ಸಹಕಾರ ಸಂಘಗಳಿಂದ ಸಮಾಜಮುಖೀ ಯೋಜನೆ ಜಾರಿಯಾಗಲಿ: ಗಂಗಣ್ಣ ಸಲಹೆ


Team Udayavani, Jul 13, 2019, 5:39 AM IST

Z-SAHAKARA-MEETING-4

ಮಡಿಕೇರಿ: ರಾಜ್ಯ ಸಹಕಾರ ಬ್ಯಾಂಕ್‌ಗಳು ಗ್ರಾಮೀಣ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ಮಾನ್ಯತೆ ಪಡೆದಿದ್ದು, ಸಹಕಾರ ಬ್ಯಾಂಕ್‌ಗಳು ಸಮಾಜದ ಅಭಿವೃದ್ಧಿಗೆ ಮತ್ತಷ್ಟು ಯೋಜನೆ ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ‌ ಎನ್‌.ಗಂಗಣ್ಣ ಅವರು ಸಲಹೆ ಮಾಡಿದ್ದಾರೆ.

ರಾಜ್ಯ ಸಹಕಾರ ಮಹಾ ಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹೋಟೆಲ್‌ ಕೂರ್ಗ್‌ ಇಂಟರ್‌ ನ್ಯಾಷನಲ್‌ನಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರಿಗೆ ಗುರುವಾರ ನಡೆದ ರಾಜ್ಯ ಮಟ್ಟದ ವಿಶೇಷ ತರಬೇತಿ ಉಪನ್ಯಾಸ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರು ಮತ್ತು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ ಅವರು ಮಾತನಾಡಿ ಜಿಲ್ಲೆಯ ಸಹಕಾರ ಬ್ಯಾಂಕ್‌ಗಳು ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್‌ನ ನಿರಾತರಿಗೆ ಪರಿಹಾರ ನೀಡಿದೆ. ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆ ರೂಪಿಸಿದೆ ಎಂದರು.

ರಾಜ್ಯ ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕ‌ ಶಶಿಧರ ಎಲೆ ಅವರು ಸಹಕಾರಿ ಸಂಘಗಳಲ್ಲಿ ಪರಿಣಾಮಕಾರಿ ಆಡಳಿತ ಮತ್ತು ನಿರ್ವಹಣೆಯ ಕುರಿತು ಉಪನ್ಯಾಸ ನೀಡಿದರು.

ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷರಾದ ಎನ್‌.ಗಂಗಣ್ಣ ಮತ್ತು ಡಿಸಿಸಿ ಬ್ಯಾಂಕ್‌ ನೂತನ ಅಧ್ಯಕ್ಷರಾದ ಬಾಂಡ್‌ ಗಣಪತಿ ಅವರನ್ನಿ ಇದೇ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಜಿಲ್ಲಾ ಸಹಕಾರ ಯೂನಿಯನ್‌ ಉಪಾಧ್ಯಕ್ಷ ಪಿ.ಸಿ.ಅಚ್ಚಯ್ಯ, ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕರಾದ ಎಸ್‌.ಪಿ. ನಿಂಗಪ್ಪ, ಪ್ರೇಮಾ ಸೋಮಯ್ಯ, ಬಿ.ಎ.ರಮೇಶ್‌ ಚಂಗಪ್ಪ, ಎಚ್‌.ಎನ್‌.ರಾಮಚಂದ್ರ, ಕೆ.ಎಸ್‌.ಗಣಪತಿ, ಪಿ.ಜಿ.ನಂಜುಂಡ, ಎನ್‌.ಎ.ರವಿ ಬಸಪ್ಪ, ಕೆ.ಎಂ.ತಮ್ಮಯ್ಯ, ಕನ್ನಂಡ ಸಂಪತ್‌, ಪಿ.ಮನು ರಾಮಚಂದ್ರ, ಸಿ.ಕೃಷ್ಣ ಗಣಪತಿ, ಬಿ.ವಿ.ಟಿ. ಮಣಿಪಾಲದ ಯೋಜನಾಧಿಕಾರಿ ಪಿ.ಅರುಣ್‌. ಇತರರು ಇದ್ದರು. ಜಿಲ್ಲಾ ಸಹಕಾರ ಯೂನಿಯನ್‌ ಸಿಇಒ ಯೋಗೇಂದ್ರ ನಾಯಕ್‌ ಅವರು ನಿರೂಪಿಸಿದರು, ಆರ್‌.ಮಂಜುಳಾ ಪ್ರಾರ್ಥಿಸಿದರು, ಕೊಡಪಾಲ ಗಣಪತಿ ಸ್ವಾಗತಿಸಿದರು, ರವಿ ಬಸಪ್ಪ ವಂದಿಸಿದರು.

“ಉತ್ತಮ ಕೆಲಸ’
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ಮಾತನಾಡಿ ಸಹಕಾರಿ ಬ್ಯಾಂಕ್‌ಗಳು ಜಿಲ್ಲೆಯಾದ್ಯಂತ ಹಲವಾರು ಉತ್ತಮ ಕೆಲಸ ನಡೆಸುತ್ತಿದೆ. ಜಿಲ್ಲೆಯ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡುತ್ತಿದೆ. ಜಿಲ್ಲೆಯ ವಿವಿಧ ಬ್ಯಾಂಕ್‌ಗಳೊಂದಿಗೆ ಉತ್ತಮ ಭಾಂಧವ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.