ಕಿರಿಕೊಡ್ಲಿ ಮಠ: ಕೆರೆಯಾದ ರಸ್ತೆ

Team Udayavani, Jul 30, 2019, 5:30 AM IST

ಮಡಿಕೇರಿ : ಕೊಡ್ಲಿಪೇಟೆ ಸಮೀಪದ ಊರುಗುತ್ತಿ ಗ್ರಾಮಕ್ಕೆ ತೆರಳುವ ರಸ್ತೆ ಕಿರಿಕೊಡ್ಲಿ ಮಠ ಶಾಲೆಯ ಮುಂಭಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಗಳ ಹೊಂಡಗಳಲ್ಲಿ ತುಂಬಿಕೊಂಡಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಗ್ರಾಮಸ್ಥರು ಹಾಗೂ ಸಾರ್ವನಿಕರು ಒತ್ತಾಯಿಸಿದ್ದಾರೆ.

ಊರುಗುತ್ತಿ ಗ್ರಾಮಕ್ಕೆ ತೆರಳುವ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತು ಸಂಪೂರ್ಣ ಕೆಸರುಮಯವಾಗಿದ್ದು, ಶಾಲಾ ಮಕ್ಕಳು, ವಾಹನಗಳ ಸವಾರರು ಹಾಗೂ ಸಾರ್ವಜನಿಕರಿಗೆ ನಡೆದಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾವಾಗಿದೆ. ಇದರಿಂದ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಲೇ ಸಂಚರಿಸುವ ಪರಿಸ್ಥಿತಿ ಎದುರಾಗಿದೆ. ಈ ರಸ್ತೆಯಲ್ಲಿ ಶಾಲಾ, ಕಾಲೇಜು ದೇವಸ್ಥಾನ, ಚರ್ಚ್‌ಗಳಿರುವುದರಿಂದ ಈ ಮಾರ್ಗವಾಗಿ ದಿನಂಪ್ರತಿ ಸಾವಿರಾರು ಮಂದಿ ನಡೆದಾಡುತ್ತಿದ್ದು, ವಾಹನಗಳ ಸಂಚಾರವು ಹೆಚ್ಚಾಗಿದೆ. ಈ ಗ್ರಾಮ ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿರುವ ಶಾಲಾ ಕಾಲೇಜಿಗೆ ಮಕ್ಕಳು ನಡೆದು ಬರುವ‌ವರು. ರಸ್ತೆ ಸಂಪೂರ್ಣ ಗುಂಡಿಯಿಂದ ಕೂಡಿದ್ದು, ಮಳೆ ಬಂದಾಗ ನೀರು ನಿಂತು ನಡೆದಾಡಲು ಅಸಾಧ್ಯವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ