ಮಡಿಕೇರಿಯ ಮಹಿಳೆಗೆ ಸೋಂಕು: ಸಂಪಾಜೆ ಚೆಕ್ಪೋಸ್ಟ್ ಮೂಲಕ ಪ್ರವೇಶ
Team Udayavani, May 19, 2020, 9:26 AM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಮುಂಬಯಿಯಿಂದ ಮಡಿಕೇರಿಗೆ ಆಗಮಿಸಿದ್ದ 45 ವರ್ಷದ ಮಹಿಳೆಗೆ v ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮುಂಬಯಿಯಲ್ಲಿ ಹೋಂ ನರ್ಸ್ ಆಗಿದ್ದ ಮಹಿಳೆಯು ಮೇ 14ರಂದು ಮಂಗಳೂರು ತನಕ ಖಾಸಗಿ ಟ್ಯಾಕ್ಸಿಯಲ್ಲಿ ಮಂಗಳೂರು ಮತ್ತು ಉಡುಪಿ ಜಿಲ್ಲೆಯವರೊಂದಿಗೆ ಬಂದಿದ್ದರು. ಬಳಿಕ ಮಂಗಳೂರಿನ ಪೊಲೀಸರು ಸಂಪಾಜೆಯವರೆಗೆ ಟ್ಯಾಕ್ಸಿಯಲ್ಲಿ ಕಳುಹಿಸಿದ್ದಾರೆ. ಮೇ 16ರಂದು ರಾತ್ರಿ 9 ಗಂಟೆಗೆ ಅವರು ಸಂಪಾಜೆ ಚೆಕ್ಪೋಸ್ಟ್ ತಲುಪಿದ್ದರು. ಅಲ್ಲಿ ಆರೋಗ್ಯ ತಪಾಸಣೆ ಮಾಡಿದಾಗ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕರೆತರಲಾಗಿದೆ. ಗಂಟಲ ದ್ರವದ ಪರೀಕ್ಷಾ ವರದಿ ಇಂದು ಬಂದಿದ್ದು ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಮಂಗಳೂರಿನಿಂದ ಸಂಪಾಜೆವರೆಗೆ ಟ್ಯಾಕ್ಸಿಯಲ್ಲಿ ಕರೆದುಕೊಂಡು ಬಂದ ವಾಹನ ಚಾಲಕರ ಬಗ್ಗೆಯೂ ದ.ಕ. ಡಿಸಿಗೆ ಮಾಹಿತಿ ನೀಡಲಾಗಿದೆ. ಮಹಿಳೆ ಎಲ್ಲಿಯೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದಿರದ ಕಾರಣ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶವಿರುವುದಿಲ್ಲ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ