ಮಾಕುಟ್ಟ ರಸ್ತೆ ದುರಸ್ತಿಗೆ ಅಧಿಕಾರಿಗಳ ಸಹಕಾರ ಅಗತ್ಯ : ಹಿರಲಾಲ್‌

ಅರಣ್ಯ ಸಮನ್ವಯ ಸಭೆ

Team Udayavani, Jan 20, 2020, 5:19 AM IST

ಮಡಿಕೇರಿ: ಮಾಕುಟ್ಟ ರಸ್ತೆ ದುರಸ್ತಿ ಕಾರ್ಯ ನಡೆಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ಆಗಮಿಸುವ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕೆಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್‌ ನಿರ್ದೇಶನ ನೀಡಿದ್ದಾರೆ.

ಅರಣ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರದ ಅರಣ್ಯ ಭವನದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್‌ ಅವರು ಪ್ರಕೃತಿ ವಿಕೋಪದಿಂದಾಗಿ ರಸ್ತೆ ಹಾಗೂ ಸೇತುವೆ ಬಳಿ ಬಿದ್ದಿರುವ ಮರಗಳನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗುವುದು. ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸ್‌ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಇಲಾಖೆ ಅಧಿಕಾರಿಗಳು, ಪೊಲೀಸ್‌ ಇಲಾಖೆ ಅಧಿಕಾರಿಗಳೊಂದಿಗೆ ಸ್ಪಂದಿಸದಿದ್ದರೆ ನನ್ನ ಗಮನಕ್ಕೆ ತರುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಹೇಳಿದರು.

ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ನಾರಾಯಣ ಸ್ವಾಮಿ ಅವರು ಪ್ರವಾಹದಿಂದ ರಸ್ತೆ ಹಾಗೂ ಸೇತುವೆ ಬಳಿ ಬಿದ್ದಿರುವ ಮರಗಳನ್ನು ಸ್ಥಳದಲ್ಲಿಯೇ ಹರಾಜು ಮಾಡಿದರೆ ಹೇಗೆ ಎಂದು ಅವರು ಸಲಹೆ ಮಾಡಿದರು.

ಅರಣ್ಯ ಇಲಾಖೆ ಅಧಿಕಾರಿಗಳು ದೂರು ಬಾರದಂತೆ ನೋಡಿಕೊಳ್ಳಬೇಕು. ಸಮಯೋಚಿತವಾಗಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಕಿರಿಕಿರಿ ಮಾಡಿಕೊಳ್ಳುವುದು ಸರಿಯಲ್ಲ. ಆ ನಿಟ್ಟಿನಲ್ಲಿ ಜನರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಸಲಹೆ ಮಾಡಿದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ‌ ನಾರಾಯಣ ಸ್ವಾಮಿ ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್‌ ಅವರು ನಾಗರಹೊಳೆಯ ಗಿರಿಜನ ಹಾಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಮನೆ ನಿರ್ಮಾಣ, ವಿದ್ಯುತ್‌ ಸಂಪರ್ಕ ಕಲ್ಪಿಸಲು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭಾಕರನ್‌, ಶಿಂಧೆ, ಕಾರ್ಯಪ್ಪ, ಶಿವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸೀಮಾ, ದಯಾನಂದ, ರೋಷನ್‌, ಆಂಥೋನಿ, ಸೆಸ್ಕ್ ಇಇ ಸೋಮಶೇಖರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸುರೇಶ್‌, ಶಿವರಾಮು, ವೇಣುಗೋಪಾಲ್‌, ತಾ.ಪಂ.ಇಒಗಳಾದ ಲಕ್ಷಿ¾, ಸುನಿಲ್‌ ಕುಮಾರ್‌, ತಾಲ್ಲೂಕು ಸಮಾಜ ಕಲ್ಯಾಣಾದಿಕಾರಿ ಶೇಖರ್‌ ಇತರರು ಉಪಸ್ಥಿತರಿದ್ದರು.

ಆರ್‌ಟಿಸಿ ನೀಡಬೇಕಿದೆ
ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮಾತನಾಡಿ ಅರಣ್ಯ ಹಕ್ಕುಪತ್ರ ನೀಡಿರುವುದಕ್ಕೆ ಆರ್‌ಟಿಸಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳಲಾಗುವುದು. ನಾಗರಹೊಳೆ ವ್ಯಾಪ್ತಿಯ ಸಮಸ್ಯೆಗಳಿರುವ ಹಾಡಿ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದ್ದು, ಯಾವುದೇ ರೀತಿ ತೊಂದರೆ ನೀಡಬಾರದು ಎಂದು ತಿಳಿಸಿದರು.

ಮೂರು ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಅರಣ್ಯ ಹಕ್ಕುಪತ್ರ ನೀಡಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ