ಹಾರಂಗಿ ಜಲಾಶಯ ಭರ್ತಿ: 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ
Team Udayavani, Jul 3, 2022, 12:35 AM IST
ಮಡಿಕೇರಿ: ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ಭರ್ತಿಯಾಗುತ್ತಿದ್ದು 10,000 ಕ್ಯುಸೆಕ್ ನೀರನ್ನು ಶನಿವಾರ ನದಿಗೆ ಹರಿಯ ಬಿಡಲಾಯಿತು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಅನಂತರ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆಗೆ ಚಾಲನೆ ನೀಡಿದರು. ಕಳೆದ ವರ್ಷ ಜುಲೈ 16ರಂದು ಜಲಾಶಯದಿಂದ ನೀರನ್ನು ಬಿಡಲಾಗಿತ್ತು. ಈ ಬಾರಿ ಸಂಪೂರ್ಣ ತುಂಬಲು 3 ಅಡಿ ಬಾಕಿ ಇರುವಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದ ನೀರನ್ನು ಹರಿಯ ಬಿಡಲಾಗಿದೆ ಎಂದು ಶಾಸಕರು ತಿಳಿಸಿದರು.
2018 ಮತ್ತು 2019ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಜನರು ತುಂಬಾ ನೊಂದಿದ್ದಾರೆ. ಇನ್ನು ಮುಂದಕ್ಕೆ ಯಾವುದೇ ಅಪಾಯಗಳು ಸಂಭವಿಸದಿರಲಿ ಎಂದು ಪ್ರಾರ್ಥಿಸಿದ ಅವರು ಉತ್ತಮ ಮಳೆಯಾಗಿ ನಾಡಿನ ಜಲಾಶಯಗಳು ತುಂಬಿ ಕೃಷಿ ಚಟುವಟಿಕೆಗಳು ಸಮೃದ್ಧವಾಗಲಿ ಎಂದು ಹಾರೈಸಿದರು.