಳಿಸಿದ್ದಾರೆ.
 
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನೆಹರು ಯುವಕೇಂದ್ರ, ಗ್ರೀನ್‌ ಸಿಟಿ ಫೋರಂ, ರೋಟರಿ ಕ್ಲಬ್‌, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಒಡಿಪಿ ಸಂಸ್ಥೆ, ತಾಲೂಕು ಯುವ ಒಕ್ಕೂಟ, ಅರಣ್ಯ ಇಲಾಖೆ, ಮಡಿಕೇರಿ, ಗ್ರಾಮ ಪಂಚಾಯತ್‌, ಸರಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಕಾರ್ನರ್‌ ಫ್ರೆಂಡ್ಸ್‌, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಕಡಗದಾಳು ಗ್ರಾಮ ಇವರ ಸಂಯುಕ್ತಾಶ್ರಯದಲ್ಲಿ ಬೊಟ್ಟಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವದ ಅಂಗವಾಗಿ ಕಡಗದಾಳು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ನಡೆಯಿತು. 

ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾಯಾಧೀಶರು  ಗಿಡ ನೆಡುವುದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನವೂ ಪರಿಸರ ಕಾಳಜಿ ಪಾಲಿಸುವಂತಾಗಬೇಕು. ಪರಿಸರದ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಎಂದರು.

ವಕೀಲರ ಸಂಘದ ಕಾರ್ಯದರ್ಶಿ ಪಿ.ಯು. ಪ್ರೀತಂ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ. ಪ್ರವಾಸಿಗರಿಗೆ, ಮಕ್ಕಳಿಗೆ ವಿವಿಧ ಸಸಿಗಳ ಬೀಜಗಳನ್ನೊಳಗೊಂಡ ಮಣ್ಣಿನಿಂದ ಮಾಡಿದ ಚೆಂಡುಗಳನ್ನು ನೀಡಿ ಅವರು ಅದನ್ನು ಎಲ್ಲೆಂದರಲ್ಲಿ ಬಿಸಾಡಿದಾಗ ಅಲ್ಲಿ ಪ್ರಾಕೃತಿಕವಾಗಿ ಸಸಿ ಹುಟ್ಟುವಂತಹ ವ್ಯವಸ್ಥೆಯ ಬಗ್ಗೆ ತಿಳಿಸಿದರು.

ಗ್ರಾ.ಪಂ. ಉಪಾಧ್ಯಕ್ಷರಾದ ಎಂ.ಪಿ. ತಿಮ್ಮಯ್ಯ ಅವರು ಮಾತನಾಡಿ ನಾವು ಇಂದು ಆಧುನಿಕತೆಯ ನೆಪ ಹೇಳಿ ವಿಷಯುಕ್ತ ಗಾಳಿ, ಪರಿಸರದಲ್ಲಿ ಜೀವಿಸುವಂತಾಗಿದೆ. ಇದು ಕೇವಲ ಸಂಬಂಧಿಸಿದ ಇಲಾಖೆಗಳಿಗೆ ಮಾತ್ರ ಸಂಬಂಧಿಸಿದಲ್ಲ. ಪ್ರತಿಯೊಬ್ಬರೂ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು. 

ಸಹಾಯಕ ಪರಿಸರಧಿಕಾರಿ ಅವರು ಮಾತನಾಡಿ ಗಿಡ ನೆಡುವುದಕ್ಕೂ ಕುಡಿಯುವ ನೀರಿಗೂ ಸಂಬಂಧವಿದೆ. ಉತ್ತಮ ಪರಿಸರವಿದ್ದಾಗ ನೀರು ಮಾಲಿನ್ಯವಾಗದೆ ಶುದ್ಧವಾಗಿರುತ್ತದೆ. ಕೊಡಗನ್ನು ಪರಿಸರ ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಇಲಾಖೆಯ ಗುರಿಯಾಗಿದೆ ಎಂದರು. 

ಕಡಗದಾಳು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಂಗಮ್ಮ ಅವರು ಮನುಷ್ಯ ಸ್ವಾರ್ಥಕ್ಕಾಗಿ ಇಂದು ಪರಿಸರವನ್ನು ಹಾಳು  ಮಾಡುತ್ತಿದ್ದಾನೆ. ಆದ್ದರಿಂದ ನಾವೀಗ ಹವಾಮಾನ ವೈಪರೀತ್ಯ ಕಾಣುವಂತಾಗಿದೆ ಎಂದರು. 

ವೇದಿಕೆಯಲ್ಲಿ ಗ್ರೀನ್‌ ಸಿ.ಟಿ. ಪೋರಂನ ರತನ್‌ ತಮ್ಮಯ್ಯ, ಅರಣ್ಯ ಅಧಿಕಾರಿ ವಿನುತಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನೀಲಮ್ಮ, ಯುವ ಸಂಘದ ಅಧ್ಯಕ್ಷರಾದ ಕೆ.ಬಾಲನ್‌, ಒಡಿಪಿ ಸಂಸ್ಥೆಯ ಜಾಯ್ಸ ಮೆನೇಜಸ್‌, ಟಿ.ಆರ್‌.ವಾಸು, ಬಿ.ಡಿ.ನಾರಾಯಣ ರೈ, ಎಂ.ಎಸ್‌. ಯೂಸಫ್, ಜಲೀಲ್‌, ರಮೇಶ ರೈ, ಗೀತಾ ರಮೇಶ, ರಮೇಶ ಆಚಾರಿ, ಕೆ.ಅಯ್ಯಪ್ಪ ಕೊರವಂಡ ಮಾಚಯ್ಯ ಹಾಜರಿದ್ದರು. 

ಜಯಪ್ಪ ಸ್ವಾಗತಿಸಿ, ನಿರೂಪಿಸಿದರು. ಜಾಯ್ಸ ಮಿನೇಜಸ್‌ ವಂದಿಸಿದರು. ಇದಾದ ಅನಂತರ ಶಾಲೆ ದೇವಸ್ಥಾನ, ಮಸೀದಿ ಮತ್ತು ರಸ್ತೆಯ ಬದಿಗಳಲ್ಲಿ ಗಿಡ ನೆಡಲಾಯಿತು. 

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.