ಕಸ್ತೂರಿರಂಗನ್‌ ವರದಿಗೆ ವಿರೋಧ, ಸಭೆಯಲ್ಲಿ ನಿರ್ಣಯ

Team Udayavani, Apr 13, 2017, 4:55 PM IST

nidtha-grama-panchayath.jpg

ಶನಿವಾರಸಂತೆ: ಪಶ್ಚಿಮಘಟ್ಟಗಳ ಸಂರಕ್ಷಣೆ ಕುರಿತಾಗಿ ಕಸ್ತೂರಿರಂಗನ್‌ ವರದಿಯಲ್ಲಿ ಉಲ್ಲೇಖವಾಗಿರುವ ಸಾಧಕ-ಬಾಧಕಗಳ ಕುರಿತು ರಾಜ್ಯ ಸರಕಾರ ಕಸ್ತೂರಿರಂಗನ್‌ ವರದಿಗೆ ಒಳಪಟ್ಟಿರುವ ಗ್ರಾ.ಪಂ.ಗಳಲ್ಲಿ ವರದಿಯ ಪರ ಮತ್ತು ವಿರೋಧಗಳ ಬಗ್ಗೆ ಸಭೆ ನಡೆಸುವಂತೆ ಪ್ರತಿಯೊಂದು ಗ್ರಾ.ಪಂ.ಗಳಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಮೀಪದ ನಿಡ್ತ ಗ್ರಾ.ಪಂ.ನಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ.ಮುಸ್ತಾಫ‌ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆಯನ್ನು ನಡೆಸಲಾಯಿತು. 

ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟ ಸಾಲು ಪಶ್ಚಿಮಘಟ್ಟ ವ್ಯಾಪ್ತಿಗೆ ಒಳಪಡುತ್ತದೆ, ಕಸ್ತೂರಿರಂಗನ್‌ ವರದಿಗೆ ಮಾಲಂಬಿ ಬೆಟ್ಟಸಾಲಿನಲ್ಲಿರುವ ತಪ್ಪಲಿನ ಗ್ರಾಮಗಳನ್ನು ಈಗಾಗಲೆ ಒಳಪಡಿಸಲಾಗಿದೆ, ಪಶ್ಚಿಮಘಟ್ಟ ಬೆಟ್ಟಸಾಲಿನಿಂದ 10 ಕಿ.ಮೀ.ದೂರದಲ್ಲಿರುವ ಗ್ರಾಮಗಳು ಕಸ್ತೂರಿರಂಗನ್‌ ವರದಿ ವ್ಯಾಪ್ತಿಗೆ ಒಳಪಡುವ ಹಿನ್ನೆಲೆಯಲ್ಲಿ ನಿಡ್ತ ಗ್ರಾ.ಪಂ.ಯೂ ಒಳಪಡುತ್ತದೆ. ಈ ಕುರಿತು ವರದಿಯಲ್ಲಿರುವ ಸಾಧಕ-ಬಾಧಕಗಳ ಬಗ್ಗೆ ಗ್ರಾಮಸ್ಥರ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಗ್ರಾ.ಪಂ. ಪಿ.ಡಿ.ಒ ಪ್ರತಿಮಾ ಅವರು ಕಸ್ತೂರಿರಂಗನ್‌ ವರದಿಯಲ್ಲಿರುವ ಉಲ್ಲೇಖ, ಇದರಿಂದ ಜನರಿಗಾಗುವ ಲಾಭ-ನಷ್ಟಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಚರ್ಚಿಸಿದ ಗ್ರಾಮಸ್ಥರು ಕಸ್ತೂರಿರಂಗನ್‌ ವರದಿಯಲ್ಲಿ ಬಹಳಷ್ಟು ವಿಚಾರದಲ್ಲಿ ಸಾರ್ವಜನಿಕರಿಗೆ, ರೈತರಿಗೆ, ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತದೆ, ಈ ನಿಟ್ಟಿನಲ್ಲಿ ಕಸ್ತೂರಿರಂಗನ್‌ ವರದಿಯಲ್ಲಿ ಬಾಧಕವಾಗುವ ಸಾಧ್ಯತೆ ಹೆಚ್ಚಿರುವುದರಿಂದ ವರದಿಯನ್ನು ವಿರೋಧಿಸಬೇಕೆಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಸಭೆಯಲ್ಲಿ ವರದಿಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಯಿತು ಹಾಗೂ ಸಭೆಯಲ್ಲಿ ನಿರ್ಣಯವಾದ ವರದಿಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸುವಂತೆಯೂ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದ ಜಿ.ಪಂ. ಸದಸ್ಯೆ ಸರೋಜಮ್ಮ ಮಾತನಾಡಿ ಈ ವರದಿಯನ್ನು ವಿರೋಧಿಸುವ ಮೂಲ ಕೊಡಗು ಜಿಲ್ಲೆ ಪೂರ್ತಿಯಾಗಿ ಕಸ್ತೂರಿರಂಗನ್‌ ವರದಿಯನ್ನು ವಿರೋಧಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯೆ ಲೀಲಾವತಿ ಮಹೇಶ್‌, ನೋಡೆಲ್‌ ಅಧಿಕಾರಿ ಸತೀಶ್‌, ಗ್ರಾ.ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.