ಕಾನೂನು ಕಾಪಾಡಲು ಆರೋಗ್ಯ ಮುಖ್ಯ: ಎಸ್‌ಪಿ

Team Udayavani, Jul 24, 2017, 8:35 AM IST

Z-HEALTH-CAMP-1.gif

ಮಡಿಕೇರಿ: ಪೊಲೀಸ್‌ ಸಿಬಂದಿಗಳು ಸರಕಾರದ ಮತ್ತು ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್‌ ತಿಳಿಸಿದ್ದಾರೆ. 

ರೋಟರಿ ಕ್ಲಬ್‌, ಇಂಡಿಯನ್‌ ಮೆಡಿಕಲ್‌ ಅಸೋಸಿಯೆಷನ್‌ ಮತ್ತು ಇನ್ನರ್‌ ವೀಲ್‌ ಸಹಯೋಗದಲ್ಲಿ ನಗರದ ರೋಟರಿ ಕ್ಲಬ್‌ನಲ್ಲಿ ಮಂಗಳೂರಿನ ಯೂನಿಟಿ ಆಸ್ಪತ್ರೆ ವತಿಯಿಂದ ಪೊಲೀಸ್‌ ಇಲಾಖೆ ಹಾಗೂ ಗೃಹ ರಕ್ಷಕ ದಳದ ಸಿಬಂದಿಗಳಿಗಾಗಿ ನಡೆದ ಶ್ವಾಸಕೋಶದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಎಸ್‌ಪಿ ಮಾತನಾಡಿದರು.

ಯೋಗವನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಂಡಾಗ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ಅವರು ಅಭಿಪ್ರಾಯಪಟ್ಟರು.ಪ್ರಸ್ತುತ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ದು, ಇವುಗಳನ್ನು ತಡೆಗಟ್ಟಲು ಪ್ರತಿಯೊ ಬ್ಬರು ಕಾಳಜಿ ತೋರಬೇಕು. ನಾವೆಷ್ಟು ವರ್ಷ ಜೀವಿಸುತ್ತೇವೆ ಎನ್ನುವುದಕ್ಕಿಂತ ಎಷ್ಟು ವರ್ಷ ಆರೋಗ್ಯವಾಗಿರುತ್ತೇವೆ ಎನ್ನುವುದು ಮುಖ್ಯ. ಸಮಾಜದ ಶಾಂತಿಯನ್ನು ಕಾಪಾಡುವ ಪೋಲಿಸ್‌ ಅಧಿಕಾರಿಗಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು. 

ಒತ್ತಡದ ನಡುವೆ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಪಾಸಣೆ ಮಾಡಿಸಿ ಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ಎಸ್‌ಪಿ ರಾಜೇಂದ್ರಪ್ರಸಾದ್‌ ಸಲಹೆ ನೀಡಿದರು. ಯೋಗಾಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಒತ್ತಡಗಳಿಂದ ಮುಕ್ತಿ ಪಡೆಯಲು ಸಾಧ್ಯವಿದೆ ಎಂದ ಅವರು ಮಧ್ಯಪಾನ, ಧೂಮಪಾಗಳಂತಹ ದುಶ್ಚಟಗಳಿಂದ ದೂರ ಉಳಿಯುವಂತೆ ಕಿವಿ ಮಾತು ಹೇಳಿದರು. 

ಪೌಷ್ಟಿಕಾಂಶ ಹೊಂದಿರುವ ಆಹಾರಗಳನ್ನು ಸೇವಿಸುವುದು ಮತ್ತು ವ್ಯಾಯಾಮಗಳ ಮೂಲಕ ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವಂತೆ ಎಸ್‌ಪಿ ಹೇಳಿದರು.

ರೋಟರಿ ಕ್ಲಬ್‌ನ ಅಧ್ಯಕ್ಷರಾದ ಪಿ.ಯು. ಪ್ರೀತಂ ಮಾತನಾಡಿ, ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖೀ ಕಾರ್ಯಕ್ರಮಗಳನ್ನು  ರೋಟರಿ ಮೂಲಕ ನಡೆಸಲಾಗುವುದೆಂದರು.

ಉದ್ಘಾಟನಾ ಸಮಾರಂಭದಲ್ಲಿ ಇಂಡಿಯನ್‌ ಮೆಡಿಕಲ್‌ ಅಸೋಸಿಯೆಷನ್‌ ಅಧ್ಯಕ್ಷರಾದ ಡಾ| ಮೋಹನ್‌ ಅಪ್ಪಾಜಿ, ರೋಟರಿ ಕ್ಲಬ್‌ನ ಕಾರ್ಯದರ್ಶಿ ಕೆ.ಎಸ್‌. ರತನ್‌ ತಮ್ಮಯ್ಯ, ಇನ್ನರ್‌ ವೀಲ್‌ನ ಅಧ್ಯಕ್ಷರಾದ ಲತಾ ಚಂಗಪ್ಪ, ಕಾರ್ಯದರ್ಶಿ ನಿಶಾ ಮೋಹನ್‌, ರೋಟರಿ ಕ್ಲಬ್‌ನ ಸದಸ್ಯರಾದ ಕಾರ್ಯಪ್ಪ, ರೋಟರಿ ಕ್ಲಬ್‌ನ ಆಡಳಿತಾಧಿಕಾರಿಗಳಾದ ಬಿ. ದೇವರಾಜ್‌, ಮಂಗಳೂರು ಯೂನಿಟಿ ಆಸ್ಪತ್ರೆಯ ಪ್ರಮುಖ ರಾದ ರವಿ ಉಪಸ್ಥಿತರಿದ್ದರು.

ಮಂಗಳೂರು ಯೂನಿಟಿ ಆಸ್ಪತ್ರೆಯ ಶ್ವಾಸ ಕೋಶ ತಜ್ಞರಾದ ಡಾ| ಅಲ್ಕಾ ಸಿ. ಭಟ್‌ ಅವರ ತಂಡದ ನೇತೃತ್ವದಲ್ಲಿ ಶಿಬಿರ ನಡೆಯಿತು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.